ಆನ್‍ಲೈನ್ ಶಿಕ್ಷಣಕ್ಕೆ ರಾಜ್ಯ ಸರಕಾರ ಅನುಮತಿ ಕೊಟ್ಟಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಕಲಬುರಗಿ, ಜೂ.7: ಕೋವಿಡ್-19 ಹಿನ್ನೆಲೆಯಲ್ಲಿ ಆನ್‍ಲೈನ್ ಶಿಕ್ಷಣಕ್ಕೆ ರಾಜ್ಯ ಸರಕಾರ ಇಲ್ಲಿಯವರೆಗೂ ಅನುಮತಿ ಕೊಟ್ಟಿಲ್ಲವೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ರವಿವಾರ ನಗರದಲ್ಲಿ ಎಸೆಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆ ನಡೆಸಿದ ಅವರು, ಕೊರೋನ ಸೋಂಕು ತೀವ್ರಗೊಂಡ ನಂತರ ಎಲ್ಲ ಕಡೆ ಆನ್‍ಲೈನ್ ಶಿಕ್ಷಣಕ್ಕೆ ಒತ್ತು ಕೊಡಲಾಗುತ್ತಿದೆ. ಆದರೆ, ಚಿಕ್ಕ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ಸೂಕ್ತವೂ ಅಲ್ಲ. ಅದು ಮುಖ್ಯವಾದ ಬೋಧನೆಯ ಪ್ರಕಾರವು ಅಲ್ಲವೆಂದು ಸಚಿವರು ತಿಳಿಸಿದ್ದಾರೆ.
ಆನ್‍ಲೈನ್ ಶಿಕ್ಷಣಕ್ಕೆ ಪೂರಕವಾದ ವಾತಾವರಣ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಆನ್‍ಲೈನ್ ಶಿಕ್ಷಣದ ಸಂಬಂಧ ನಿಮ್ಹಾನ್ಸ್ ಗೆ ಪತ್ರ ಬರೆಯಲಾಗಿತ್ತು. ಅಲ್ಲಿಂದ ಸುಧೀರ್ಘವಾದ ಪತ್ರ ಬಂದಿದೆ. ಅದನ್ನು ಪರಿಶೀಲನೆ ಮಾಡಿ ನಂತರ ಆನ್‍ಲೈನ್ ಶಿಕ್ಷಣದ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದೆಂದು ಅವರು ಹೇಳಿದ್ದಾರೆ.
Next Story





