Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್‍ನಿಂದ ಸಾವು ಸಂಭವಿಸದಂತೆ...

ಕೋವಿಡ್‍ನಿಂದ ಸಾವು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಎಲ್.ಕೆ.ಅತೀಕ್ ಕಟ್ಟುನಿಟ್ಟಿನ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 Jun 2020 11:11 PM IST
share

ಬೆಳಗಾವಿ, ಜೂ.7: ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಕೋವಿಡ್-19 ಸೋಂಕಿನಿಂದ ಸಾವು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು. ಮನೆ ಮನೆಗೆ ತೆರಳಿ ಸಮೀಕ್ಷೆ ಕೈಗೊಂಡು ಉಸಿರಾಟದ ತೊಂದರೆ, ಜ್ವರ ಮತ್ತಿತರ ಸೋಂಕಿನ ಲಕ್ಷಣಗಳು ಇರುವ ಹಿರಿಯ ನಾಗರಿಕರನ್ನು ಗುರುತಿಸಿ ಸಕಾಲಕ್ಕೆ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವೈದ್ಯಕೀಯ ಸೌಲಭ್ಯ ದೊರಕದೆ ಇರುವುದರಿಂದ ರಕ್ತದೊತ್ತಡ, ಮಧುಮೇಹ, ಹೃದಯ ಹಾಗೂ ಕಿಡ್ನಿ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ತೊಂದರೆ ಆಗುತ್ತಿದೆ. ಆದುದರಿಂದ, ಇಂತಹ ಜನರಿಗೆ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯ ಒದಗಿಸುವ ಬಗ್ಗೆ ಕ್ರಮಕೈಗೊಳ್ಳಬೇಕು ಎಂದರು.

ಖಾಸಗಿ ಆಸ್ಪತ್ರೆ ಆರಂಭಿಸಲು ಕ್ರಮಕ್ಕೆ ಸೂಚನೆ: ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳು ಸೂಕ್ತ ಮುಂಜಾಗ್ರತೆಯ ಜತೆಗೆ ಸಾರ್ವಜನಿಕರಿಗೆ ವೈದ್ಯಕೀಯ ಸೌಲಭ್ಯ ನೀಡಬೇಕು. ಯಾವುದೆ ರೋಗಿಗೆ ಚಿಕಿತ್ಸೆ ನಿರಾಕರಿಸದಂತೆ ಖಾಸಗಿ ಕ್ಲಿನಿಕ್ ಹಾಗೂ ಆಸ್ಪತ್ರೆಗಳಿಗೆ ಸೂಚನೆ ನೀಡುವಂತೆ ಜಿಲ್ಲಾಧಿಕಾರಿಗೆ ಅತೀಕ್ ತಿಳಿಸಿದರು.

ಕೋವಿಡ್-19 ಸೋಂಕು ಇಲ್ಲದಿರುವವರು ವೈದ್ಯಕೀಯ ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾಡಳಿತದಿಂದ ಕಾರ್ಯಾಗಾರ ಆಯೋಜಿಸುವ ಮೂಲಕ ಕೋವಿಡ್-19 ಹೊರತುಪಡಿಸಿ ಇತರೆ ಪ್ರಕರಣಗಳ ನಿರ್ಹಣೆಯ ಬಗ್ಗೆ ಅರಿವು ಮೂಡಿಸುವಂತೆ ಅವರು ಸಲಹೆ ನೀಡಿದರು.

ಮನೆ ಮನೆ ಆರೋಗ್ಯ ಸಮೀಕ್ಷೆ ನಡೆಸುವ ಮೂಲಕ ಮಕ್ಕಳು ಮತ್ತು ಹಿರಿಯ ನಾಗರಿಕರ ಆರೋಗ್ಯದ ಮಾಹಿತಿಯನ್ನು ಕಲೆಹಾಕಬೇಕು ಎಂದ ಅವರು, ಕೋವಿಡ್-19 ಸಕ್ರಿಯ ಪ್ರಕರಣಗಳ ನಿರ್ವಹಣೆ, ಕಂಟೈನ್ಮೆಂಟ್ ಝೋನ್ ಹಾಗೂ ಕ್ವಾರಂಟೈನ್ ಕೇಂದ್ರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.

ಬಿಮ್ಸ್ ಆಸ್ಪತ್ರೆಯಲ್ಲೂ ಗಂಟಲು ದ್ರವದ ಮಾದರಿ ಪರೀಕ್ಷಿಸಲು ಕೂಡಲೇ ಪ್ರಯೋಗಾಲಯ ಆರಂಭಿಸುವಂತೆ ಅತೀಕ್ ಸೂಚನೆ ನೀಡಿದರು. ಅಲ್ಲದೆ, ಜಿಲ್ಲೆಯ ಮಳೆ-ಬೆಳೆಯ ಪ್ರಮಾಣ ಮತ್ತು ಬೀಜ, ಗೊಬ್ಬರ ಪೂರೈಕೆ ಬಗ್ಗೆ ಕೃಷಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ಕಳೆದ ಬಾರಿ ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿರುವವರಿಗೆ ಪರಿಹಾರ ವಿತರಣೆ ಮತ್ತು ಮನೆಗಳ ನಿರ್ಮಾಣದ ಕುರಿತು ಚರ್ಚಿಸಿದರು.

ಸರಕಾರದ ಮಾರ್ಗಸೂಚಿ ಪ್ರಕಾರ ಸೋಂಕಿತರ ಗಂಟಲು ದ್ರವ ಮಾದರಿಗಳನ್ನು ಮತ್ತೆ ಪ್ರಯೋಗಾಲಯಕ್ಕೆ ಕಳಿಸಲಾಗುತ್ತಿದೆ. ಸದ್ಯಕ್ಕೆ ಯಾವುದೇ ಒತ್ತಡಗಳಿಲ್ಲ. ಆದ್ದರಿಂದ ವರದಿ ಬೇಗ ಲಭಿಸುತ್ತಿವೆ ಎಂದು ಜಿಲ್ಲೆಯ ವಿಶೇಷ ಕೋವಿಡ್-19 ನಿಯಂತ್ರಣಾಧಿಕಾರಿ ರಾಜೇಂದ್ರ ಚೋಳನ್ ತಿಳಿಸಿದರು.

ಹೋಮ್ ಕ್ವಾರಂಟೈನ್ ಮಾರ್ಗಸೂಚಿ ಉಲ್ಲಂಘಿಸುವವರನ್ನು ಗುರುತಿಸಿ ಪ್ರಕರಣ ದಾಖಲಿಸಲಾಗುತ್ತಿದೆ. ಅಂತಹವರನ್ನು ಸಾಂಸ್ಥಿಕ ಕ್ವಾರಂಟೈನ್‍ಗೆ ಕಳಿಸಲು ಪರಿಶೀಲಿಸಲಾಗುವುದು ಎಂದು ಅವರು ಹೇಳಿದರು.

ಅದೇ ರೀತಿ ಜಿಲ್ಲೆಯ ಕೋವಿಡ್-19 ನಿಗದಿತ ಆಸ್ಪತ್ರೆ ಮೇಲಿನ ಒತ್ತಡ ಕಡಿಮೆಗೊಳಿಸುವ ನಿಟ್ಟಿನಲ್ಲಿ ತಾಲೂಕು ಆಸ್ಪತ್ರೆಗಳಲ್ಲೂ ಸೋಂಕಿತರಿಗೆ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಕ್ವಾರಂಟೈನ್ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. 45 ಸಕ್ರಿಯ ಕಂಟೈನ್ಮೆಂಟ್ ಝೋನ್ ಗಳಿವೆ. ಸದ್ಯಕ್ಕೆ ಸಕ್ರಿಯ ಪ್ರಕರಣಗಳ ಪೈಕಿ ಯಾರೂ ವೆಂಟಿಲೇಟರ್‍ನಲ್ಲಿ ಇಲ್ಲ. ಕೋವಿಡ್-19 ಸೋಂಕು ಹೊರತುಪಡಿಸಿ ಇತರರಿಗೆ ವೈದ್ಯಕೀಯ ಸೌಲಭ್ಯ ನೀಡುವಂತೆ ಈಗಾಗಲೇ ಖಾಸಗಿ ಕ್ಲಿನಿಕ್ ಹಾಗೂ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದ್ದು, ಸಾರ್ವಜನಿಕರಿಗೆ ವೈದ್ಯಕೀಯ ಸೌಲಭ್ಯ ನೀಡದ ಆಸ್ಪತ್ರೆ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮುನ್ಯಾಳ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ್, ಬೆಳಗಾವಿ ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್ ಸೇರಿದಂತೆ ಇನ್ನಿತರರು ಸಭೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X