Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೂ.8ರಿಂದ ಧಾರ್ಮಿಕ ಕೇಂದ್ರಗಳು, ವಾಣಿಜ್ಯ...

ಜೂ.8ರಿಂದ ಧಾರ್ಮಿಕ ಕೇಂದ್ರಗಳು, ವಾಣಿಜ್ಯ ಸಂಸ್ಥೆಗಳು, ಹೊಟೇಲ್ ಗಳು ಪಾಲಿಸಬೇಕಾದ ಮಾರ್ಗಸೂಚಿಗಳು ಪ್ರಕಟ

ವಾರ್ತಾಭಾರತಿವಾರ್ತಾಭಾರತಿ4 Jun 2020 10:25 PM IST
share
ಜೂ.8ರಿಂದ ಧಾರ್ಮಿಕ ಕೇಂದ್ರಗಳು, ವಾಣಿಜ್ಯ ಸಂಸ್ಥೆಗಳು, ಹೊಟೇಲ್ ಗಳು ಪಾಲಿಸಬೇಕಾದ ಮಾರ್ಗಸೂಚಿಗಳು ಪ್ರಕಟ

ಹೊಸದಿಲ್ಲಿ: 2 ತಿಂಗಳ ನಂತರ ಸೋಮವಾರ (ಜೂ.8)ರಂದು ತೆರೆಯಲಿರುವ ಧಾರ್ಮಿಕ, ವಾಣಿಜ್ಯ ಸಂಸ್ಥೆಗಳು ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಕೇಂದ್ರ ಸರಕಾರ ಪ್ರಕಟಿಸಿದೆ.

2 ಹಂತಗಳಲ್ಲಿ ಲಾಕ್ ಡೌನ್ ಅನ್ ಲಾಕ್ ಆಗಲಿದ್ದು, ಮೊದಲನೆ ಹಂತದಲ್ಲಿ ಧಾರ್ಮಿಕ ಸ್ಥಳಗಳು, ಹೊಟೇಲ್ ಗಳು ಮತ್ತು ರೆಸ್ಟೋರೆಂಟ್ ಗಳು ತೆರೆಯಲು ಅವಕಾಶ ನೀಡಲಾಗಿದೆ. ಈಗಾಗಲೇ ಕೆಲವು ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಮಾರ್ಗಸೂಚಿಗಳು

ಎಲ್ಲರೂ ಪಾಲಿಸಬೇಕಾದದ್ದು….

►ಆಗಾಗ 40ರಿಂದ 60 ಸೆಕೆಂಡುಗಳ ಕಾಲ ಕೈಗಳನ್ನು ಸೋಪುಗಳಿಂದ ತೊಳೆಯುತ್ತಿರಬೇಕು

►ಕೆಮ್ಮುವಾಗ, ಸೀನುವಾಗ ಟಿಶ್ಯು, ಕರವಸ್ತ್ರಗಳಿಂದ ಮೂಗು, ಬಾಯಿಗಳನ್ನು ಮುಚ್ಚಬೇಕು, ಬಳಕೆಯಾದ ಟಿಶ್ಯುಗಳನ್ನು ಸರಿಯಾಗಿ ಎಸೆಯಬೇಕು

►ಉಗುಳುವುದು ಸಂಪೂರ್ಣ ನಿಷಿದ್ಧ

ಶಾಪಿಂಗ್ ಮಾಲ್ ಗಳು

►ಪ್ರವೇಶ ದ್ವಾರದಲ್ಲಿ ಕಡ್ಡಾಯವಾಗಿ ಹ್ಯಾಂಡ್ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ಇರಲೇಬೇಕು.

►ಕೋವಿಡ್ 19ನ ಯಾವುದೇ ಲಕ್ಷಣಗಳು ಇಲ್ಲದ ವ್ಯಕ್ತಿಗಳಿಗೆ ಮಾತ್ರ ಪ್ರವೇಶಿಸಲು ಅವಕಾಶ ನೀಡಬೇಕು

►ಮಾಸ್ಕ್ ಧರಿಸಿದವರಿಗೆ ಮಾತ್ರ ಪ್ರವೇಶಿಸಲು ಅವಕಾಶ

►ಕೋವಿಡ್ 19 ತಡೆಗಟ್ಟುವ ಕುರಿತು ಮಾಹಿತಿ ನೀಡುವ ಪೋಸ್ಟರ್ ಗಳನ್ನು, ಫಲಕಗಳನ್ನು ಅಳವಡಿಸಬೇಕು.

►ಕೋವಿಡ್ 19 ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಆಡಿಯೋ ಮತ್ತು ವಿಡಿಯೋ ಕ್ಲಿಪ್ ಗಳನ್ನು ಆಗಾಗ ಪ್ಲೇ ಮಾಡುತ್ತಿರಬೇಕು.

►ಗ್ರಾಹಕರು ತಮ್ಮ ಪಾದರಕ್ಷೆಗಳನ್ನು ತಮ್ಮ ವಾಹನಗಳಲ್ಲಿ ಕಳಚುವುದು ಸೂಕ್ತ

►ಅಗತ್ಯವಿದ್ದರೆ ಪ್ರತಿ ವ್ಯಕ್ತಿ ಅಥವಾ ಕುಟುಂಬದವರು ಅವುಗಳನ್ನು ಪ್ರತ್ಯೇಕ ಸ್ಲಾಟ್ ಗಳಲ್ಲಿ ಇರಿಸಬೇಕು.

►ಪಾರ್ಕಿಂಗ್ ಸ್ಲಾಟ್ ಗಳಲ್ಲಿ ಗುಂಪುಗಳನ್ನು ನಿಯಂತ್ರಿಸಬೇಕು ಮತ್ತು ಆವರಣದ ಹೊರಗೆ ಸುರಕ್ಷಿತ ಅಂತರ ಕಾಪಾಡಿಕೊಳ್ಳುವ ಬಗ್ಗೆ ವ್ಯವಸ್ಥೆಗಳನ್ನು ಮಾಡಬೇಕು.

►ಆವರಣದಲ್ಲಿರುವ ಅಥವಾ ಹೊರಗಿರುವ ಯಾವುದೇ ಅಂಗಡಿಗಳು, ಸ್ಟಾಲ್ ಗಳು, ಕೆಫೆಟೇರಿಯಾಗಳು ಇತ್ಯಾದಿ ಎಲ್ಲಾ ಸಮಯಗಳಲ್ಲೂ ಸುರಕ್ಷಿತ ಅಂತರಗಳನ್ನು ಪಾಲಿಸಲಾಗುತ್ತಿದೆಯೇ ಎಂದು ನೋಡಿಕೊಳ್ಳಬೇಕು

►ಕ್ಯೂಗಳನ್ನು ನಿರ್ವಹಿಸಲು ಮತ್ತು ಸುರಕ್ಷಿತ ಅಂತರಗಳನ್ನು ಪಾಲಿಸುವುದಕ್ಕಾಗಿ ಸೂಕ್ತ ಅಂತರದ ಮಾರ್ಕಿಂಗ್ ಗಳನ್ನು ಮಾಡಬಹುದು

►ಸಂದರ್ಶಕರಿಗೆ ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನ ದ್ವಾರಗಳ ವ್ಯವಸ್ಥೆ ಮಾಡಬೇಕು

►ಪ್ರವೇಶಕ್ಕಾಗಿ ಕ್ಯೂಗಳಲ್ಲಿ ನಿಲ್ಲುವಾಗ ಕನಿಷ್ಠ 6 ಅಡಿ ಸುರಕ್ಷಿತ ಅಂತರವನ್ನು ಪಾಲಿಸಬೇಕು

►ಆವರಣ ಪ್ರವೇಶಿಸುವುದಕ್ಕೆ ಮೊದಲು ಜನರು ಸಾಬೂನು ಮತ್ತು ನೀರು ಬಳಸಿ ತಮ್ಮ ಕೈ ಮತ್ತು ಕಾಲುಗಳನ್ನು ತೊಳೆದುಕೊಳ್ಳಬೇಕು

►ಸುರಕ್ಷಿತ ಅಂತರ ನಿಯಮ ಪಾಲಿಸಿ ಆಸನದ ವ್ಯವಸ್ಥೆಗಳನ್ನು ಮಾಡಬೇಕು

►ಏರ್ ಕಂಡಿಶನಿಂಗ್ ಮತ್ತು ವೆಂಟಿಲೇಶನ್ ಗಾಗಿ ಏರ್ ಕಂಡಿಶನ್ ಗಳಲ್ಲಿ 24-30 ಡಿಗ್ರಿ ಸೆಲ್ಸಿಯಸ್ ಗಳ ಸರಾಸರಿಯಲ್ಲಿ ತಾಪಮಾನವನ್ನು ನಿಗದಿಗೊಳಿಸಬೇಕು ಎನ್ನುವ ಸಿಪಿಡಬ್ಲ್ಯುಡಿ ಮಾರ್ಗಸೂಚಿಗಳನ್ನು ಪಾಲಿಸಬೇಕು.

►ಶಾಪಿಂಗ್ ಮಾಲ್ ಗಳಲ್ಲಿ ಎಲ್ಲಾ ಸಮಯಗಳಲ್ಲೂ ಫೇಸ್ ಮಾಸ್ಕ್ ಗಳನ್ನು ಬಳಸಬೇಕು

►ಹೋಮ್ ಡೆಲಿವರಿ ಮಾಡಲು ಹೊರಡುವ ಮುನ್ನ ಸಿಬ್ಬಂದಿಯನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಬೇಕು

►ಆದಷ್ಟು ಕಡಿಮೆ ಸಂಖ್ಯೆಯಲ್ಲಿ ಗ್ರಾಹಕರು ಅಂಗಡಿಗಳ ಒಳಗಿರಲು ಅವಕಾಶ ನೀಡಬೇಕು

►ಲಿಫ್ಟ್ ಗಳಲ್ಲಿ ಕಡಿಮೆ ಸಂಖ್ಯೆಯ ಜನರಿರಬೇಕು

►ವಾಶ್ ರೂಮ್ ಗಳನ್ನು ಸ್ವಚ್ಛಗೊಳಿಸುತ್ತಿರಬೇಕು

►ಫುಡ್ ಕೋರ್ಟ್ ಮತ್ತು ರೆಸ್ಟಾರೆಂಟ್ ಗಳಲ್ಲಿ 50 ಶೇಕಡಕ್ಕಿಂತ ಹೆಚ್ಚಿನ ಆಸನ ವ್ಯವಸ್ಥೆ ಮಾಡಬಾರದು

►ಫುಡ್ ಕೋರ್ಟ್ ಸಿಬ್ಬಂದಿ ಮಾಸ್ಕ್ ಧರಿಸಿ, ಹ್ಯಾಂಡ್ ಗ್ಲೌಸ್ ಗಳನ್ನು ಧರಿಸಬೇಕು

ಧಾರ್ಮಿಕ ಕೇಂದ್ರಗಳು

►ಪ್ರತಿಮೆಗಳು, ಮೂರ್ತಿಗಳು ಮತ್ತು ಪವಿತ್ರ ಗ್ರಂಥಗಳ್ನು ಮುಟ್ಟಬಾರದು

►ಕೊರೋನ ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ರೆಕಾರ್ಡ್ ಮಾಡಿದ ಭಕ್ತಿಗೀತೆಗಳು, ಪ್ರಾರ್ಥನೆಗಳನ್ನು ಹಾಡಬೇಕು. ಒಟ್ಟಾಗಿ , ಗುಂಪಾಗಿ ಹಾಡುವುದಕ್ಕೆ ಅವಕಾಶವಿಲ್ಲ

►ಸಾಮಾನ್ಯ ಪ್ರಾರ್ಥನೆಯ ಚಾಪೆಗಳನ್ನು ಬಳಸಲು ಅವಕಾಶವಿಲ್ಲ. ಪ್ರತಿಯೊಬ್ಬರು ಅವರದ್ದೇ ಆದ ಚಾಪೆಗಳನ್ನು ತರಬೇಕು.

►ಪ್ರಸಾದ ವಿತರಣೆ, ಪವಿತ್ರ ನೀರು ಸಿಂಪಡಣೆಗೆ ಅವಕಾಶವಿಲ್ಲ

►ಕಮ್ಯುನಿಟಿ ಕಿಚನ್ ಗಳು, ಧಾರ್ಮಿಕ ಸ್ಥಳಗಳಲ್ಲಿ  ಅನ್ನದಾನ ಇತ್ಯಾದಿಗಳ ವೇಳೆ ಆಹಾರ ತಯಾರಿಸುವಾಗ ಮತ್ತು ವಿತರಿಸುವಾಗ ಸುರಕ್ಷಿತ ಅಂತರ ನಿಯಮಗಳನ್ನು ಪಾಲಿಸಬೇಕು

►ಆವರಣದ ನೆಲವನ್ನು ಹಲವು ಬಾರಿ ಸ್ವಚ್ಛಗೊಳಿಸಬೇಕು

►ಆವರಣದಲ್ಲಿ ಯಾವುದಾದರೂ ಶಂಕಿತ, ದೃಢಪಟ್ಟ ಸೋಂಕು ಪ್ರಕರಣಗಳು ಕಂಡುಬಂದಲ್ಲಿ ಇತರರಿಗಿಂತ ದೂರವಿರುವ ಕೋಣೆಯೊಂದರಲ್ಲಿ ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಇರಿಸಬೇಕು

►ವೈದ್ಯರು ಪರೀಕ್ಷೆ ನಡೆಸುವವರಿಗೆ ಆ ವ್ಯಕ್ತಿಗೆ ಮಾಸ್ಕ್ ಗಳನ್ನು ನೀಡಬೇಕು

►ಸ್ಥಳೀಯ ವೈದ್ಯಕೀಯ ಅಧಿಕಾರಿಗಳಿಗೆ, ರಾಜ್ಯ ಅಥವಾ ಜಿಲ್ಲಾ ಹೆಲ್ಪ್ ಲೈನ್ ಗಳಿಗೆ ತಕ್ಷಣ ಕರೆ ಮಾಡಬೇಕು

►ಪ್ರವೇಶ ದ್ವಾರದಲ್ಲಿ ಕಡ್ಡಾಯವಾಗಿ ಹ್ಯಾಂಡ್ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ರೀನಿಂಗ್

►ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದಕ್ಕೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ

ಹೊಟೇಲ್ ಗಳಿಗೆ

►ಪ್ರವೇಶ ದ್ವಾರದಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಇರಬೇಕು

►ಯಾವುದೇ ಲಕ್ಷಣಗಳನ್ನು ಹೊಂದಿಲ್ಲದ ಸಿಬ್ಬಂದಿ ಮತ್ತು ಗ್ರಾಹಕರಿಗೆ ಮಾತ್ರ ಅವಕಾಶ

►ಎಲ್ಲಾ ಸಿಬ್ಬಂದಿ ಮತ್ತು ಅತಿಥಿಗಳು ಮಾಸ್ಕ್ ಧರಿಸಬೇಕು

►ಸುರಕ್ಷಿತ ಅಂತರ ನಿಯಮ ಪಾಲನೆಗಾಗಿ ಸಾಕಷ್ಟು ಜನರನ್ನು ನೇಮಿಸಬೇಕು

►ಸಿಬ್ಬಂದಿಗಳು ಗ್ಲೌಸ್ ಧರಿಸಬೇಕು

►ಹಿರಿಯ ಸಿಬ್ಬಂದಿ, ಗರ್ಭಿಣಿ, ಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವ ಸಿಬ್ಬಂದಿ ಹೆಚ್ಚಿನ ಎಚ್ಚರಿಕೆ ವಹಿಸಬೇಕು

►ಅವರು ಸಾರ್ವಜನಿಕವಾಗಿ ನೇರ ಸಂಪರ್ಕದಲ್ಲಿರುವ ಯಾವುದೇ ಕೆಲಸಗಳನ್ನು ಮಾಡಬಾರದು

► ರೆಸ್ಟೋರೆಂಟ್ ಗಳು ಪಾರ್ಸಲ್ ಸರ್ವಿಸ್ ಗಳಿಗೆ ಆದ್ಯತೆ ನೀಡಬೇಕು. ಫುಡ್ ಡೆಲಿವರಿ ಸಿಬ್ಬಂದಿ ಗ್ರಾಹಕರ ಮನೆ ಬಾಗಿಲುಗಳಲ್ಲಿ ಪ್ಯಾಕೆಟ್ ಗಳನ್ನು ಇರಿಸಬೇಕು. ನೇರವಾಗಿ ಗ್ರಾಹಕರ ಕೈಗೆ ಆಹಾರದ ಪ್ಯಾಕೇಟ್ ಗಳನ್ನು ನೀಡಬೇಡಿ

►ಹೋಮ್ ಡೆಲಿವರಿಗೂ ಮುನ್ನ ಡೆಲಿವರಿ ಸಿಬ್ಬಂದಿಯ ಥರ್ಮಲ್ ಸ್ಕ್ರೀನಿಂಗ್

ಶಾಪಿಂಗ್ ಮಾಲ್ ಗಳಿಗೆ ಸೂಚಿಸಲಾದ ಸುರಕ್ಷೆಗೆ ಸಂಬಂಧಿಸಿದ ಇತರ ನಿಯಮಗಳನ್ನು ಧಾರ್ಮಿಕ ಕೇಂದ್ರಗಳು, ಹೊಟೇಲ್ ಗಳು, ರೆಸ್ಟೋರೆಂಟ್ ಗಳು ಪಾಲಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X