ಜಮ್ಮು-ಕಾಶ್ಮೀರ: ಎನ್ಕೌಂಟರ್ನಲ್ಲಿ ನಾಲ್ವರು ಉಗ್ರರು ಹತ
![ಜಮ್ಮು-ಕಾಶ್ಮೀರ: ಎನ್ಕೌಂಟರ್ನಲ್ಲಿ ನಾಲ್ವರು ಉಗ್ರರು ಹತ ಜಮ್ಮು-ಕಾಶ್ಮೀರ: ಎನ್ಕೌಂಟರ್ನಲ್ಲಿ ನಾಲ್ವರು ಉಗ್ರರು ಹತ](https://www.varthabharati.in/sites/default/files/images/articles/2020/06/8/246574-1591592722.jpg)
ಶ್ರೀನಗರ,ಜೂ.8:ಜಮ್ಮುಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆಸಿದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾಪಡೆಗಳು ದಕ್ಷಿಣ ಕಾಶ್ಮೀರದ ಪಿಂಜೋರಾ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಿದ್ದವು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶೋಧ ಕಾರ್ಯಾಚರಣೆಯಲ್ಲಿ ನಿರತರಾಗಿದ್ದ ಭದ್ರತಾ ಸಿಬ್ಬಂದಿಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಬಳಿಕ ಎನ್ಕೌಂಟರ್ ನಡೆಸಲಾಯಿತು. ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸ್ಅಧಿಕಾರಿ ತಿಳಿಸಿದ್ದಾರೆ.
ಪೊಲೀಸರು ಹತರಾದ ಉಗ್ರರ ಗುರುತು ಹಾಗೂ ಅವರು ಯಾವ ಉಗ್ರ ಸಂಘಟನೆಗೆ ಸೇರಿದ್ದಾರೆ ಎಂದು ಬಹಿರಂಗಪಡಿಸಿಲ್ಲ.
ಕಳೆದ 24 ಗಂಟೆಗಳಲ್ಲಿ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿರುವ ಎರಡನೇ ಎನ್ಕೌಂಟರ್ ಇದಾಗಿದೆ. ರವಿವಾರ ಜಿಲ್ಲೆಯ ರೆಬಾನ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಸ್ವಯಂಘೋಷಿತ ಕಮಾಂಡರ್ ಸಹಿತ ಹಿಝ್ಬಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಐವರು ಉಗ್ರರು ಹತರಾಗಿದ್ದರು.