ಪರೀಕ್ಷಾ ಕೇಂದ್ರ ಬದಲಾವಣೆ ಕೋರಿ 28 ಸಾವಿರ ಅರ್ಜಿ ಸಲ್ಲಿಕೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ಜೂ.7: ಕೊರೋನ ಭೀತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಇದ್ದಲ್ಲೇ ಪರೀಕ್ಷೆ ಬರೆಯಲು ಅವಕಾಶ ನೀಡುವ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದು, 28,500 ಕ್ಕೂ ಅಧಿಕ ವಿದ್ಯಾರ್ಥಿಗಳು ಸಿಇಟಿ ಪರೀಕ್ಷಾ ಕೇಂದ್ರ ಬದಲಾವಣೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿದ್ದು, ಬದಲಾವಣೆ ಕೋರಿದ ಎಲ್ಲರಿಗೂ ತಾವು ಕೇಳಿದ ಪರೀಕ್ಷಾ ಕೇಂದ್ರದಲ್ಲೇ ಪರೀಕ್ಷೆ ಬರೆಯುವ ಅವಕಾಶ ಸಿಗುವುದು ಅನುಮಾನ. ಒಂದು ಕೇಂದ್ರದಲ್ಲಿ 250ಕ್ಕೂ ಅಧಿಕ ಅಭ್ಯರ್ಥಿಗಳಿದ್ದಲ್ಲಿ ಅಲ್ಲಿ ಪರೀಕ್ಷೆ ಆಯೋಜಿಸಲು ಸಾಧ್ಯ ಎಂದು ಕೆಇಎ ಅಧಿಕಾರಿಗಳು ಹೇಳಿದ್ದಾರೆ.
ಬೆರಳಣಿಕೆ ಅಭ್ಯರ್ಥಿಗಳಿದ್ದರೆ ಆಯ್ಕೆ ಮಾಡಿಕೊಂಡ ಪರೀಕ್ಷಾ ಕೇಂದ್ರದಲ್ಲೇ ಪರೀಕ್ಷೆ ನೀಡುವುದು ಕಷ್ಟವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆಯ್ಕೆ ಮಾಡುವಂತೆ ಸೂಚಿಸಲಾಗಿತ್ತು. ಜು.30 ಹಾಗೂ 31ರಂದು ಪರೀಕ್ಷೆ ನಡೆಯಲಿದ್ದು, 1.94 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ.
Next Story





