Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅನರ್ಹ, ನಕಲಿ ಪಡಿತರ ಚೀಟಿ ರದ್ದುಪಡಿಸಲು...

ಅನರ್ಹ, ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ ವಹಿಸಿ: ಸಿಎಂ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ4 Jun 2020 10:26 PM IST
share
ಅನರ್ಹ, ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ ವಹಿಸಿ: ಸಿಎಂ ಯಡಿಯೂರಪ್ಪ

ಬೆಂಗಳೂರು, ಜೂ. 4: ಬಿಪಿಎಲ್ ಕಾರ್ಡ್ ಹೊಂದಿರುವ ಸರಕಾರಿ ನೌಕರರು, ಟ್ರ್ಯಾಕ್ಟರ್ ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡ್‍ಗಳನ್ನು ಕೂಡಲೇ ಹಿಂದಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ, ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ನಿರ್ದೇಶನ ನೀಡಿದ್ದಾರೆ.

ಗುರುವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಆಹಾರ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಅರ್ಹ ಫಲಾನುಭವಿಗಳಿಗೆ ಪಡಿತರ ಸೌಲಭ್ಯ ಸಮರ್ಪಕವಾಗಿ ತಲುಪಬೇಕು. ಜೊತೆಗೆ ಅನರ್ಹರು ಈ ಸೌಲಭ್ಯ ದುರುಪಯೋಗಪಡಿಸಿಕೊಳ್ಳದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಇದೇ ವೇಳೆ ಸೂಚಿಸಿದರು.

ಕೊರೋನ ಸೋಂಕು ಪ್ರಾರಂಭಕ್ಕೆ ಮೊದಲು ರಾಜ್ಯದಲ್ಲಿ 63 ಸಾವಿರ ಪಡಿತರ ಕಾರ್ಡುಗಳನ್ನು ರದ್ದುಪಡಿಸಲಾಗಿತ್ತು. ಇದೀಗ ಮತ್ತೆ ಅನರ್ಹ ಮತ್ತು ನಕಲಿ ಪಡಿತರ ಚೀಟಿಗಳ ರದ್ದುಪಡಿಸಲು ಅಭಿಯಾನ ನಡೆಸುವಂತೆ ಸೂಚಿಸಿದ ಸಿಎಂ, ರಾಜ್ಯದ ಬೊಕ್ಕಸಕ್ಕೆ ಆಗುವ ಆರ್ಥಿಕ ಹೊರೆ ಕಡಿಮೆ ಮಾಡಲು ಈ ಅಭಿಯಾನ ನೆರವಾಗಲಿದೆ ಎಂದು ಹೇಳಿದರು.

ಆಹಾರ ಮತ್ತು ನಾಗರಿಕ ಸರಬರಾಜು ನಿಗಮಕ್ಕೆ ಬೆಂಬಲ ಬೆಲೆ ಯೋಜನೆಯಡಿ ಕೃಷಿ ಉತ್ಪನ್ನಗಳ ಖರೀದಿಗೆ ರೈತರಿಗೆ ಹಣ ಪಾವತಿಸಲು ಬಾಕಿ ಇರುವ 240 ಕೋಟಿ ರೂ.ಆವರ್ತ ನಿಧಿಯಿಂದ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದ ಅವರು, ಕೋವಿಡ್-19 ಹಿನ್ನೆಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಪಡಿತರ ವಿತರಣೆ ಮಾಡಲಾಗಿದೆ. ಶೇ.95ರಷ್ಟು ಪಡಿತರ ಚೀಟಿದಾರರು ಪಡಿತರ ಪಡೆದುಕೊಂಡಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿಗಳ ಅನಿಲಭಾಗ್ಯ ಯೋಜನೆಯಡಿ 98,079 ಮಂದಿ ಫಲಾನುಭವಿಗಳಿಗೆ 3 ಅಡುಗೆ ಅನಿಲದ ಸಿಲಿಂಡರ್ ಗಳನ್ನು ಉಚಿತವಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ನಿಗಮದ 53 ಗೋದಾಮುಗಳು ಶಿಥಿಲಾವಸ್ಥೆಯಲ್ಲಿದ್ದು, 42 ಖಾಲಿ ನಿವೇಶನಗಳು ನಿಗಮದ ಒಡೆತನದಲ್ಲಿದೆ. ಈ ಸ್ಥಳಗಳಲ್ಲಿ ಅತ್ಯಾಧುನಿಕ ಸೌಲಭ್ಯಗಳಿರುವ ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ 95 ಗೋದಾಮುಗಳನ್ನು ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ನಿರ್ಮಿಸುವ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಆಹಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X