ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಸಹೋದರಿ ಮಹದೇವಮ್ಮ ನಿಧನ

ಮೈಸೂರು,ಜೂ.1: ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಸಹೋದರಿ ಮಹದೇವಮ್ಮ (70) ಸೋಮವಾರ ಸಂಜೆ ನಿಧನರಾಗಿದ್ದಾರೆ.
ನಗರದ ಗಾಂಧಿನಗರದಲ್ಲಿ ವಾಸವಾಗಿದ್ದ ಅವರು ಹಲವರು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು ಎನ್ನಲಾಗಿದೆ.
ಮೃತರು ಮೂವರು ಗಂಡು ಮಕ್ಕಳು, ಇಬ್ಬರು ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ ಗಾಂಧಿನಗರದ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಹಾದೇವಮ್ಮ ಅವರ ನಿಧನಕ್ಕೆ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ.ಬಿ.ಜೆ.ವಿಜಯಕುಮಾರ್, ನಂಜನಗೂಡು ನಗರಸಭಾ ಸದಸ್ಯ ಎಸ್.ಪಿ.ಮಹೇಶ್ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
Next Story





