Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ಸಂಚರಿಸಲು...

ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ಸಂಚರಿಸಲು ಜನರ ಹಿಂದೇಟು!

ವಾರ್ತಾಭಾರತಿವಾರ್ತಾಭಾರತಿ2 Jun 2020 11:24 PM IST
share
ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ಸಂಚರಿಸಲು ಜನರ ಹಿಂದೇಟು!

ಬೆಂಗಳೂರು, ಜೂ.2: ಸುರ್ದೀಘ ಲಾಕ್‍ಡೌನ್‍ನಿಂದಾಗಿ ಕಂಗೆಟ್ಟಿದ್ದ ಕೆಎಸ್ಸಾರ್ಟಿಸಿ ಮರು ಸಂಚಾರವನ್ನು ಆರಂಭಿಸಿದ್ದರೂ ಕೊರೋನ ಭೀತಿಯಿಂದ ಬಸ್‍ಗಳಲ್ಲಿ ಪ್ರಯಾಣಿಸಲು ಪ್ರಯಾಣಿಕರು ಹಿಂದೇಟು ಹಾಕುತ್ತಿದ್ದಾರೆ.

ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಆದರೂ ಪ್ರಯಾಣಿಕರಿಗೆ ಅನುಕೂಲವಾಗಲೆಂದು ಸರಕಾರದ ಸೂಚನೆ ಮೇರೆಗೆ ಕೆಎಸ್ಸಾರ್ಟಿಸಿ ಸಾಕಷ್ಟು ಬಸ್‍ಗಳ ಸಂಚಾರ ಆರಂಭಿಸಿದೆ.

ಮೊದಲೆರಡು ದಿನಗಳಲ್ಲಿ ಅಲ್ಲಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ಹೊರಡಲು ಕೆಎಸ್ಸಾರ್ಟಿಸಿಯಲ್ಲಿ ಪಯಣಿಸಿದ್ದರೂ ಆ ಬಳಿಕ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಇಳಿಮುಖವಾಗಿದ್ದು, ನಷ್ಟದಲ್ಲಿ ಬಸ್‍ಗಳನ್ನು ಓಡಿಸಬೇಕಾದ ಪರಿಸ್ಥಿತಿ ಎದುರಾಗಿದೆ.

ಕೊರೋನ ಸಂಕಷ್ಟದಲ್ಲೂ ಮುಂಜಾಗ್ರತೆ ವಹಿಸಿ, ಸಾಮಾಜಿಕ ಅಂತರ ಪಾಲನೆ ಮಾಡುವ ಮೂಲಕ ಕಡಿಮೆ ಸಂಖ್ಯೆಯಲ್ಲಿ ಪ್ರಯಾಣಿಕರಿಗೆ ಬಸ್‍ಗಳಲ್ಲಿ ಅವಕಾಶ ಮಾಡಿಕೊಡಲಾಗಿದೆ. ಆದುದರಿಂದ ಕೆಎಸ್ಸಾರ್ಟಿಸಿ ಬೊಕ್ಕಸಕ್ಕೂ ನಷ್ಟವಾಗುತ್ತಿದ್ದು, ಇದೇ ರೀತಿ ಪ್ರಯಾಣಿಕರ ನಿರುತ್ಸಾಹದಲ್ಲಿಯೇ ಎಷ್ಟು ದಿನ ಬಸ್‍ಗಳನ್ನು ಖಾಲಿ ಓಡಿಸಬೇಕು ಎಂಬುದು ಚಿಂತೆ ಮಾಡುವಂತೆ ಮಾಡಿದೆ.

ಮೇ 19ರಿಂದ ಜೂನ್ 1ರವರೆಗೆ ರಾಜ್ಯಾದ್ಯಂತ 39,383 ಕೆಎಸ್ಸಾರ್ಟಿಸಿ ಬಸ್‍ಗಳಲ್ಲಿ ಒಟ್ಟು ಸಂಖ್ಯೆ 12,25,884 ಮಂದಿ ಪ್ರಯಾಣಿಸಿದ್ದಾರೆ. ಇನ್ನು ಬೆಂಗಳೂರಿನಿಂದ ಹೊರಗೆ ಹೋಗುತ್ತಿರುವವರ ಸಂಖ್ಯೆ ತೀರಾ ಕಡಿಮೆಯಾಗಿದೆ. ಬೆಂಗಳೂರಿಗೆ ಬರುತ್ತಿರುವವರ ಸಂಖ್ಯೆ ಹೆಚ್ಚಿದೆ. ಮುಂಗಡ ಟಿಕೆಟ್ ಬುಕ್ಕಿಂಗ್‍ನಲ್ಲಿಯೂ ಭಾರೀ ಕುಸಿತ ಕಂಡಿದೆ. 

ಸಿಬ್ಬಂದಿಗೆ ವೇತನ ರಜೆ ಬಗ್ಗೆ ಚಿಂತನೆ: ಲಾಕ್‍ಡೌನ್‍ನಿಂದ ಸಂಕಷ್ಟ ಅನುಭವಿಸುತ್ತಿರುವ ಕೆಎಸ್ಸಾರ್ಟಿಸಿ ಆರ್ಥಿಕ ಹೊರೆಯನ್ನು ತಪ್ಪಿಸಲು ವಿವಿಧ ಮಾರ್ಗೋಪಾಯಗಳ ಮೊರೆ ಹೋಗುತ್ತಿದ್ದು, ಇದಕ್ಕಾಗಿ ಅಧಿಕಾರಿಗಳು ತೀವ್ರ ಕಸರತ್ತು ನಡೆಸಿದ್ದಾರೆ. ಕೆಎಸ್ಸಾರ್ಟಿಸಿ ತನ್ನ ಸಿಬ್ಬಂದಿಗೆ ವೇತನ ರಹಿತ ಕಡ್ಡಾಯ ರಜೆ ನೀಡಲು ಚಿಂತನೆ ನಡೆಸಿದೆ.

ಆರ್ಥಿಕ ಹೊರೆ ತಪ್ಪಿಸಲು ಶೇಕಡಾ 50ರಷ್ಟು ಸಿಬ್ಬಂದಿಗೆ ನಾಲ್ಕು ತಿಂಗಳ ಕಡ್ಡಾಯ ರಜೆ ನೀಡುವ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎನ್ನಲಾಗಿದೆ. 1.20 ಲಕ್ಷ ಸಿಬ್ಬಂದಿಗಳಲ್ಲಿ 60 ಸಾವಿರ ಸಿಬ್ಬಂದಿಗೆ ಕಡ್ಡಾಯವಾಗಿ ರಜೆ ನೀಡಲು ಇಲಾಖೆ ಮುಂದೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಭದ್ರತೆ ಹಾಗೂ ಹೊರ ಗುತ್ತಿಗೆ ನೌಕರರನ್ನು ಕೈ ಬಿಡುವ ಬಗ್ಗೆಯೂ ಇಲಾಖೆ ತೀರ್ಮಾನ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಇಲಾಖೆಯಲ್ಲಿ 50 ವರ್ಷ ಮೇಲ್ಪಟ್ಟವರು, ಮಧುಮೇಹ ಮತ್ತಿತರ ಖಾಯಿಲೆಗಳಿಂದ ಬಳಲುತ್ತಿರುವವರಿಗೆ ರಜೆ ನೀಡುವುದು ಅಥವಾ ಸಂಸ್ಥೆಯಲ್ಲಿರುವ 1.20 ಲಕ್ಷ ಸಿಬ್ಬಂದಿಗೆ ರೊಟೇಷನ್ ಆಧಾರದಲ್ಲಿ ಕರ್ತವ್ಯ ವಹಿಸುವುದು. ಅಂದರೆ ಪ್ರತಿ 15 ದಿನ ಕೆಲಸ ಮಾಡಿದರೆ, ಇನ್ನು 15 ದಿನ ರಜೆ ನೀಡುವುದು ಎಂಬ ಪ್ರಸ್ತಾವನೆ ಸಲ್ಲಿಕೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X