Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಇನ್ನೂ...

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಇನ್ನೂ ತಲುಪದ ‘ಅರಿವು’ ಸಾಲ: ಮುಖ್ಯಮಂತ್ರಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ3 Jun 2020 6:38 PM IST
share

ಮಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮವು ರಾಜ್ಯದ ಅಲ್ಪಸಂಖ್ಯಾತ (ಮುಸ್ಲಿಮ್, ಕ್ರೈಸ್ತ, ಬುದ್ಧ, ಜೈನ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳ ವೃತ್ತಿಪರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ‘ಅರಿವು’ ಸಾಲ ಯೋಜನೆಯನ್ನು ಜಾರಿಗೆ ತಂದಿದೆ. ಕೋರ್ಸು ಮುಗಿದು ಅಥವಾ ಉದ್ಯೋಗ ಪಡೆದು ಒಂದು ವರ್ಷದ ಬಳಿಕ, ತಿಂಗಳ ಕಂತಿನ ರೂಪದಲ್ಲಿ ನಿಗಮಕ್ಕೆ ಮರು ಪಾವತಿ ಮಾಡುವ ಯೋಜನೆಯಿದು. ಈ ಯೋಜನೆಯಿಂದಾಗಿ ರಾಜ್ಯದ ಸಾವಿರಾರು ಪ್ರತಿಭಾವಂತ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಸಿಗುವಂತಾಗಿದೆ ಎಂಬುದು ವಾಸ್ತವ.

ಆದರೆ, 2019-20 ಸಾಲಿನ ಅರಿವು ಸಾಲದ ಮೊತ್ತ ಇನ್ನೂ ವಿದ್ಯಾರ್ಥಿಗಳು ಕಲಿಯುವ ಕಾಲೇಜಿನ ಖಾತೆಗೆ ಜಮಾ ಆಗದಿರುವುದು ರಾಜ್ಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮತ್ತವರ ಪಾಲಕರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕೋವಿಡ್-19ರ ಲಾಕ್ ಡೌನ್ ನಿಂದಾಗಿ ಕಂಗಾಲಾಗಿರುವ ಸಮುದಾಯದ ಬಡಜನರು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಮುಖ್ಯಮಂತ್ರಿಯಾಗಿದ್ದಾಗಲೆಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹೆಚ್ಚಿನ ಅನುದಾನಗಳನ್ನು ನೀಡಿ, ಪ್ರೋತ್ಸಾಹಿಸುತ್ತಾ ಬಂದಿರುವ ಬಿ.ಎಸ್. ಯಡಿಯೂರಪ್ಪ ಅತಿ ಶೀಘ್ರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಸಾಲದ ಮೊತ್ತವನ್ನು ಅವರ ಕಾಲೇಜಿನ ಬ್ಯಾಂಕ್ ಖಾತೆಗೆ ಜಮಾ ಆಗಲು ಬೇಕಾದ ತುರ್ತು ಕ್ರಮ ಕೈಗೊಂಡು ಸಹಕರಿಸುವಂತೆ ಮಂಗಳೂರಿನ ಕರಿಯರ್ ಗೈಡೆನ್ಸ್ ಆಂಡ್ ಇನ್ಫೊರ್ಮೇಶನ್ ಸೆಂಟರ್ ನ ಅಧ್ಯಕ್ಷ ಉಮರ್ ಯು.ಎಚ್. ಮನವಿ ಮಾಡಿದ್ದಾರೆ.

ಈ ಹಿಂದೆ ನಿಗದಿತ ಸಮಯಕ್ಕೆ ತಲಪುತ್ತಿದ್ದ ಅರಿವು ಸಾಲದ ಮೊತ್ತ ಈ ವರ್ಷ ನಿಗಮಕ್ಕೆ ಹೊಸ ವ್ಯವಸ್ಥಾಪಕ ನಿರ್ದೇಶಕರು ಅಧಿಕಾರ ಸ್ವೀಕರಿಸಿದ ಮೇಲೆ ವಿಳಂಬವಾಗುತ್ತಿದೆ. ಮೊದಲ ವರ್ಷ ಸಾಲ ಪಡೆದ ವಿದ್ಯಾರ್ಥಿಗಳು ಎರಡನೇ ವರ್ಷದ ಕಲಿಕೆಯ ಸಾಲಕ್ಕೆ ಅರ್ಜಿ ಸಲ್ಲಿಸಬೇಕಾದರೆ ಪಡೆದಿರುವ ಸಾಲದ ಶೇ.12 ಮಾರ್ಜಿನ್ ಮೊತ್ತ (ಅಸಲು ಮತ್ತು ಇತರ ಶುಲ್ಕ)ವನ್ನು ನಿಗಮಕ್ಕೆ ಮರು ಪಾವತಿ ಮಾಡಬೇಕಾಗಿದರುವುದು ನಿಯಮ. ಹೊಸ ನಿರ್ದೇಶಕರು ಈ ನಿಯಮವನ್ನು ತಿದ್ದಿ, ಎರಡನೇ ಅಥವಾ ಮೂರನೇ ವರ್ಷಕ್ಕೆ ಸಾಲ ನವೀಕರಣ ಅರ್ಜಿ ಸಲ್ಲಿಸಬೇಕಾದರೆ ಎರಡು ವರ್ಷಗಳ ಮಾರ್ಜಿನ್ ಮೊತ್ತವನ್ನು ನಿಗಮಕ್ಕೆ ಪಾವತಿಸಬೇಕೆಂಬ ಹೊಸ ನಿಯಮವೊಂದನ್ನು ಈ ವರ್ಷ ಜಾರಿಗೆ ತಂದಿರುತ್ತಾರೆ.

ಈ ನಿಯಮವನ್ನು ವಿದ್ಯಾರ್ಥಿಗಳ ಪಾಲಕರು ಮೊದಲು ತೀವ್ರವಾಗಿ ವಿರೋಧಿಸಿದರೂ. ಸಾಲ ಪಡೆಯಲೇ ಬೇಕಾದ ಅನಿವಾರ್ಯತೆಯಿಂದ ಎರಡು ವರ್ಷಗಳ ಮೊತ್ತವನ್ನು ನಿಗಮಕ್ಕೆ ಪಾವತಿ ಮಾಡಿರುತ್ತಾರೆ. ಆದರೂ, ಈ ತನಕ ಅರಿವು ಸಾಲದ ಮೊತ್ತವನ್ನು ಅರ್ಹ ವಿದ್ಯಾರ್ಥಿಗಳು ಕಲಿಯುವ ಕಾಲೇಜಿನ ಖಾತೆಗೆ ನಿಗಮವು ಜಮಾ ಮಾಡಿಲ್ಲ. ಈ ಮೂಲಕ ನಿಗಮವು ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಡ್ಡಗಾಲು ಹಾಕಿದಂತಾಗಿದೆ. ಎರಡು ವರ್ಷಗಳ ಮಾರ್ಜಿನ್ ಮೊತ್ತ ಪಡೆದೂ ಸಾಲ ಕೊಡುತ್ತಿಲ್ಲವಲ್ಲಾ ಎಂದು ನಿರ್ದೇಶಕರಲ್ಲಿ ಪ್ರಶ್ನಿಸಿದರೆ ‘ಫಂಡ್ ಇಲ್ಲ’ ಎಂಬ ಹಾರಿಕೆಯ ಉತ್ತರ ಸಿಗುತ್ತಿದೆ. 

ಸರಕಾರದ ಅನುದಾನದ ಮೊತ್ತಗಳು ದೇವರಾಜ ಅರಸು ನಿಗಮ ಹಾಗೂ ಪ.ಜಾತಿ ಮತ್ತು ಪ.ಪಂಗಡ ನಿಗಮಗಳಲ್ಲಿ ನೂರು ಶೇಕಡಾ ಬಳಕೆಯಾಗಿದ್ದರೂ, ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಅನುದಾನದಲ್ಲಿ ಸುಮಾರು ಶೇ. 40ರಷ್ಟು ಮೊತ್ತ ಬಳಕೆಯಾಗದೆ ಸರಕಾರಕ್ಕೆ ವಾಪಾಸು ಹೋಗಿದೆ. ಇದಕ್ಕೆ ಹೊಸ ನಿರ್ದೇಶಕರೇ ಕಾರಣ ಎಂಬ ಆರೋಪವೂ ಕೇಳಿ ಬರುತ್ತಿದೆ. ಮೇಲಿನ ದೂರು ಮತ್ತು ಆರೋಪಗಳ ಕುರಿತಂತೆ ತನಿಖೆಗೆ ಆದೇಶ ನೀಡಬೇಕೆಂದೂ ಉಮರ್ ಯು.ಹೆಚ್. ಮನವಿಯಲ್ಲಿ ಮುಖ್ಯಮಂತ್ರಿಯವರನ್ನು ವಿನಂತಿಸಿದ್ದಾರೆ.

ಮನವಿ ಯಥಾಪ್ರತಿಗಳನ್ನು ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಸಚಿವರು, ಕರ್ನಾಟಕ ಸರಕಾರ; ಪ್ರಧಾನ ಕಾರ್ಯದರ್ಶಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕರ್ನಾಟಕ ಸರಕಾರ; ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಕರ್ನಾಟಕ ಸರಕಾರ ಹಾಗೂ ಮಾಜಿ ಸಚಿವ,  ಶಾಸಕ ಯು.ಟಿ.ಖಾದರ್ ರವರಿಗೂ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X