ಜೂ.4: ಆಹಾರ ವಿತರಕ ಸಿಬ್ಬಂದಿಗೆ ಪ್ಯಾಕೇಜ್ ಘೋಷಿಸಲು ಒತ್ತಾಯಿಸಿ ಧರಣಿ
ಬೆಂಗಳೂರು, ಜೂ.3: ಲಾಕ್ಡೌನ್ ಪರಿಣಾಮದಿಂದ ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿರುವ ಆಹಾರ ವಿತರಕರ ಕಂಪೆನಿಗಳ ನೌಕರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಒತ್ತಾಯಿಸಿ ನಾಳೆ(ಜೂ.4) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಯುನೈಟೆಡ್ ಫುಡ್ ಡೆಲಿವರಿ ಪಾರ್ಟ್ನರ್ಸ್ ಯೂನಿಯನ್ ನೇತೃತ್ವದಲ್ಲಿ ಇಲ್ಲಿನ ಬನ್ನೇರುಘಟ್ಟ ರಸ್ತೆಯ ಕಾರ್ಮಿಕರ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ವಿಶೇಷ ಪ್ಯಾಕೇಜ್, ಆರೋಗ್ಯ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಯೂನಿಯನ್ ಅಧ್ಯಕ್ಷ ವಿನಯ್ ಸಾರಥಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story