Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ 1 ಲಕ್ಷ ಪುರುಷರಲ್ಲಿ 40...

ಬೆಂಗಳೂರಿನಲ್ಲಿ 1 ಲಕ್ಷ ಪುರುಷರಲ್ಲಿ 40 ಮಂದಿಗೆ ಕ್ಯಾನ್ಸರ್: ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ3 Jun 2020 8:44 PM IST
share
ಬೆಂಗಳೂರಿನಲ್ಲಿ 1 ಲಕ್ಷ ಪುರುಷರಲ್ಲಿ 40 ಮಂದಿಗೆ ಕ್ಯಾನ್ಸರ್: ಅಧ್ಯಯನ ವರದಿ

ಬೆಂಗಳೂರು, ಜೂ.3: ನಗರದಲ್ಲಿ 1 ಲಕ್ಷ ಪುರುಷರಲ್ಲಿ 40 ಮಂದಿ ಹಾಗೂ 1 ಲಕ್ಷ ಮಹಿಳೆಯರಲ್ಲಿ 20 ಮಂದಿ ತಂಬಾಕು ಸಂಬಂಧಿ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎನ್ನುವುದು ಕಿದ್ವಾಯಿ ಸ್ಮಾರಕಗಂಥಿ ಸಂಸ್ಥೆ ನಡೆಸಿದ ಅಧ್ಯಯನದಿಂದ ಬೆಳಕಿಗೆ ಬಂದಿದೆ.

ತಂಬಾಕು ಉತ್ಪನ್ನಗಳ ಸೇವನೆಯು ಬಾಯಿ, ಗಂಟಲು, ಧ್ವನಿಪಟ್ಟಿಗೆ, ಮಿದುಳು, ಅನ್ನನಾಳ, ಶ್ವಾಸಕೋಶ, ಪಿತ್ತಕೋಶ, ಮೂತ್ರಪಿಂಡ, ಸ್ತನ ಸೇರಿದಂತೆ ದೇಹದ ವಿವಿಧ ಅಂಗಾಂಗಗಳ ಕ್ಯಾನ್ಸರ್ ಗೆ ಕಾರಣವಾಗುತ್ತದೆ. ಅಷ್ಟೇ ಅಲ್ಲ, ಇದರಿಂದ ಹೃದಯ ಕಾಯಿಲೆ, ಶ್ವಾಸಕೋಶದ ಸಮಸ್ಯೆ, ಪಾರ್ಶ್ವವಾಯು, ಕುರುಡುತನ, ಹಲ್ಲು ಮತ್ತು ವಸಡಿನ ಸಮಸ್ಯೆ ಸೇರಿದಂತೆ ವಿವಿಧ ಕಾಯಿಲೆಗಳು ಬರುವ ಸಾಧ್ಯತೆಗಳಿವೆ. ಕಿದ್ವಾಯಿ ಸ್ಮಾರಕಗಂಥಿ ಸಂಸ್ಥೆ ಒಂದರಲ್ಲೇ ಪ್ರತಿ ವರ್ಷ 3 ಸಾವಿರಕ್ಕೂ ಅಧಿಕ ತಂಬಾಕು ಸಂಬಂಧಿ ಕ್ಯಾನ್ಸರ್ ಪ್ರಕರಣಗಳು ದಾಖಲಾಗುತ್ತಿವೆ.

ತಂಬಾಕು ಹಾಗೂ ಪಾನ್ ಮಸಾಲ ಉತ್ಪನ್ನಗಳ ಸೇವನೆಯಿಂದ ಮನುಷ್ಯನ ರೋಗನಿರೋಧಕ ಶಕ್ತಿ ಕಡಿಮೆ ಆಗಲಿದೆ. ಇದರಿಂದ ಕೊರೋನ ಸೋಂಕಿಗೆ ಒಳಗಾಗುವ ಸಾಧ್ಯತೆಯೂ ಇದೆ ಎಂದು ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. ಸೋಂಕಿತರು ತಂಬಾಕು ಉತ್ಪನ್ನಗಳನ್ನು ಜಗಿದು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸೋಂಕು ಒಬ್ಬರಿಂದ ಇನ್ನೊಬ್ಬರಿಗೆ ಹರಡಲಿದೆ ಎಂದು ಹೇಳಿದ್ದಾರೆ.

ಜೀವಕ್ಕೆ ಕುತ್ತು: ಹೆಚ್ಚಿನವರು ರೋಗ ಉಲ್ಬಣಗೊಂಡ ಬಳಿಕ ಸಂಸ್ಥೆಗೆ ಚಿಕಿತ್ಸೆಗಾಗಿ ಬರುತ್ತಾರೆ. ಕ್ಯಾನ್ಸರ್ ಇರುವುದನ್ನು ಪ್ರಾಥಮಿಕ ಹಂತದಲ್ಲಿಯೇ ಪತ್ತೆಯಾದರೆ ಅಗತ್ಯ ಚಿಕಿತ್ಸೆ ನೀಡಿ, ಗುಣಪಡಿಸಬಹುದು. ತಂಬಾಕು ಸೇವನೆಯಿಂದ ಬರುವ ಕ್ಯಾನ್ಸರ್ ನಿಯಂತ್ರಣಕ್ಕಾಗಿ ಕಾರ್ಯನೀತಿಗಳು ಹಾಗೂ ಕಾರ್ಯತಂತ್ರವನ್ನು ರೂಪಿಸಬೇಕಾಗಿದೆ.

ತೆರಿಗೆ ವಿಧಿಸುವುದು, ಜಾಹೀರಾತು ನಿಷೇಧ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಂಡರೆ ಮಾತ್ರ ತಕ್ಕಮಟ್ಟಿಗೆ ನಿಯಂತ್ರಣಕ್ಕೆ ತರಬಹುದು ಎಂದು ನಿರ್ದೇಶಕ ಡಾ.ಸಿ.ರಾಮಚಂದ್ರ ತಿಳಿಸಿದ್ದಾರೆ.

ಕೊರೋನ ಸೋಂಕು ಕಾಡುತ್ತಿರುವ ಈ ಸಂದರ್ಭದಲ್ಲಿ ಧೂಮಪಾನ ಮತ್ತು ತಂಬಾಕು ಸೇವಿಸುವವರ ಜೀವಕ್ಕೇ ಕುತ್ತು ಉಂಟಾಗುವ ಸಾಧ್ಯತೆಗಳಿವೆ. ಧೂಮಪಾನದಿಂದ ಶ್ವಾಸಕೋಶ ದುರ್ಬಲವಾಗಲಿದೆ. ಕೊರೋನ ವೈರಾಣುವೂ ಶ್ವಾಸಕೋಶಕ್ಕೆ ಮೊದಲು ದಾಳಿ ನಡೆಸಲಿದೆ. ಹಾಗಾಗಿ ತಂಬಾಕು ಉತ್ಪನ್ನಗಳನ್ನು ತ್ಯಜಿಸಿ, ಆರೋಗ್ಯಕಾರಿ ಜೀವನ ವಿಧಾನ ನಡೆಸಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X