Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಹೆಚ್ಚು ಶಬ್ದ ಮಾಡಿ ಮಿಡತೆ ಓಡಿಸಿ’...

‘ಹೆಚ್ಚು ಶಬ್ದ ಮಾಡಿ ಮಿಡತೆ ಓಡಿಸಿ’ ರೈತರಿಗೆ ಸಹಾಯಕ ಕೃಷಿ ನಿರ್ದೇಶಕರ ಸಲಹೆ

ವಾರ್ತಾಭಾರತಿವಾರ್ತಾಭಾರತಿ1 Jun 2020 10:33 PM IST
share

ಮಂಗಳೂರು, ಜೂ.1: ಇತ್ತೀಚೆಗೆ ಮಿಡತೆ ಕೀಟ ಹಾವಳಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಕಾಣಿಸಿಕೊಂಡಿದ್ದರೂ ಅವು ಮರು ಭೂವಿಯ ಮಿಡತೆಗಳಲ್ಲ. ಆದಾಗ್ಯೂ, ಮಿಡತೆಗಳು ಕಂಡುಬಂದಲ್ಲಿ ಡ್ರಮ್/ ಪಾತ್ರೆಗಳನ್ನು ಬಡಿದು ಹೆಚ್ಚು ಶಬ್ದವನ್ನು ಮಾಡಿ ಮಿಡತೆ ಸಮೂಹವನ್ನು ಇತರೆಡೆಗೆ ಓಡಿಸಬಹುದು ಎಂದು ಮಂಗಳೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ರೈತರಿಗೆ ಸಲಹೆ ನೀಡಿದ್ದಾರೆ.

 ಬೇವಿನ ಮೂಲದ ಕೀಟನಾಶಕಗಳನ್ನು (ಶೇ.0.15 ಇ.ಸಿ 3ಎಂ.ಎಲ್/ಲೀ) ಬೆಳೆಗಳಿಗೆ ಸಿಂಪಡಿಸುವುದರಿಂದ ಕೀಟವು ಬೆಳೆ ಹಾನಿ ಮಾಡುವುದನ್ನು ಕಡಿಮೆ ಮಾಡಬಹುದು. ಕೀಟಬಾಧಿತ ಪ್ರದೇಶದಲ್ಲಿ ಹೊಗೆ ಮತ್ತು ಬೆಂಕಿಯನ್ನು ಹಾಕುವುದರಿಂದಲೂ ಕೀಟವನ್ನು ಬೇರೆಡೆಗೆ ಓಡಿಸಬಹುದು ಎನ್ನುತ್ತಾರೆ ಕೃಷಿ ಸಹಾಯಕ ನಿರ್ದೇಶಕರು.

ಕೀಟವು ಮರಿಹುಳುವಾಗಿದ್ದಲ್ಲಿ ಬಾಧಿತ ಪ್ರದೇಶದಲ್ಲಿ ಕನಿಷ್ಠ 2 ಅಡಿ ಆಳ ಮತ್ತು 3 ಅಡಿ ಅಗಲದ ಗುಂಡಿಗಳನ್ನು ನಿರ್ಮಿಸಬೇಕು. ಮರಿ ಹುಳುಗಳನ್ನು ಸೆರೆ ಹಿಡಿದು ನಾಶಪಡಿಸಬಹುದು. ಮಿಡತೆ ಹಗಲಿನಲ್ಲಿ ಚಲಿಸಿ ರಾತ್ರಿವೇಳೆ ಮರಗಿಡಗಳ ಮೇಲೆ ಆಶ್ರಯ ಪಡೆಯುವುದರಿಂದ ಟ್ರಾಕ್ಟರ್‌ನ ಸಹಾಯದಿಂದ ಸ್ಪ್ರೇಯರ್‌ಗಳ ಮೂಲಕ ಕೀಟನಾಶಕಗಳನ್ನು ಸಿಂಪಡಿಸಬಹುದು. ಆದರೆ ಈ ಕೀಟನಾಶಕಗಳನ್ನು ಜಲಮೂಲಗಳ ಸಮೀಪ ಸಿಂಪಡಿಸದಂತೆ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ.

ಬೆಳೆ ಅಥವಾ ಮರಗಳ ಮೇಲೆ ಮರುಭೂಮಿ ಮಿಡತೆ ಕಂಡುಬಂದಲ್ಲಿ ಕೀಟನಾಶಕ ಕ್ಲೊರೋಪೈರಿಪಾಸ್ ಶೇ.20 ಎ.ಸಿ ಪ್ರತೀ ಹೆಕ್ಟರ್‌ಗೆ 1.2 ಲೀ., ಕೀಟನಾಶಕ ಕ್ಲೊರೋಪೈರಿಪಾಸ್ ಶೇ.50 ಇ.ಸಿ. ಪ್ರತೀ ಹೆಕ್ಟರ್‌ಗೆ 480 ಎಂ.ಎಲ್., ಕೀಟನಾಶಕ ಡೆಲ್ಟಮೆಥ್ರಿನ್ ಶೇ.2.8 ಇ.ಸಿ ಪ್ರತಿ ಹೆಕ್ಟೇರ್‌ಗೆ 450 ಎಂ.ಎಲ್., ಕೀಟನಾಶಕ ಫಿಪ್ರೊನಿಲ್ ಶೇ.5 ಇ.ಸಿ ಪ್ರತಿ ಹೆಕ್ಟೇರ್‌ಗೆ 125 ಎಂ.ಎಲ್., ಕೀಟನಾಶಕ ಲಾಮ್ಡಾಸಹಲೋಥ್ರಿನ್ ಶೇ.5 ಇ.ಸಿ. ಪ್ರತಿ ಹೆಕ್ಟೇರ್‌ಗೆ 400 ಎಂ.ಎಲ್., ಕೀಟನಾಶಕ ಲಾಮ್ಡಾಸಹಲೋಥ್ರಿನ್ ಶೇ.10 ಡಬ್ಲೂಪಿ ಪ್ರತಿ ಹೆಕ್ಟೇರ್‌ಗೆ 200 ಗ್ರಾಂ, ಕೀಟನಾಶಕ ಮಲಾಥಿಯಾನ್ ಶೇ.50 ಇ.ಸಿ. ಪ್ರತಿ ಹೆಕ್ಟೇರ್‌ಗೆ 1.85 ಲೀ., ಕೀಟನಾಶಕ ಮಲಾಥಿಯಾನ್ ಶೇ.25 ಡಬ್ಲೂಪಿ ಪ್ರತಿ ಹೆಕ್ಟೇರ್‌ಗೆ 3.7 ಕಿ.ಗ್ರಾಂ ಕೀಟನಾಶಕಗಳನ್ನು ಬಳಸಿ ಹತೋಟಿ ಮಾಡಬಹುದು ಎಂದು ಮಂಗಳೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X