ನಾಗರಿಕ ಸೇವೆಗಳ ಪ್ರಿಲಿಮ್ಸ್ ಅ.4ರಂದು: ಯುಪಿಎಸ್ಸಿ
ಹೊಸದಿಲ್ಲಿ, ಜೂ.5: ಕೊರೋನ ವೈರಸ್ ಲಾಕ್ಡೌನ್ನಿಂದಾಗಿ ಮುಂದೂಡಲ್ಪಟ್ಟಿದ್ದ 2020ನೇ ಸಾಲಿನ ನಾಗರಿಕ ಸೇವೆಗಳ ಪ್ರಿಲಿಮಿನರಿ ಅಥವಾ ಪೂರ್ವಭಾವಿ ಪರೀಕ್ಷೆಯು ಅಕ್ಟೋಬರ್ 4ರಂದು ನಡೆಯಲಿದೆ ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ)ವು ಶುಕ್ರವಾರ ಪ್ರಕಟಿಸಿದೆ. ಪೂರ್ವ ನಿಗದಿಯಂತೆ ಈ ಪರೀಕ್ಷೆ ಮೇ 31ರಂದು ನಡೆಯಬೇಕಿತ್ತು.
ಕಳೆದ ವರ್ಷದ ನಾಗರಿಕ ಸೇವೆಗಳ ಪ್ರಿಲಿಮಿನರಿ ಮತ್ತು ಮುಖ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗಿದ್ದ ಅಭ್ಯರ್ಥಿಗಳ ವ್ಯಕ್ತಿತ್ವ ಪರೀಕ್ಷೆ ಜುಲೈ 20ರಿಂದ ಪುನರಾರಂಭಗೊಳ್ಳಲಿದೆ ಎಂದು ಯುಪಿಎಸ್ಸಿ ತಿಳಿಸಿದೆ.
Next Story