ಬೆಳ್ತಂಗಡಿ, ಜೂ.9: ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಇದೇ ಸಂದರ್ಭ ಅವರು ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿದರು. ಸಚಿವರೊಂದಿಗೆ ಶಾಸಕ ಹರೀಶ್ ಪೂಂಜಾ ಹಾಗೂ ಇತರರು ಉಪಸ್ಥಿತರಿದ್ದರು.