ನೇತ್ರಾವತಿ ನದಿ ತೀರದಲ್ಲಿ ಯುವಕನ ಮೃತದೇಹ ಪತ್ತೆ

ಮಂಗಳೂರು, ಜೂ. 9: ನೇತ್ರಾವತಿ ನದಿ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹವೊಂದು ಮಂಗಳವಾರ ಪತ್ತೆಯಾಗಿದೆ.
ಮೃತರನ್ನು ಕೊಲ್ಯ ಸಾರಸ್ವತ ಕಾಲನಿ ನಿವಾಸಿ ಚೇತನ್ ಆಚಾರ್ಯ (33)ಎಂದು ಗುರುತಿಸಲಾಗಿದೆ. ಇಲ್ಲಿನ ಉಳ್ಳಾಲ ಹೊಯ್ಗೆ ನದಿ ತೀರದಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚೇತನ್ ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಎನ್ನಲಾಗಿದ್ದು, ಕುಟುಂಬಸ್ಥರು ಎಲ್ಲಾ ಕಡೆ ಹುಡುಕಾಡಿ ಇಂದು ಬೆಳಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಚೇತನ್ ಇತ್ತೀಚೆಕೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದ್ದು, ಇದೇ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
ಉಳ್ಳಾಲ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





