Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈಗ ರೈತರು ತಮ್ಮ ಉತ್ಪನ್ನಗಳನ್ನು ರಾಜ್ಯದ...

ಈಗ ರೈತರು ತಮ್ಮ ಉತ್ಪನ್ನಗಳನ್ನು ರಾಜ್ಯದ ಹೊರಗೂ ಮಾರಬಹುದು

ಅಗತ್ಯ ಸರಕುಗಳ ಕಾಯ್ದೆಯ ತಿದ್ದುಪಡಿಗಳಿಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ3 Jun 2020 10:23 PM IST
share
ಈಗ ರೈತರು ತಮ್ಮ ಉತ್ಪನ್ನಗಳನ್ನು ರಾಜ್ಯದ ಹೊರಗೂ ಮಾರಬಹುದು

ಹೊಸದಿಲ್ಲಿ,ಜೂ.3: ಕೇಂದ್ರ ಸಂಪುಟವು ಅಗತ್ಯ ಸರಕುಗಳ ಕಾಯ್ದೆ,1955ಕ್ಕೆ ತಿದ್ದುಪಡಿಗಳಿಗೆ ಬುಧವಾರ ಒಪ್ಪಿಗೆ ನೀಡಿದ್ದು,ಈಗ ರೈತರು ತಮ್ಮ ಉತ್ಪನ್ನಗಳನ್ನು ತಮ್ಮ ರಾಜ್ಯಗಳ ಹೊರಗೆ ಮಾರಾಟ ಮಾಡಬಹುದಾಗಿದೆ. ಇದರೊಂದಿಗೆ ಭಾರತವು ‘ಒಂದು ದೇಶ ಒಂದು ಮಾರುಕಟ್ಟೆ’ ವ್ಯವಸ್ಥೆಯತ್ತ ಹೆಜ್ಜೆಯನ್ನು ಹಾಕಿದಂತಾಗಿದೆ.

ನೂತನ ತಿದ್ದುಪಡಿಗಳು ರೈತರು ಇನ್ನು ಮುಂದೆ ರಾಜ್ಯ ಸರಕಾರಗಳ ಅಧೀನದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಮಾತ್ರ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಬೇಕೆಂಬ ನಿಯಮವನ್ನು ತೊಡೆದುಹಾಕಿವೆ. ದಶಕಗಳಷ್ಟು ಹಳೆಯದಾದ ಈ ಸಮಿತಿಗಳು ತಮ್ಮಿಂದ ಉತ್ಪನ್ನಗಳ ಖರೀದಿಯಲ್ಲಿ ಅನ್ಯಾಯವೆಸಗುತ್ತಿವೆ ಎಂದು ರೈತರು ಆಗಾಗ್ಗೆ ದೂರುತ್ತಲೇ ಬಂದಿದ್ದರು.

“ಇಂದು ರೈತರ ಪಾಲಿಗೆ ಐತಿಹಾಸಿಕ ದಿನವಾಗಿದೆ. ಭಾರತಕ್ಕೆ 1947ರಲ್ಲಿ ಸ್ವಾತಂತ್ರ್ಯ ಲಭಿಸಿದ್ದರೆ ರೈತರಿಗೆ ಇಂದು ಸ್ವಾತಂತ್ರ್ಯಲಭಿಸಿದೆ” ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಬಣ್ಣಿಸಿದರು.

 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ ಜಾವಡೇಕರ್ ಅವರು,ರೈತರನ್ನು ಎಪಿಎಂಸಿಯ ನಿರ್ಬಂಧಗಳಿಂದ ಮುಕ್ತಗೊಳಿಸಲಾಗಿದೆ. ರೈತರ ಉತ್ಪನ್ನಗಳ ಮಾರಾಟದ ಮೇಲಿನ ನಿಯಂತ್ರಣದಲ್ಲಿ ಉದಾರೀಕರಣದ ಐತಿಹಾಸಿಕ ನಿರ್ಧಾರವು ಅವರಿಗೆ ಲಾಭದಾಯಕವಾಗುವ ಜೊತೆಗೆ ಕೃಷಿ ಕ್ಷೇತ್ರದಲ್ಲಿ ಪರಿವರ್ತನೆಯನ್ನು ತರಲಿದೆ ಎಂದು ಹೇಳಿದರು.

 ವರ್ಷಗಳಿಂದಲೂ ಎಪಿಎಂಸಿಗಳ ಮೂಲಕವೇ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಬೇಕಾದ ಅನಿವಾರ್ಯತೆಯಲ್ಲಿದ್ದರಿಂದ ರೈತರು ತಮ್ಮ ಉತ್ಪನ್ನಗಳಿಗೆ ನ್ಯಾಯಬದ್ಧ ಬೆಲೆಗಳನ್ನು ಪಡೆಯಲು ಈ ಸಮಿತಿಗಳು ಅಡ್ಡಿಯಾಗಿದ್ದವು. ಸಮಿತಿಗಳ ನಿಯಮಗಳಂತೆ ರೈತರು ಮುಕ್ತ ಮಾರುಕಟ್ಟೆಗಳ ಬದಲು ಅಧಿಸೂಚಿತ ಮಾರುಕಟೆಗಳಲ್ಲಿನ ಪರವಾನಿಗೆ ಹೊಂದಿರುವ ಮಧ್ಯವರ್ತಿಗಳಿಗೆ ಮಾತ್ರ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಬೇಕಿತ್ತು. ಎಪಿಎಂಸಿ ಮಾರುಕಟ್ಟೆಗಳಲ್ಲಿ ಕೆಲವೇ ವ್ಯಾಪಾರಿಗಳಿರುವುದರಿಂದ ತಮ್ಮ ಉತ್ಪನ್ನಗಳನ್ನು ಖಾಲಿ ಮಾಡಲು ರೈತರು ಅವುಗಳನ್ನು ಅಗ್ಗದ ಬೆಲೆಗಳಲ್ಲಿ ಮಾರಾಟ ಮಾಡುವಂತಾಗುತ್ತಿತ್ತು. ಅಲ್ಲದೆ ವ್ಯಾಪಾರಿಗಳು ತಮ್ಮದೇ ಆದ ಕೂಟಗಳನ್ನು ರಚಿಸಿಕೊಂಡು ಖರೀದಿ ಬೆಲೆಗಳು ಕಡಿಮೆಯಿರುವಂತೆ ನೋಡಿಕೊಳ್ಳುತ್ತಿದ್ದರು. ಇದರಿಂದಾಗಿ ಬೆಳೆದ ರೈತನಿಗಿಂತ ಮಧ್ಯವರ್ತಿಗಳಿಗೆ ಹೆಚ್ಚು ಲಾಭವಾಗುತ್ತಿತ್ತು ಮತ್ತು ಅಂತಿಮವಾಗಿ ಬಳಕೆದಾರ ದುಬಾರಿ ಬೆಲೆಗಳನ್ನು ತೆರುವಂತಾಗಿತ್ತು.

ರೈತರು ತಮ್ಮ ಉತ್ಪನ್ನಗಳನ್ನು ಆಕರ್ಷಕ ಬೆಲೆಗಳಲ್ಲಿ ಮಾರಾಟ ಮಾಡುವಂತಾಗಲು ನೂತನ ಕಾನೂನನ್ನು ತರುವುದಾಗಿ ಸರಕಾರವು ಕಳೆದ ಮೇ 15ರಂದು ತಿಳಿಸಿತ್ತು.

ನೂತನ ಕಾನೂನು ಅಂತರರಾಜ್ಯ ಮಾರಾಟ ನಿರ್ಬಂಧಗಳನ್ನು ನಿವಾರಿಸಲಿದೆ. ಇದರಿಂದಾಗಿ ಒಂದು ರಾಜ್ಯದ ರೈತರು ಇ-ಟ್ರೇಡಿಂಗ್ ವ್ಯವಸ್ಥೆಯ ಮೂಲಕ ಇನ್ನೊಂದು ರಾಜ್ಯದ ಖರೀದಿದಾರರು ಮತ್ತು ವ್ಯಾಪಾರಿಗಳಿಗೆ ತಮ್ಮ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡಬಹುದಾಗಿದೆ.

ರಫ್ತು ಸಮಿತಿಯ ಶಿಫಾರಸುಗಳ ಆಧಾರದಲ್ಲಿ ನಿರ್ಬಂಧಗಳ ನಿವಾರಣೆಯಿಂದಾಗಿ ವ್ಯಾಪಾರಿಗಳು ರೈತರಿಂದ ನೇರವಾಗಿ ದೊಡ್ಡಪ್ರಮಾಣಗಳಲ್ಲಿ ಉತ್ಪನ್ನಗಳನ್ನು ಖರೀದಿಸಬಹುದು. ಭರ್ಜರಿ ಬೆಳೆಗಳು ಬಂದಾಗ ಹೆಚ್ಚಾಗಿ ರೈತರು ಅಗ್ಗದ ಬೆಲೆಗಳಲ್ಲಿ ಸಗಟು ಮಾರುಕಟ್ಟೆಗಳಲ್ಲಿ ತಮ್ಮ ಉತ್ಪನ್ನಗಳನ್ನು ಗುಡ್ಡೆಹಾಕುತ್ತಾರೆ. ಇಂತಹ ಸಮಯದಲ್ಲಿ ವ್ಯಾಪಾರಿಗಳಿಂದ ನೇರವಾಗಿ ದೊಡ್ಡ ಪ್ರಮಾಣದಲ್ಲಿ ಖರೀದಿ ರೈತರಿಗೆ ನೆರವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X