Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನರ ಜೀವ ಉಳಿಸುವುದು ಮುಖ್ಯ; ಕೊರೋನ...

ಜನರ ಜೀವ ಉಳಿಸುವುದು ಮುಖ್ಯ; ಕೊರೋನ ವೈರಸ್ ಭಯ ನಿವಾರಿಸಬೇಕಾಗಿದೆ- ಸಚಿವ‌ ಡಾ.ಸುಧಾಕರ

ವಾರ್ತಾಭಾರತಿವಾರ್ತಾಭಾರತಿ3 Jun 2020 8:39 PM IST
share

ಮಂಗಳೂರು, ಜೂ. 3: ಜನರ ಜೀವ‌ ಉಳಿಸುವುದರ ಜತೆಗೆ ಜನಜೀವನ ಅಸ್ತವ್ಯಸ್ತ ಆಗದಂತೆ ನೋಡಿಕೊಳ್ಳುವ‌  ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದ್ದು, ಜನರಲ್ಲಿ ಮನೆ ಮಾಡಿರುವ ಭಯ ನಿವಾರಿಸಬೇಕಾಗಿದೆ.ಈ ದಿಸೆಯಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ ಹೇಳಿದರು.

ಆರಂಭದಿಂದಲೇ ರಾಜ್ಯದಲ್ಲಿ ಅಗತ್ಯ ಮುಂಜಾಗ್ರತೆ ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ನಿಯಂತ್ರಣ ಸಾಧ್ಯವಾಗಿದೆ. ರಾಜ್ಯದಲ್ಲಿ 3.5 ಲಕ್ಷಕ್ಕೂ ಅಧಿಕ ಗಂಟಲು ದ್ರವ ತಪಾಸಣೆ ಮಾಡಲಾಗಿದೆ. ಇದರಲ್ಲಿ ಮುರೂವರೆ ಸಾವಿರದಷ್ಟು ಜನರಿಗೆ ಸೋಂಕು ತಗಲಿದೆ. ಶೇ.1.8 ರಿಂದ 2 ರಷ್ಟು ಜನ ಮೃತಪಟ್ಟಿದ್ದಾರೆ ಎಂದರು.

ಸಾರ್ಸ್ ನಲ್ಲಿ ಮರಣದ ಪ್ರಮಾಣ ಶೇ10 ರಷ್ಟಿತ್ತು. ಆದರೆ, ಕೊರೊನಾ ವೈರಸ್ ಹರಡುವಿಕೆ ಪ್ರಮಾಣ ಹೆಚ್ಚಾಗಿದೆ. ಇದರಿಂದ ಜನರು ಭಯಭೀತರಾಗಿದ್ದಾರೆ. ಹಿರಿಯರು, ಈಗಾಗಲೇ ಕಾಯಿಲೆಯಿಂದ ಬಳಲುವವರಿಗೆ ಹೆಚ್ಚಿನ ತೊಂದರೆ ಆಗುತ್ತದೆ. ಎಸ್ಎಆರ್ ಐ, ಐಎಲ್ಐ ಲಕ್ಷಣ ಇದ್ದವರನ್ನು ತಪಾಸಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಈಗ ಸೋಂಕು ತಗಲಿರುವವರಲ್ಲಿ ಶೇ 98 ರಷ್ಟು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಂತೆ ಬೇರೆ ರಾಜ್ಯದವರನ್ನು ಕರೆಸಿಕೊಳ್ಳಲಾಗುತ್ತಿದೆ.‌ ಬರುವ ದಿನಗಳಲ್ಲಿ ಈ ಸಂಖ್ಯೆ ಇನ್ನೂ ಹೆಚ್ಚಾಗಲಿದೆ. ಅದಕ್ಕಾಗಿ ಹಳ್ಳಿಯಿಂದ ಪಟ್ಟಣದವರೆಗೆ ಕ್ವಾರಂಟೈನ್ ವ್ಯವಸ್ಥೆಗೆ ಹೊಸ ಮಾರ್ಗಸೂಚಿ ಸಿದ್ಧಪಡಿಸಲಾಗುತ್ತಿದೆ. ಹಳ್ಳಿಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈ ವೈರಾಣು ನಮ್ಮ ಮಧ್ಯದಲ್ಲಿಯೇ ಇರಲಿದೆ. ಇದಕ್ಕೆ ಔಷಧಿ ಕಂಡುಹಿಡಿಯುವವರೆಗೆ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದರು.
ಜನರು ಕಷ್ಟಕ್ಕೆ ಸಿಲುಕಿದ್ದು, ಅದಕ್ಕಾಗಿಯೇ ಪ್ರಧಾನಿ, ಮುಖ್ಯಮಂತ್ರಿಗಳು ದುರ್ಬಲ ವರ್ಗದವರಲ್ಲಿ ಶಕ್ತಿ ತುಂಬಲು ಪ್ರಯತ್ನಿಸಿದ್ದಾರೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ ಜನರು ಪ್ರಬುದ್ಧರು. ಯಾರೂ ಆತಂಕ ಪಡಬೇಕಾಗಿಲ್ಲ. ಇದಕ್ಕಿಂತ ಮಾರಕ ಕಾಯಿಲೆ ವಿರುದ್ಧ ಹೋರಾಟ ಮಾಡಿ ಗೆದ್ದಿದ್ದೇವೆ. ಯಾವುದೇ‌ ವೈರಾಣು ಮನುಷ್ಯನನ್ನು ಗೆದ್ದಿಲ್ಲ. ಮನುಷ್ಯನೇ ವೈರಾಣುವಿನ ವಿರುದ್ಧ ಜಯ ಸಾಧಿಸಿದ್ದಾನೆ. ಅದಕ್ಕೆ ಸ್ವಲ್ಪ‌ ಸಮಯ ಬೇಕು ಎಂದು ಹೇಳಿದರು.

ಸೋಂಕಿತರ ಮನೆ ಮಾತ್ರ ಸೀಲ್ ಡೌನ್ ಮಾಡಲಾಗುವುದು. ಮಹಾರಾಷ್ಟ್ರದಿಂದ ಬಂದವರಿಗೆ 14 ದಿನ ಕ್ವಾರಂಟೈನ್ ಮಾಡಬೇಕು. ಅಷ್ಟರಲ್ಲಿಯೇ ಅವರ ಗಂಟಲು ದ್ರವದ ಮಾದರಿ ಪರೀಕ್ಷೆ ಮಾಡಬೇಕು. ರೋಗಲಕ್ಷಣ ಇರುವವರಿಗೆ ಮಾತ್ರ ತಪಾಸಣೆ ಮಾಡಬೇಕು ಎಂದು ಡಾ. ಸುಧಾಕರ್ ಅಭಿಪ್ರಾಯಪಟ್ಟರು.

ಖಾಸಗಿ ಆಸ್ಪತ್ರೆಗಳು ತಮ್ಮ ದೈನಂದಿನ‌ ಚಟುವಟಿಕೆ ಆರಂಭಿಸಬೇಕು. ಈ ನಿಟ್ಟಿನಲ್ಲಿ ಐಎಂಎ ಪದಾಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಬೇಕು ಎಂದು‌ ಸೂಚಿಸಿದರು.

'ನಿತ್ಯ 6 ಸಾವಿರ ಪರೀಕ್ಷೆ ಆಗಬೇಕು'

ಎ.ಜೆ., ಕಣಚೂರು, ಶ್ರೀನಿವಾಸ್, ಸುಳ್ಯ ಕೆವಿಜಿ ವೈದ್ಯಕೀಯ ಕಾಲೇಜುಗಳಲ್ಲಿ ಕೋವಿಡ್ -19 ಪ್ರಯೋಗಾಲಯ ಆರಂಭಿಸಬೇಕು ಎಂದು ಸಚಿವ ಡಾ. ಸುಧಾಕರ್ ಸೂಚಿಸಿದರು.ಈ ನಾಲ್ಕು ಕಾಲೇಜುಗಳಲ್ಲಿ ಲ್ಯಾಬ್ ಗಳನ್ನು ಶ್ರೀ ಘ್ರವಾಗಿ  ರಚಿಸಬೇಕು ಎಂದರು.

ನಿತ್ಯ ನಾಲ್ಕು ಸಾವಿರ ಪರೀಕ್ಷೆ ನಡೆಸಬೇಕು. ದಕ್ಷಿಣ ಕನ್ನಡದಲ್ಲಿ 100 ಮಾದರಿ ಪರೀಕ್ಷೆಗಳು ಬಾಕಿ ಇವೆ. ಕನಿಷ್ಠ ಮಹಾರಾಷ್ಟ್ರದಿಂದ ಬಂದವರಿಗೆ ಹೋಂ ಕ್ವಾರಂಟೈನ್ ನಲ್ಲಿ‌ ಗಂಟಲು ದ್ರವದ ಮಾದರಿ ತಪಾಸಣೆಗೆ ಅವಕಾಶ ಮಾಡಿಕೊಡಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀ ನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್,ರಾಜೇಶ್ ನಾಯ್ಕ್,ಜಿಲ್ಲಾಧಿಕಾರಿ ಸಿಂಧೂ.

ಬಿ.ರೂಪೇಶ್,ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,ಮನಪಾ ಮೇಯರ್ ದಿವಾಕರ,ಪೊಲೀಸ್ ಆಯುಕ್ತ ಡಾ.ಹರ್ಷ,ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್, ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ.ಡಾ.ಸೆಲ್ವಮಣಿ ಮೊದಲಾದ ವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X