Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1 ಲಕ್ಷಕ್ಕೂ ಹೆಚ್ಚು ಭಾರತೀಯರ ರಾಷ್ಟ್ರೀಯ...

1 ಲಕ್ಷಕ್ಕೂ ಹೆಚ್ಚು ಭಾರತೀಯರ ರಾಷ್ಟ್ರೀಯ ಗುರುತು ಚೀಟಿಗಳು ‘ಡಾರ್ಕ್ ವೆಬ್' ನಲ್ಲಿ ಮಾರಾಟಕ್ಕೆ!

ವಾರ್ತಾಭಾರತಿವಾರ್ತಾಭಾರತಿ3 Jun 2020 10:08 PM IST
share
1 ಲಕ್ಷಕ್ಕೂ ಹೆಚ್ಚು ಭಾರತೀಯರ ರಾಷ್ಟ್ರೀಯ ಗುರುತು ಚೀಟಿಗಳು ‘ಡಾರ್ಕ್ ವೆಬ್ ನಲ್ಲಿ ಮಾರಾಟಕ್ಕೆ!

ಹೊಸದಿಲ್ಲಿ,ಜೂ.3: ಆಧಾರ್, ಪಾನ್‌ಕಾರ್ಡ್ ಮತ್ತು ಪಾಸ್‌ ಪೋರ್ಟ್ ಸೇರಿದಂತೆ ಒಂದು ಲಕ್ಷಕ್ಕೂ ಅಧಿಕ ಭಾರತೀಯರ ರಾಷ್ಟ್ರೀಯ ಗುರುತು ಚೀಟಿ (ಐಡಿ)ಗಳ ಸ್ಕ್ಯಾನ್ಡ್ ಪ್ರತಿಗಳನ್ನು ಡಾರ್ಕ್ ವೆಬ್‌ನಲ್ಲಿ ಮಾರಾಟಕ್ಕಿಡಲಾಗಿದೆ ಎಂದು ಸೈಬರ್ ಗುಪ್ತಚರ ಸಂಸ್ಥೆ ಸೈಬಲ್ ಬುಧವಾರ ತಿಳಿಸಿದೆ. ಥರ್ಡ್ ಪಾರ್ಟಿಯಿಂದ ಈ ಮಾಹಿತಿಗಳು ಸೋರಿಕೆಯಾಗಿರುವಂತೆ ಕಂಡು ಬರುತ್ತಿದ್ದು, ಸರಕಾರದ ವ್ಯವಸ್ಥೆಯ ಮೂಲಕವಲ್ಲ ಎಂದು ಸೈಬಲ್ ತನ್ನ ವರದಿಯಲ್ಲಿ ಹೇಳಿದೆ.

ಈ ಮಾಹಿತಿಗಳನ್ನು ಡಾರ್ಕ್ ವೆಬ್‌ನಲ್ಲಿ ಮಾರಾಟಕ್ಕಿರಿಸಿರುವ ಹ್ಯಾಕರ್ ಇವುಗಳನ್ನು ಭಾರತದ ವಿವಿಧ ಸ್ಥಳಗಳಿಂದ ಪಡೆದುಕೊಂಡಿದ್ದಾನೆ ಎನ್ನಲಾಗಿದೆ ಎಂದಿರುವ ‘ಸೈಬಲ್’, ಸೈಬರ್ ಕ್ರಿಮಿನಲ್‌ಗಳಿಂದ ವೈಯಕ್ತಿಕ ಮಾಹಿತಿಗಳ ಸೋರಿಕೆಯು ಗುರುತು ಕಳ್ಳತನ, ಹಗರಣಗಳು ಮತ್ತು ಕಾರ್ಪೊರೇಟ್ ಬೇಹುಗಾರಿಕೆಯಂತಹ ವಿವಿಧ ದುಷ್ಕೃತ್ಯಗಳಿಗೆ ಕಾರಣವಾಗುತ್ತದೆ. ಹಲವಾರು ಕ್ರಿಮಿನಲ್‌ಗಳು ವಂಚಕ ಚಟುವಟಿಕೆಗಳಿಗಾಗಿ ದೂರವಾಣಿ ಕರೆಯ ಮೂಲಕ ಜನರ ವಿಶ್ವಾಸವನ್ನು ಗಳಿಸಲು ಐಡಿಗಳಲ್ಲಿಯ ವೈಯಕ್ತಿಕ ವಿವರಗಳನ್ನು ಬಳಸಿಕೊಳ್ಳುತ್ತಾರೆ ಎಂದು ಕಳವಳವನ್ನು ವ್ಯಕ್ತಪಡಿಸಿದೆ.

 ‘ಸೈಬಲ್‌’ ನ ಸಂಶೋಧಕರು ಹ್ಯಾಕರ್‌ನಿಂದ ಸುಮಾರು 1,000 ಸ್ಕಾನ್ಡ್ ಐಡಿಗಳನ್ನು ಖರೀದಿಸಿದ್ದು,ಇವು ಭಾತೀಯರಿಗೆ ಸೇರಿದ್ದು ಎನ್ನುವುದು ದೃಢಪಟ್ಟಿದೆ. ಥರ್ಡ್ ಪಾರ್ಟಿಯಿಂದ ಈ ಮಾಹಿತಿಗಳು ಸೋರಿಕೆಯಾಗಿವೆ ಎನ್ನುವುದನ್ನು ಪ್ರಾಥಮಿಕ ವಿಶ್ಲೇಷಣೆಗಳು ಸೂಚಿಸಿವೆ. ಸರಕಾರಿ ದತ್ತಾಂಶ ಕೋಶಗಳಿಂದ ಈ ಮಾಹಿತಿಗಳು ಸೋರಿಕೆಯಾಗಿರುವ ಯಾವುದೇ ಸುಳಿವು ಕಂಡು ಬಂದಿಲ್ಲ. ಯಾವುದೋ ಕಂಪನಿಯ ಡಾಟಾಬೇಸ್‌ನ ‘ಕೆವೈಸಿ (ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳಿ)’ವಿಭಾಗದಿಂದ ಈ ಮಾಹಿತಿಗಳು ಸೋರಿಕೆಯಾಗಿರಬಹುದು ಎನ್ನುವುದನ್ನು ಸ್ಕಾನ್ಡ್ ಐಡಿ ದಾಖಲೆಗಳು ಬೆಟ್ಟುಮಾಡುತ್ತಿವೆ ಎಂದು ‘ಸೈಬಲ್’ ಹೇಳಿದೆ.

ದೂರವಾಣಿ, ಇ-ಮೇಲ್ ಅಥವಾ ಎಸ್‌ಎಂಎಸ್ ಮೂಲಕ ವೈಯಕ್ತಿಕ ವಿವರಗಳನ್ನು,ವಿಶೇಷವಾಗಿ ಹಣಕಾಸು ಮಾಹಿತಿಗಳನ್ನು ಹಂಚಿಕೊಳ್ಳದಂತೆ ಸೈಬಲ್ ಸಾರ್ವಜನಿಕರಿಗೆ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X