ಬಂಟ್ವಾಳ: ಕೊಲೆಯತ್ನ ಪ್ರಕರಣ ; ಆರೋಪಿಗಳಿಗೆ ಜಾಮೀನು
ಬಂಟ್ವಾಳ : ತಾಲೂಕಿನಲ್ಲಿ ನಡೆದ ಕೊಲೆಯತ್ನ ಪ್ರಕರಣ ಒಂದಕ್ಕೆ ಸಂಬಂಧಿಸಿ ಹತ್ತು ಮಂದಿ ಆರೋಪಿಗಳಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ.
ಮೇ 22ರಂದು ಬಂಟ್ವಾಳ ತಾಲೂಕಿನ ಅರಳ ಗ್ರಾಮದ ಮೂಲರಪಟ್ಣ ಎಂಬಲ್ಲಿ ಮರಳುಗಾರಿಕೆ ವಿಚಾರದಲ್ಲಿ ಇತ್ತಂಡಗಳ ನಡುವೆ ಹಲ್ಲೆ ನಡೆದಿದ್ದು ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.
ಆರೋಪಿಗಳ ಪರ ಮಂಗಳೂರಿನ ಯುವ ನ್ಯಾಯವಾದಿ ಮುಹಮ್ಮದ್ ಅನ್ಸಾರ್ ಮೂಲರಪಟ್ಣ ವಾದ ಮಂಡಿಸಿದ್ದರು.
Next Story





