Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. Breaking News: ನಟ ಚಿರಂಜೀವಿ ಸರ್ಜಾ...

Breaking News: ನಟ ಚಿರಂಜೀವಿ ಸರ್ಜಾ ನಿಧನ

ವಾರ್ತಾಭಾರತಿವಾರ್ತಾಭಾರತಿ7 Jun 2020 4:35 PM IST
share
Breaking News: ನಟ ಚಿರಂಜೀವಿ ಸರ್ಜಾ ನಿಧನ

ಬೆಂಗಳೂರು, ಜೂ.7: ಕನ್ನಡ ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಸರ್ಜಾ(39) ಹೃದಯಾಘಾತದಿಂದ ರವಿವಾರ ನಿಧನರಾಗಿದ್ದಾರೆ. 

ನಿನ್ನೆ(ಜೂ.6) ರಾತ್ರಿಯಿಂದ ಎದೆನೋವಿನಿಂದ ಬಳಲುತ್ತಿದ್ದ ಅವರು, ಇಂದು ಮಧ್ಯಾಹ್ನ ಮನೆಯಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಕೊನೆ ಉಸಿರೆಳೆದಿದ್ದಾರೆ. ಅವರು ಪತ್ನಿ ಮೇಘನಾ, ಸೋದರ ಮಾವ ಹಿರಿಯ ನಟ ಅರ್ಜುನ್ ಸರ್ಜಾ, ದ್ರುವ ಸರ್ಜಾ ಸೇರಿ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಪರಿಚಯ: 1980ರ ಅ.17ರಂದು ಬೆಂಗಳೂರಿನಲ್ಲಿ ಜನಿಸಿದ ಚಿರಂಜೀವಿ ಸರ್ಜಾ, ಬಾಲ್ಯದ ಶಿಕ್ಷಣವನ್ನು ಬಾಲ್ಡ್ ವಿನ್ ಶಾಲೆಯಲ್ಲಿ ಪೂರ್ಣಗೊಳಿಸಿದರು. ಕಾಲೇಜು ಶಿಕ್ಷಣವನ್ನು ವಿಜಯ ಕಾಲೇಜಿನಲ್ಲಿ ಮುಗಿಸಿ, ನಾಲ್ಕು ವರ್ಷಗಳ ಕಾಲ ಅರ್ಜುನ್ ಸರ್ಜಾ ಬಳಿ ಸಹಾಯಕ ನಿರ್ದೇಶಕನಾಗಿ ಕಾರ್ಯನಿರ್ವಹಿಸಿದ್ದರು. ನಂತರ 2009ರಲ್ಲಿ ವಾಯುಪತ್ರ ಸಿನೆಮಾದ ಮೂಲಕ ಸ್ಯಾಂಡಲ್‍ವುಡ್‍ಗೆ ಪಾದಾರ್ಪಣೆ ಮಾಡಿದ್ದರು.

ಚಿರಂಜೀವಿ ಸರ್ಜಾ ವಾಯುಪುತ್ರ, ಗಂಡೆದೆ, ದಂಡಂದಶಗುಣಂ, ಚಿರು, ಚಂದ್ರಲೇಖ, ವರದನಾಯಕ, ಅಜಿತ್, ರುದ್ರತಾಂಡವ, ರಾಮ್‍ಲೀಲಾ, ಆಟಗಾರ, ಆಕೆ, ಭರ್ಜರಿ, ಸಂಹಾರ, ಅಮ್ಮ ಐ ಲವ್ಯು ಸೇರಿದಂತೆ ಒಟ್ಟು 22ಕ್ಕೂ ಹೆಚ್ಚು ಸಿನೆಮಾಗಳಲ್ಲಿ ನಟಿಸಿದ್ದರು.

ಕಂಬಿನಿ ಮಿಡಿದ ಸಿನೆಮಾ ರಂಗ: ನಟ ಚಿರಂಜೀವಿ ಸರ್ಜಾ ನಿಧನಕ್ಕೆ ಸ್ಯಾಂಡಲ್‍ವುಡ್‍ನ ತಾರೆಯರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಹಿರಿಯ ನಟಿ ತಾರಾ, ಸಂಸದೆ ಸುಮಲತಾ ಅಂಬರೀಶ್, ನಟ ದರ್ಶನ್, ಸುದೀಪ್, ಜಗ್ಗೇಶ್, ನಿಸಾಸಂ ಸತೀಶ್, ನಟಿ ಅಮೂಲ್ಯ ಸೇರಿದಂತೆ ನಿರ್ಮಾಪಕರು, ನಿರ್ದೇಶಕರು ಅವರೊಂದಿಗೆ ಕಳೆದ ಅನುಭವಗಳನ್ನು ಮಾಧ್ಯಮಕ್ಕೆ ಹಂಚಿಕೊಂಡರು.

ಅಪಾರ ಕನಸನ್ನು ಹೊಂದಿದ್ದ ಚಿರಂಜೀವಿ ಸರ್ಜಾ, ಕನ್ನಡ ಚಿತ್ರರಂಗವನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಎಲ್ಲ ಅರ್ಹತೆಯನ್ನು ಹೊಂದಿದ್ದರು. ಹಾಗೂ ಎಲ್ಲರೊಂದಿಗೆ ಆಪ್ತವಾಗಿ ಬೆರೆಯುತ್ತಿದ್ದರು. ಹೊಸ ಪ್ರತಿಭೆಗಳಿಗೆ ಸದಾ ಪ್ರೋತ್ಸಾಹದಾಯಕರಾಗಿದ್ದರು. ಕೇವಲ 39 ವರ್ಷಕ್ಕೆ ಅವರು ನಮ್ಮೊಂದಿಗಿಲ್ಲ ಎಂಬುದನ್ನು ನಂಬುವುದಕ್ಕೆ ಸಾಧ್ಯವಾಗುತ್ತಿಲ್ಲವೆಂದು ಚಿತ್ರತಾರೆಯರು ಕಂಬನಿ ಮಿಡಿದಿದ್ದಾರೆ.

ನಾಳೆ ಅಂತ್ಯಕ್ರಿಯೆ

ನಟ ಚಿರಂಜೀವಿ ಸರ್ಜಾರವರ ಅಂತ್ಯಕ್ರಿಯೆಯನ್ನು ಜೂ.8 ಬೆಳಗ್ಗೆ 11ಕ್ಕೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜೆಕ್ಕೇನಹಳ್ಳಿಯಲ್ಲಿರುವ ಅವರ ತಾತ ಶಕ್ತಿಪ್ರಸಾದ್ ಸಮಾದಿಯ ಬಳಿ ನಡೆಸಲಾಗುತ್ತದೆ ಎಂದು ಕುಟುಂಬ ವರ್ಗದವರು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X