ಝೂಂ ಆ್ಯಪ್‌ನಲ್ಲಿ ನೇರಪ್ರಸಾರ ವೀಕ್ಷಣೆ

ಉಡುಪಿ, ಜೂ.7: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದ ಪೂರ್ವಭಾವಿಯಾಗಿ ರವಿವಾರ ನಡೆದ ಕೊರೋನಾ ಕುರಿತ ಚರ್ಚೆಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಝೂಂ ಆ್ಯಪ್‌ನಲ್ಲಿ ನೇರ್ರಸಾರದ ಮೂಲಕ ವೀಕ್ಷಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಯು.ಆರ್.ಸಭಾಪತಿ, ಸಂಯೋಜಕರಾದ ಮಂಗಳೂರಿನ ಕಾರ್ಪೋರೇಟರ್ ವಿನಯರಾಜ್, ಪಡು ಬಿದ್ರಿಯ ಸುಕುಮಾರ್, ಕೃಷ್ಣಮೂರ್ತಿ ಆಚಾರ್ಯ, ಅಮೃತಾ ಕೃಷ್ಣಮೂರ್ತಿ ಆಚಾರ್ಯ, ರೆನಾಲ್ಡ್ ಪ್ರವೀಣ್ ಕುಮಾರ್, ಭಾಸ್ಕರ್ ರಾವ್ ಕಿದಿಯೂರು, ಐಟಿ ಸೆಲ್‌ನ ಪ್ರಭಾಕರ್ ಆಚಾರ್ಯ, ಕಾರ್ತಿಕ್ ಮೊದಲಾದವರು ಉಪಸ್ಥಿತರಿದ್ದರು.
Next Story





