Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆ: ಬಸ್‌ಗಳ ಓಡಾಟಕ್ಕೆ...

ದ.ಕ. ಜಿಲ್ಲೆ: ಬಸ್‌ಗಳ ಓಡಾಟಕ್ಕೆ ಹಿಂದೇಟು; ನಷ್ಟದಲ್ಲಿ ಖಾಸಗಿ ಬಸ್ ಉದ್ಯಮ

ವಾರ್ತಾಭಾರತಿವಾರ್ತಾಭಾರತಿ7 Jun 2020 9:45 PM IST
share

ಮಂಗಳೂರು, ಜೂ.7: ಕೊರೋನ-ಲಾಕ್‌ಡೌನ್ ಹಿನ್ನೆಲೆಯಲ್ಲಿ ಸತತ 71 ದಿನಗಳ ಕಾಲ ಸಂಚಾರ ಆರಂಭಿಸದಿದ್ದ ದ.ಕ.ಜಿಲ್ಲೆಯ ಖಾಸಗಿ ಬಸ್‌ಗಳ ಪೈಕಿ ಕೆಲವು ಬಸ್‌ಗಳು ಜೂ.1ರಿಂದ ಸಂಚಾರ ಆರಂಭಿಸಿದರೂ ಕೂಡ ಜೂ.8ರಿಂದ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆರಂಭಿಸಲು ಮಾಲಕರು ಹಿಂದೇಟು ಹಾಕುತ್ತಿದ್ದಾರೆ.

ಜೂ.1ರಂದು 120 ಬಸ್‌ಗಳು ಓಡಾಟ ಆರಂಭಿಸಿತ್ತು. ಆ ಬಳಿಕ ಬಜ್ಪೆ, ತಲಪಾಡಿ, ಸುರತ್ಕಲ್ ಪ್ರದೇಶದಲ್ಲಿ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್‌ಗಳ ಓಡಾಟದ ಸಂಖ್ಯೆಯಲ್ಲಿ ಸ್ವಲ್ಪ ಹೆಚ್ಚಳ ಕಂಡು ಬಂದಿತ್ತು. ಅಂದರೆ ಹೆಚ್ಚುವರಿಯಾಗಿ 20-30 ಬಸ್‌ಗಳು ಓಡಾಡುತ್ತಿದ್ದವು. ಆದರೆ ತೀರಾ ನಷ್ಟದಲ್ಲೇ ಬಸ್‌ಗಳು ಓಡಾಟ ನಡೆಸಿದ ಕಾರಣ ಲಾಕ್‌ಡೌನ್ ಸಂಪೂರ್ಣ ತೆರವಾಗಿ ಜನರಲ್ಲಿ ಕೊರೋನ ಕುರಿತಾದ ಭಯ-ಆತಂಕ ದೂರ ಆಗುವವರೆಗೆ ಅಥವಾ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುವವರೆಗೆ ಪೂರ್ಣ ಪ್ರಮಾಣದಲ್ಲಿ ಬಸ್ ಓಡಾಟ ನಡೆಸದಿರಲು ಖಾಸಗಿ ಮಾಲಕರು ಸ್ವಯಂ ನಿರ್ಧರಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ‘ಕಳೆದೊಂದು ವಾರ ಎಲ್ಲಾ ಬಸ್‌ಗಳ ಮಾಲಕರು ಸಂಪೂರ್ಣ ನಷ್ಟ ಅನುಭವಿಸಿದ್ದಾರೆ. ಸರಾಸರಿ 1 ಬಸ್‌ನಲ್ಲಿ ಸುಮಾರು 8 ಸಾವಿರ ರೂ.ವರೆಗೆ ನಷ್ಟವಾಗಿವೆ. ಅಂದರೆ ಕಳೆದೊಂದು ವಾರದಲ್ಲಿ ಸಿಟಿ ಬಸ್ ಉದ್ಯಮಕ್ಕೆ ಅಂದಾಜು 80 ಲಕ್ಷ ರೂ.ವರೆಗೆ ನಷ್ಟವಾಗಿದೆ. ಕೆಲವು ಬಸ್ ಮಾಲಕರಿಗೆ ಚಾಲಕ-ನಿರ್ವಾಹಕರಿಗೆ ಸಂಬಳ ಕೊಡುವಷ್ಟು ಕಲೆಕ್ಷನ್ ಬಂದಿಲ್ಲ. ಇನ್ನು ಕೆಲವರಿಗೆ ಡೀಸೆಲ್ ಹಾಕಲೂ ಹಣ ಬಂದಿಲ್ಲ. ಒಟ್ಟಿನಲ್ಲಿ ನಷ್ಟದಲ್ಲೇ ಮುಂದುವರಿದಿದೆ. ಶನಿವಾರ ಒಂದಷ್ಟು ಕಲೆಕ್ಷನ್ ಬಂದರೂ ಕೂಡ ರವಿವಾರ ಏನೇನೂ ಆಗಿಲ್ಲ. ಹಲವು ರೂಟ್‌ಗಳಲ್ಲಿ ರವಿವಾರ ಬಸ್ ಓಡಿಸಲು ವಾತಾವರಣ ಪೂರಕವಾಗಿರಲಿಲ್ಲ. ಈ ನಷ್ಟ ಭರಿಸಲು ಸಾಧ್ಯವಿಲ್ಲದಿದ್ದರೂ ಭವಿಷ್ಯದ ಹಿತದೃಷ್ಟಿಯಿಂದ ಬಸ್ ಓಡಾಟ ನಡೆಸಬೇಕಿದೆ. ಸದ್ಯ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆರಂಭಿಸಲು ಕಾಲ ಸೂಕ್ತವಾಗಿಲ್ಲ. ಪರಿಸ್ಥಿತಿ ಅವಲೋಕಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X