Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಟಾಕಿ ತುಂಬಿದ್ದ ಅನಾನಸು ನೀಡಿದ...

ಪಟಾಕಿ ತುಂಬಿದ್ದ ಅನಾನಸು ನೀಡಿದ ಕಿಡಿಗೇಡಿಗಳು: ಸ್ಫೋಟದಿಂದ ಗಾಯಗೊಂಡು ನದಿ ನೀರಲ್ಲೇ ಅಸುನೀಗಿದ ಗರ್ಭಿಣಿ ಆನೆ

ಮನುಷ್ಯನ ವಿಕೃತಿಗೆ ಮೂಕಪ್ರಾಣಿ ಬಲಿ

ವಾರ್ತಾಭಾರತಿವಾರ್ತಾಭಾರತಿ2 Jun 2020 11:02 PM IST
share
ಪಟಾಕಿ ತುಂಬಿದ್ದ ಅನಾನಸು ನೀಡಿದ ಕಿಡಿಗೇಡಿಗಳು: ಸ್ಫೋಟದಿಂದ ಗಾಯಗೊಂಡು ನದಿ ನೀರಲ್ಲೇ ಅಸುನೀಗಿದ ಗರ್ಭಿಣಿ ಆನೆ

ಕೊಚ್ಚಿ: ಸ್ಥಳೀಯ ಜನರು ಪಟಾಕಿಗಳು ತುಂಬಿದ್ದ ಅನಾನಸನ್ನು ಗರ್ಭಿಣಿ ಆನೆಯೊಂದಕ್ಕೆ ನೀಡಿದ್ದು, ಅದು ಸ್ಫೋಟಗೊಂಡ ಪರಿಣಾಮ ಗರ್ಭಿಣಿ ಆನೆ ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ. ಆನೆ ಅನಾನಸು ತಿನ್ನುತ್ತಿದ್ದಾಗ ಪಟಾಕಿ ಸ್ಫೋಟಗೊಂಡಿದ್ದು, ಗಂಭೀರ ಗಾಯಗಳಾಗಿತ್ತು ಎಂದು ತಿಳಿದುಬಂದಿದೆ.

ಅರಣ್ಯಾಧಿಕಾರಿಯೊಬ್ಬರು ಈ ಬಗ್ಗೆ ಫೇಸ್ ಬುಕ್ ಪೋಸ್ಟ್ ಹಾಕಿದ ನಂತರ ಘಟನೆ ಬೆಳಕಿಗೆ ಬಂದಿದೆ.

ಆಹಾರ ಅರಸಿ ಕಾಡಿನಿಂದ ಬಂದಿದ್ದ ಗರ್ಭಿಣಿ ಆನೆ ಸ್ಥಳೀಯ ಗ್ರಾಮಕ್ಕೆ ಬಂದಿತ್ತು. ಅದು ಗ್ರಾಮದ ಬೀದಿಯಲ್ಲಿ ನಡೆಯುತ್ತಿರುವಾಗ ಕೆಲ ಕಿಡಿಗೇಡಿಗಳು ಪಟಾಕಿ ತುಂಬಿದ್ದ ಅನಾನಸು ನೀಡಿದ್ದರು.

“ಆಕೆ ಎಲ್ಲರನ್ನೂ ನಂಬಿದ್ದಳು. ಆಕೆ ಅನಾನಸು ತಿಂದಾಗ ಅದು ಸ್ಫೋಟಗೊಂಡಿತ್ತು. ಆಕೆ ತನ್ನ ಬಗ್ಗೆ ಯೋಚಿಸಿ ಆಘಾತಗೊಂಡಿರಲಿಕ್ಕಿಲ್ಲ. ಆದರೆ ಜನ್ಮ ನೀಡಬೇಕಿದ್ದ 18 -20 ತಿಂಗಳ ಮಗುವನ್ನು ನೆನೆದು ಆಘಾತಗೊಂಡಿರಬಹುದು” ಎಂದು ಅರಣ್ಯಾಧಿಕಾರಿ ಮೋಹನ್ ಕೃಷ್ಣನ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ಸ್ಫೋಟದ ತೀವ್ರತೆಗೆ ಆನೆಯ ಬಾಯಿ ಮತ್ತು ನಾಲಗೆಗೆ ಗಂಭೀರ ಗಾಯಗಳಾಗಿತ್ತು. ಹಸಿವು ಮತ್ತು ನೋವಿನಿಂದ ಆನೆ ಗ್ರಾಮವಿಡೀ ನಡೆದಿತ್ತು. ಗಂಭೀರ ಗಾಯಗಳ ಕಾರಣ ಏನನ್ನೂ ತಿನ್ನಲು ಕೂಡ ಸಾಧ್ಯವಾಗುತ್ತಿರಲಿಲ್ಲ.

“ನೋವಿನಿಂದ ಚಡಪಡಿಸಿ ಆಕೆ ಗ್ರಾಮವಿಡೀ ಓಡಿದರೂ ಯಾರಿಗೂ ಹಾನಿ ಮಾಡಿಲ್ಲ.  ಯಾವುದೇ ಮನೆಗಳ ಮೇಲೆ ದಾಳಿ ಮಾಡಿಲ್ಲ” ಎಂದವರು ಹೇಳಿದ್ದಾರೆ.

ನಂತರ ವೆಲ್ಲಿಯಾರ್ ನದಿಗಿಳಿದ ಆನೆ ನೀರಿನಲ್ಲಿ ನಿಂತಿದ್ದು, ಅದರ ಫೋಟೊಗಳು ವೈರಲ್ ಆಗಿವೆ. ನೋವಿನಿಂದ ಸ್ವಲ್ಪವಾದರೂ ಮುಕ್ತಿ ಪಡೆಯಲು ಆನೆ ಈ ರೀತಿ ಮಾಡಿರಬಹುದು ಎನ್ನಲಾಗಿದೆ. ಗಾಯಗಳ ಮೇಲೆ ಕ್ರಿಮಿ, ಕೀಟಗಳ ದಾಳಿಯಿಂದ ಪಾರಾಗಲು ಈ ರೀತಿ ಮಾಡಿದೆ ಎಂದು ಅರಣ್ಯಾಧಿಕಾರಿ ಹೇಳುತ್ತಾರೆ.

ನದಿ ನೀರಿನಿಂದ ಆನೆಯನ್ನು ಹೊರತರಲು ಇನ್ನೆರಡು ಆನೆಗಳನ್ನು ಸ್ಥಳಕ್ಕೆ ಕರೆತರಲಾಯಿತು. ಆದರೆ ಏನನ್ನೂ ಮಾಡಲು ಗಾಯಾಳು ಆನೆ ಬಿಡಲಿಲ್ಲ. ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿದರೂ ಮೇ 27ರಂದು ಸಂಜೆ 4 ಗಂಟೆಗೆ ಗರ್ಭಿಣಿ ಆನೆ ನದಿ ನೀರಲ್ಲಿ ನಿಂತಲ್ಲೇ ಪ್ರಾಣ ಕಳೆದುಕೊಂಡಿತು.

ನಂತರ ಆನೆಯ ಮೃತದೇಹವನ್ನು ಟ್ರಕ್ ನಲ್ಲಿ ಸಾಗಿಸಿ ಅಂತ್ಯಕ್ರಿಯೆ ನಡೆಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X