ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಮುಂದೂಡಿಕೆ

ಬೆಂಗಳೂರು, ಜೂ. 9: ಕೊರೋನ ವೈರಸ್ ಸೋಂಕು ತಡೆಗಟ್ಟಲು ಹೇರಿರುವ ಲಾಕ್‍ಡೌನ್ ಹಿನ್ನೆಲೆಯಲ್ಲಿ ವಿಧಾನ ಪರಿಷತ್ತಿನ ಎರಡು ಪದವೀಧರ ಕ್ಷೇತ್ರಗಳು ಮತ್ತು ಎರಡು ಶಿಕ್ಷಕರ ಕೇತ್ರಗಳ ಚುನಾವಣೆ ಮುಂದೂಡಿಕೆ ಮಾಡಲು ಚುನಾವಣಾ ಅಯೋಗ ತೀರ್ಮಾನಿಸಿದೆ.
ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ಆಯ್ಕೆಯಾಗಿದ್ದ ಸದಸ್ಯರ ಅವಧಿ ಇದೇ ತಿಂಗಳ 30ಕ್ಕೆ ಪೂರ್ಣಗೊಳ್ಳಲಿದೆ. ಆದರೆ, ಕೊರೋನ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ನಿಗದಿತ ಅವಧಿಯಲ್ಲಿ ಚುನಾವಣೆ ಪ್ರಕ್ರಿಯೆ ಆರಂಭಿಸಲು ಸಾಧ್ಯವಿಲ್ಲ ಎಂದು ಆಯೋಗ ತಿಳಿಸಿದೆ.
ವಿಧಾನ ಪರಿಷತ್ತಿನ ಎರಡು ಪದವೀಧರ ಕ್ಷೇತ್ರಗಳು ಮತ್ತು ಎರಡು ಶಿಕ್ಷಕರ ಕೇತ್ರಗಳ ಚುನಾವಣೆಯನ್ನು ನಡೆಸುವ ಸಂಬಂಧ ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
Next Story





