ಹಿರಿಯ ಬಿಜೆಪಿ ನಾಯಕಿ, ಕೇಂದ್ರ ಸಚಿವ ಗೋಯಲ್ ತಾಯಿ ನಿಧನ
ಹೊಸದಿಲ್ಲಿ, ಜೂ.6: ಹಿರಿಯ ಬಿಜೆಪಿ ನಾಯಕಿ, ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ತಾಯಿ ಚಂದ್ರಕಾಂತಾ ಗೋಯಲ್ ವೃದ್ಧಾಪ್ಯದ ಕಾರಣದಿಂದ ಶುಕ್ರವಾರ ರಾತ್ರಿ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಒಂದು ಅವಧಿಗೆ ಮುಂಬೈಯ ಮೇಯರ್ ಆಗಿ ಕಾರ್ಯನಿರ್ವಹಿಸಿದ್ದ ಚಂದ್ರಕಾಂತಾ ಬಳಿಕ ಮೂರು ಅವಧಿಗೆ ಶಾಸಕಿಯಾಗಿ ಆಯ್ಕೆಯಾಗಿದ್ದರು. ಇವರ ಪತಿ ದಿ ವೇದಪ್ರಕಾಶ್ ಗೋಯಲ್ ದೀರ್ಘಾವಧಿಯವರೆಗೆ ಬಿಜೆಪಿ ಖಜಾಂಚಿಯಾಗಿ ಕಾರ್ಯ ನಿರ್ವಹಿಸಿದ್ದರು. ಅಲ್ಲದೆ ವಾಜಪೇಯಿ ಸರಕಾರದಲ್ಲಿ ಸಚಿವರಾಗಿದ್ದರು. ತಾಯಿಯ ನಿಧನದ ಬಗ್ಗೆ ಪಿಯೂಷ್ ಗೋಯಲ್ ಟ್ವೀಟ್ ಮಾಡಿದ್ದು, ಜನಸೇವೆಗೆ ಆದ್ಯತೆ ನೀಡುತ್ತಿದ್ದ ಅವರು ತಮಗೆಲ್ಲಾ ಸ್ಫೂರ್ತಿಯಾಗಿದ್ದರು ಎಂದು ಹೇಳಿದ್ದಾರೆ. ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ, ಮಾಜಿ ಕೇಂದ್ರ ಸಚಿವ ಸುರೇಶ್ ಪ್ರಭು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
Next Story