Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಂಚಪೀಠದ ಬೆಂಬಲ ಪಡೆದು ಲಿಂಗಾಯತ...

ಪಂಚಪೀಠದ ಬೆಂಬಲ ಪಡೆದು ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಮತ್ತೆ ಹೋರಾಟ: ಮಾಜಿ ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ4 Jun 2020 11:16 PM IST
share
ಪಂಚಪೀಠದ ಬೆಂಬಲ ಪಡೆದು ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಮತ್ತೆ ಹೋರಾಟ: ಮಾಜಿ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಜೂ.4: ಪಂಚಪೀಠದವರೂ ಸೇರಿ ಎಲ್ಲರ ವಿಶ್ವಾಸ ಗಳಿಸಿ ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆಗಾಗಿ ತಮ್ಮ ಹೋರಾಟವನ್ನು ಪುನಃ ಮುಂದುವರೆಸುವುದಾಗಿ ಲಿಂಗಾಯತ ಧರ್ಮ ಚಳವಳಿಯ ರೂವಾರಿ ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಎಂ.ಬಿ.ಪಾಟೀಲ್ ಘೋಷಿಸಿದ್ದಾರೆ.

ಆನ್‍ಲೈನ್ ವೆಬ್‍ಪೋರ್ಟಲ್‍ವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಹೇಳಿಕೆಯನ್ನು ನೀಡಿರುವ ಅವರು, ಕೊರೋನ ನಿಯಂತ್ರಣಕ್ಕೆ ಬಂದ ಬಳಿಕ ಮತ್ತು ಲಾಕ್‍ಡೌನ್ ಸಡಿಲಿಕೆ ಬಳಿಕ ಲಿಂಗಾಯತ ಪ್ರತ್ಯೇಕ ಧರ್ಮದ ಎರಡನೇ ಹಂತದ ಹೋರಾಟ ಪ್ರಾರಂಭಿಸಲಾಗುವುದೆಂದು ತಿಳಿಸಿದ್ದಾರೆ.

ಲಿಂಗಾಯತರನ್ನು ಶೂದ್ರ ಗುಂಪಿಗೆ ಸೇರಿಸಲಾಗಿದೆ. ಇದನ್ನು ನನ್ನಿಂದ ಸಹಿಸಿಕೊಳ್ಳಲು ಆಗುತ್ತಿಲ್ಲ. ಲಿಂಗಾಯತ ಸಮುದಾಯದ ಸ್ವಾಮೀಜಿಗಳೆಲ್ಲರೂ ಶೂದ್ರರೆ ಆಗಿದ್ದಾರೆ. ಬಸವ ತತ್ವ ಪರಿಪಾಲಕರಾಗಿರುವ ನನ್ನ ಸಮುದಾಯ ಶೂದ್ರರ ಗುಂಪಿಗೆ ಸೇರುವುದಿಲ್ಲ. ಇದಕ್ಕಾಗಿ ಪ್ರತ್ಯೇಕ ಧರ್ಮಕ್ಕಾಗಿ ತಮ್ಮ ಹೋರಾಟ ನಡೆಯುತ್ತದೆ ಎಂದು ತಿಳಿಸಿದ್ದಾರೆ.

ಇಂದು ವೀರಶೈವ ಎಂದು ಹೇಳಿಕೊಳ್ಳುವವರೆಲ್ಲ ಹಿಂದೂ ಲಿಂಗಾಯತರೇ ಆಗಿದ್ದಾರೆ. ಇದಕ್ಕೆ ದಾಖಲೆಗಳೂ ಇವೆ. ಪ್ರತ್ಯೇಕ ಧರ್ಮ ವಿರೋಧಿಸುವ ರಂಭಾಪುರಿ ಶ್ರೀಗಳು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸಹ ಹಿಂದೂ ಲಿಂಗಾಯತರಾಗಿದ್ದಾರೆ ಎಂದು ಹೇಳಿದರು.

ನಾನು ಬಸವ ಜನ್ಮಭೂಮಿಯಿಂದ ಬಂದವ. ಬಸವ ಧರ್ಮ ಜಾಗತಿಕ ಧರ್ಮ ಆಗಬೇಕು. ಬಸವಣ್ಣನವರ ತತ್ವಗಳು ಜಾಗತಿಕ ಮಟ್ಟದಲ್ಲಿ ಪ್ರಸಾರ ಆಗಬೇಕು. ಬಸವಣ್ಣನವರನ್ನು ನಾವೆಲ್ಲರೂ ಕರ್ನಾಟಕದ ಮಟ್ಟದಲ್ಲಿಯೇ ಕಟ್ಟಿ ಹಾಕಿಬಿಟ್ಟಿದ್ದೇವೆ. ಜೈನ, ಬೌದ್ಧ, ಕ್ರೈಸ್ತ ಧರ್ಮಗಳಂತೆ ಬಸವ ಧರ್ಮ ಸಹ ಜಾಗತಿಕ ಮಟ್ಟದಲ್ಲಿ ಗುರುತಿಸಬೇಕು. ಆ ಮೂಲಕ ಬಸವಣ್ಣನ ತತ್ವಗಳು, ಜಾತಿರಹಿತ ಸಮಾಜದ ಪರಿಕಲ್ಪನೆ ಜಗತ್ತಿಗೆ ತಿಳಿಯಬೇಕು ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X