Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ ಅರ್ಬನ್ ಬ್ಯಾಂಕಿನ ನಿವೃತ್ತ...

ಭಟ್ಕಳ ಅರ್ಬನ್ ಬ್ಯಾಂಕಿನ ನಿವೃತ್ತ ಪ್ರಧಾನ ವ್ಯವಸ್ಥಾಕ ಸುಭಾಷ್ ಶೆಟ್ಟಿಗೆ ಬೀಳ್ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ1 Jun 2020 10:59 PM IST
share
ಭಟ್ಕಳ ಅರ್ಬನ್ ಬ್ಯಾಂಕಿನ ನಿವೃತ್ತ ಪ್ರಧಾನ ವ್ಯವಸ್ಥಾಕ ಸುಭಾಷ್ ಶೆಟ್ಟಿಗೆ ಬೀಳ್ಕೊಡುಗೆ

ಭಟ್ಕಳ: ರಾಜ್ಯದಲ್ಲಿನ ಪ್ರತಿಷ್ಟಿತ ಅರ್ಬನ್ ಕೋ-ಅಪರೇಟಿವ್ ಬ್ಯಾಂಕುಗಳಲ್ಲಿ ಒಂದಾದ ಭಟ್ಕಳ ಅರ್ಬನ್ ಬ್ಯಾಂಕಿನಲ್ಲಿ ಸುಧೀರ್ಘ ಸೇವೆ ಸಲ್ಲಿಸಿ ಪ್ರಧಾನ ವ್ಯವಸ್ಥಾಪಕ ಹುದ್ದೆಯನ್ನು ಅಲಂಕರಿಸಿ ನಿವೃತ್ತರಾದ ಸುಭಾಷ ಎಂ. ಶೆಟ್ಟಿಯವರನ್ನು ಬ್ಯಾಂಕಿನ ಸಿಬ್ಬಂದಿಗಳ ಪರವಾಗಿ ಹಾರ ಹಾಕಿ, ಶಾಲು ಹೊದಿಸಿ, ನೆನಪಿನ ಕಾಣಿಕೆಯನ್ನು ನೀಡಿ ಬೀಳ್ಕೊಡಲಾಯಿತು.

ಬ್ಯಾಂಕಿನ ಹಫಿಸ್ಕಾ ಹಾಲ್‍ನಲ್ಲಿ ಜರುಗಿದ ಬೀಳ್ಕೊಡುಗೆ ಸಮಾರಂಭದಲ್ಲಿ ಬ್ಯಾಂಕಿನ ವತಿಯಿಂದ ನೀಡಿದ ಗೌರವವನ್ನು ಸ್ವೀಕರಿಸಿ ಮಾತ ನಾಡುತ್ತಾ ತಮ್ಮ ಸುಧೀರ್ಘ 37 ವರ್ಷಗಳ ಸೇವೆಯನ್ನು ಸ್ಮರಿಸಿದರು. ಬ್ಯಾಂಕಿನಲ್ಲಿ ವಿವಿಧ ಹುದ್ದೆಯಲ್ಲಿ ಸೇವೆ ಸಲ್ಲಿಸಲು ಅವಕಾಶವನ್ನು ಮಾಡಿ ಕೊಟ್ಟ ಬ್ಯಾಂಕಿನ ಆಡಳಿತ ಮಂಡಳಿಯವರು ಹಾಗೂ ತಮ್ಮ ಹಿರಿಯ ಅಧಿಕಾರಿಗಳನ್ನು ನೆನೆಸಿದ ಅವರು, ತಮಗೆ ಉತ್ತವಾಗಿ ಕಾರ್ಯ ನಿರ್ವಹಿಸಲು ಸಹಕರಿಸಿದ ಸಿಬ್ಬಂದಿಗಳಿಗೂ ಕೂಡಾ ಕೃತಜ್ಞತೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ನಿವೃತ್ತರಾದ ಕಿರಿಯ ಸಹಾಯಕ ಮುಕುಂದ ತಡಿಯಾರ್ ಹಾಗೂ ರೆಕಾರ್ಡ ಕೀಪರ್/ಟೆಲ್ಲರ್ ಲಕ್ಷ್ಮಣ ವಿ. ಮಡಿವಾಳ ಇವರನ್ನು ಕೂಡಾ ಬ್ಯಾಂಕಿನ ವತಿಯಿಂದ ಹಾರ ಹಾಕಿ, ಶಾಲು ಹೊದಿಸಿ, ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಹಿರಿಯ ನಿರ್ದೇಶಕ ಮಾಸ್ತಿ ಎಂ. ಮೊಗೇರ, ಬ್ಯಾಂಕಿನ ಉನ್ನತ ಹುದ್ದೆಯ ಅಧಿಕಾರವನ್ನು ವಹಿಸಿಕೊಂಡ ಶಂಭು ಎನ್. ಹೆಗಡೆ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಶಾಖೆಯ ವ್ಯವಸ್ಥಾಪಕ ಇಸ್ಮಾಯಿಲ್, ಶಾಖಾ ವ್ಯವಸ್ಥಾಪಕರುಗಳಾದ ಜಿ.ಪಿ. ಪ್ರಭು, ವಿನೋದ ಪ್ರಭು, ಪ್ರಶಾಂತ್ ಮುರ್ಡೇಶ್ವರ ಸೇರಿದಂತೆ ಶಾಖಾ ವ್ಯವಸ್ಥಾಪಕರುಗಳು, ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹಿರಿಯ ವ್ಯವಸ್ಥಾಪಕ ವಸಂತ ಎಸ್. ಶಾಸ್ತ್ರಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X