Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೀನಾದ ಬಲಪ್ರದರ್ಶನಕ್ಕೆ ಭಾರತ...

ಚೀನಾದ ಬಲಪ್ರದರ್ಶನಕ್ಕೆ ಭಾರತ ಬಗ್ಗುವುದಿಲ್ಲ: ಅಮಿತ್ ಶಾ, ರಾಜನಾಥ್ ಸಿಂಗ್ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ9 Jun 2020 11:16 PM IST
share
ಚೀನಾದ ಬಲಪ್ರದರ್ಶನಕ್ಕೆ ಭಾರತ ಬಗ್ಗುವುದಿಲ್ಲ: ಅಮಿತ್ ಶಾ, ರಾಜನಾಥ್ ಸಿಂಗ್ ಹೇಳಿಕೆ

ಹೊಸದಿಲ್ಲಿ, ಜೂ.9: ಬಲಪ್ರದರ್ಶನದ ಮೂಲಕ ಭಾರತವನ್ನು ಹೆದರಿಸಿ ಲಡಾಖ್ ಪ್ರದೇಶದಲ್ಲಿ ಇನ್ನಷ್ಟು ಭೂಮಿಯನ್ನು ಕಸಿದುಕೊಳ್ಳುವ ಚೀನಾದ ಪ್ರಯತ್ನ ಫಲಿಸದು. ಚೀನಾದ ಬಲಪ್ರದರ್ಶನಕ್ಕೆ ಭಾರತ ಬಗ್ಗುವುದಿಲ್ಲ ಎಂದು ಗೃಹಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಪ್ರತ್ಯೇಕ ವೀಡಿಯೊ ಕಾನ್ಫರೆನ್ಸ್ ಮೂಲಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾ ಮತ್ತು ಸಿಂಗ್, ರಾಷ್ಟ್ರೀಯ ಹಿತಾಸಕ್ತಿ ಮತ್ತು ಸ್ವಾಭಿಮಾನವನ್ನು ಬಲಿಗೊಟ್ಟು ಭಾರತ ಯಾರಿಗೂ ಯಾವುದೇ ರಿಯಾಯಿತಿ ನೀಡುವುದಿಲ್ಲ ಎಂದರು. ಅಮೆರಿಕ ಮತ್ತು ಇಸ್ರೇಲ್‌ನಂತೆಯೇ ಭಾರತವೂ ಇತರರಿಗಿಂತ ಮುಂಚಿತವಾಗಿಯೇ ದಾಳಿ ನಡೆಸುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿದ ಅಮಿತ್ ಶಾ, ಪಾಕ್‌ನ ಬಾಲಕೋಟ್ ಪ್ರದೇಶದ ಮೇಲೆ ಭಾರತ ನಡೆಸಿದ ದಾಳಿಯನ್ನು ಉಲ್ಲೇಖಿಸಿದರು.

ಈ ಹಿಂದೆ ದೇಶದಲ್ಲಿ ನಡೆದಂತ ಭಯೋತ್ಪಾದಕ ದಾಳಿ ಈಗಲೂ ನಡೆದಿದೆ. ಆದರೆ ಹಿಂದಿನ ಪ್ರಧಾನಿಗಳಂತೆ ಪ್ರಧಾನಿ ಮೋದಿ ವೌನವಾಗಿ ಕುಳಿತುಕೊಳ್ಳಲಿಲ್ಲ. ಪಾಕಿಸ್ತಾನದ ನೆಲಕ್ಕೆ ಪ್ರವೇಶಿಸಿ ವಾಯುದಾಳಿ ಮತ್ತು ಸರ್ಜಿಕಲ್ ದಾಳಿಯ ಮೂಲಕ ಇದಕ್ಕೆ ಪ್ರತ್ಯುತ್ತರ ನೀಡಿ ಅವರಿಗೆ ಪಾಠ ಕಲಿಸಿದರು. ತನ್ನ ಗಡಿಯನ್ನು ಅತ್ರಿಕಮಿಸುವವರನ್ನು ಭಾರತ ಸುಮ್ಮನೆ ಬಿಡುವುದಿಲ್ಲ ಎಂಬುದು ಇದರಿಂದ ಇಡೀ ವಿಶ್ವಕ್ಕೆ ಮನದಟ್ಟಾಯಿತು ಎಂದು ಒಡಿಶಾದಲ್ಲಿ ಮಾತನಾಡಿದ ಶಾ ಹೇಳಿದರು.

ಮಹಾರಾಷ್ಟ್ರದಲ್ಲಿ ವೀಡಿಯೊ ಕಾನ್ಪರೆನ್ಸ್ ಮೂಲಕ ಮಾತನಾಡಿದ ರಾಜನಾಥ್ ಸಿಂಗ್, ದೇಶದ ನಾಯಕತ್ವ ಬಲಿಷ್ಟ ಕೈಗಳಲ್ಲಿದೆ. ಭಾರತ ಇತರ ದೇಶದ ಘನತೆ ಮತ್ತು ಸಾರ್ವಭೌಮತ್ವವನ್ನು ಗೌರವಿಸುವುದರಿಂದ ದೇಶದ ಘನತೆ ಮತ್ತು ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ ಎಂದರು. ಚೀನಾದೊಂದಿಗೆ ಮಿಲಿಟರಿ ಮತ್ತು ರಾಜತಾಂತ್ರಿಕ ಮಾರ್ಗದಲ್ಲಿ ಮಾತುಕತೆ ಮುಂದುವರಿದಿದೆ. ಜೂನ್ 6ರಂದು ನಡೆದ ಮಿಲಿಟರಿ ಮಟ್ಟದ ಮಾತುಕತೆ ಸಕಾರಾತ್ಮಕ ರೀತಿಯಲ್ಲಿ ನಡೆದಿದೆ. ಗಡಿ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಮಾತುಕತೆ ಮುಂದುವರಿಸಲು ಎರಡೂ ದೇಶಗಳು ಸಮ್ಮತಿಸಿವೆ. ಗಡಿಭಾಗದಲ್ಲಿ ಏನು ನಡೆಯುತ್ತಿದೆ ಎಂದು ಕೆಲವು ಕಾಂಗ್ರೆಸ್ ಮುಖಂಡರು ಪದೇ ಪದೇ ಪ್ರಶ್ನಿಸುತ್ತಿದ್ದಾರೆ. ಜನತೆಯಿಂದ ಮುಚ್ಚಿಡುವಂತದ್ದು ಏನೂ ಇಲ್ಲ. ಈ ಬಗ್ಗೆ ವಿವರವಾದ ಹೇಳಿಕೆಯನ್ನು ಸಂಸತ್ತಿನಲ್ಲಿ ನೀಡಲಿದ್ದೇನೆ ಎಂದು ಸಿಂಗ್ ಹೇಳಿದರು.

ಗಾಲಿಬ್ ಕವನದ ಸಾಲು ಉದ್ಧರಿಸಿ ರಾಹುಲ್‌ಗೆ ಇದಿರೇಟು

ಗಡಿಯಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಬಗ್ಗೆ ಕೆಲವು ದಿನಗಳಿಂದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹಾಗೂ ರಾಜನಾಥ್ ಸಿಂಗ್ ಮಧ್ಯೆ ಟ್ವಿಟರ್‌ನಲ್ಲಿ ಮಾತಿನ ಚಕಮಕಿ ನಡೆಯುತ್ತಿದೆ. ಕವಿ ಮಿರ್ಝಾ ಗಾಲಿಬರ ಕವನದ ಮೂಲಕ ರಾಹುಲ್ ಗಾಂಧಿ ಕೇಂದ್ರ ಸರಕಾರವನ್ನು ಟೀಕಿಸಿದರೆ, ಅದಕ್ಕೆ ಗಾಲಿಬ್ ಕವನದ ಮೂಲಕವೇ ಉತ್ತರಿಸಿರುವ ಸಿಂಗ್, “ಕೈಗೆ ನೋವಾಗಿದ್ದರೆ ಔಷಧ ಹಚ್ಚಬಹುದು. ಆದರೆ ಕೈಯೇ ನೋವಾಗಿ ಪರಿಣಮಿಸಿದರೆ ಏನು ಮಾಡುವುದು” ಎಂದರು (ಕೈ ಕಾಂಗ್ರೆಸ್‌ನ ಚಿಹ್ನೆಯಾಗಿದೆ). ಗಾಲಿಬ್ ಕವನದಲ್ಲಿರುವ ಹೃದಯ ಎಂಬ ಪದದ ಬದಲು ಕೈ ಎಂಬ ಪದವನ್ನು ರಾಜ್‌ನಾಥ್ ಸಿಂಗ್ ಬಳಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X