ಮೃತ ರೈತ ಕುಟುಂಬದ ಸದಸ್ಯರಿಗೆ 5ಲಕ್ಷ ರೂ.ಚೆಕ್ ವಿತರಿಸಿದ ಗೋವಿಂದ ಕಾರಜೋಳ
ಬಾಗಲಕೋಟೆ, ಜೂ. 2: ಜಿಲ್ಲೆಯ ಬಾದಾಮಿ ತಾಲೂಕಿನ ನಂದಕೇಶ್ವರ ಗ್ರಾಮದಲ್ಲಿ ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟ ರೈತ ಬಸಯ್ಯ ಮುಚಖಂಡಿ ಹಾಗೂ ಹೊಸೂರು ಗ್ರಾಮದ ರೈತ ಮಹಿಳೆ ಶಾಂತವ್ವ ಭೋವಿ ಅವರುಗಳ ನಿವಾಸಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸಾಂತ್ವನ ಹೇಳಿ, ತಲಾ 5ಲಕ್ಷ ರೂ.ಗಳ ಪರಿಹಾರದ ಚೆಕ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗೋವಿಂದ ಕಾರಜೋಳ, ರೈತರು ಮುಂಗಾರು ಮಳೆ, ಗಾಳಿ, ಸಿಡಿಲ ಅಬ್ಬರದ ಹಿನ್ನೆಲೆಯಲ್ಲಿ ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಮಳೆ ಆರಂಭಕ್ಕೆ ಮೊದಲೇ ಸಾಧ್ಯವಾದಷ್ಟು ಮನೆ ಸೇರಿಕೊಳ್ಳಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಸೂಕ್ತ ಆಶ್ರಯ ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು.
ಇದೇ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ನಂದಿಕೇಶ್ವರ ಗ್ರಾಮದ ಪ್ರಭಾವತಿ ಹಂಗರಗಿ ಅವರ ನಿವಾಸಕ್ಕೂ ಭೇಟಿ ನೀಡಿ ಮೃತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಸಂಸದ ಪಿ.ಸಿ.ಗದ್ದಿಗೌಡರ, ಡಿಸಿ ಕ್ಯಾಪ್ಟನ್ ರಾಜೇಂದ್ರ, ಎಸ್ಪಿ ಲೋಕೇಶ್ ಜಗಲಾಸರ್ ಬಾದಾಮಿ, ತಹಶಿಲ್ದಾರ್ ಇಂಗಳೆ ಸೇರಿದಿಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.





