ನವಜಾತ ಶಿಶು ಸಾವು: ದೂರು ದಾಖಲು
ಮಂಗಳೂರು, ಜೂ.8: ನವಜಾತ ಶಿಶುವೊಂದು ಸಾವನ್ನಪ್ಪಿದ ಬಗ್ಗೆ ನಗರದ ಮಂಗಳೂರು ಪೂರ್ವ (ಕದ್ರಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುದ್ರೋಳಿಯ ಗರ್ಭಿಣಿ ಜೂ. 3ರಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಜೂ. 4 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಮಗು ಅಸ್ವಸ್ಥವಾಗಿದ್ದರಿಂದ ಬೇರೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಸ್ವಸ್ಥಗೊಂಡಿದ್ದ ಮಗು ಜೂ.8ರಂದು ಸಾವನ್ನಪ್ಪಿದೆ.
ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Next Story





