Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಐದನೇ ತರಗತಿವರೆಗೆ...

ರಾಜ್ಯದಲ್ಲಿ ಐದನೇ ತರಗತಿವರೆಗೆ ಆನ್‌ಲೈನ್‌ ಶಿಕ್ಷಣ ರದ್ದು: ಸಚಿವ ಸುರೇಶ್‌ ಕುಮಾರ್‌

ವಾರ್ತಾಭಾರತಿವಾರ್ತಾಭಾರತಿ10 Jun 2020 7:56 PM IST
share
ರಾಜ್ಯದಲ್ಲಿ ಐದನೇ ತರಗತಿವರೆಗೆ ಆನ್‌ಲೈನ್‌ ಶಿಕ್ಷಣ ರದ್ದು: ಸಚಿವ ಸುರೇಶ್‌ ಕುಮಾರ್‌

ಬೆಂಗಳೂರು, ಜೂ.10: ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲೂ ಎಲ್‌ಕೆಜಿಯಿಂದ ಐದನೇ ತರಗತಿಗಳ ವಿದ್ಯಾರ್ಥಿಗಳಿಗೆ ಆನ್‌ ಲೈನ್‌ ಬೋಧನೆ ಮಾಡುತ್ತಿದ್ದರೆ, ಅದನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಆನ್‌ಲೈನ್‌ ಶಿಕ್ಷಣಕ್ಕೆ ಸಂಬಂಧಿಸಿದಂತೆ ಬುಧವಾರ ಹಿರಿಯ ಶಿಕ್ಷಣ ತಜ್ಞರು, ಮಾನಸಿಕ ಆರೋಗ್ಯ ವಿಭಾಗದ ಪರಿಣಿತರು, ಖಾಸಗಿ ವಿದ್ಯಾಸಂಸ್ಥೆಗಳ ಸಂಘಟನೆಗಳ ಪ್ರತಿನಿಧಿಗಳು ಸೇರಿದಂತೆ ಶೈಕ್ಷಣಿಕ ಹಾಗೂ ಮಕ್ಕಳ ಸುಧಾರಣೆ ವಿಷಯದ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸುದೀರ್ಘ ಸಮಾಲೋಚನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಾಥಮಿಕ ಹಂತದಲ್ಲಿ ರಾಜ್ಯದ ಯಾವುದೇ ಶಾಲೆಯಲ್ಲೇ ಆಗಲಿ ಆನ್‌ಲೈನ್‌ ಬೋಧನೆಯನ್ನು ತಕ್ಷಣವೇ ನಿಲ್ಲಿಸಬೇಕೆಂದು ಸೂಚನೆ ನೀಡಲಾಗಿದೆ ಎಂದು  ಹೇಳಿದರು.

ಹಾಗೆಯೇ ಆನ್‌ಲೈನ್‌ ಶಿಕ್ಷಣದ ಹೆಸರಿನಲ್ಲಿ ಶುಲ್ಕ ವಸೂಲಿ ಮಾಡುವುದು ಕಂಡು ಬಂದರೆ ಅಂತಹ ಶಾಲೆಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

ಶಿಕ್ಷಣದಲ್ಲಿ ತಂತ್ರಜ್ಞಾನ ಬಳಕೆ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆ:
ಇನ್ನು ಆರರಿಂದ 10ರವರೆಗಿನ ಉನ್ನತ ತರಗತಿಗಳಲ್ಲಿ ಆನ್‌ಲೈನ್‌ ಶಿಕ್ಷಣದ ಸಾಧಕ ಬಾಧಕಗಳ ಕುರಿತು ಚರ್ಚಿಸಿ ಮತ್ತು ಆ ಕುರಿತಂತೆ ಮಾರ್ಗಸೂಚಿಗಳನ್ನು ರೂಪಿಸಲು ಹಿರಿಯ ಶಿಕ್ಷಣ ತಜ್ಞರ ಸಮಿತಿ ರಚಿಸಲಾಗಿದೆ. ಅಂತೆಯೇ ಎಲ್‌ಕೆಜಿ ಯಿಂದ ಐದನೇ ತರಗತಿವರೆಗೆ ಆನ್‌ಲೈನ್‌ ಹೊರತುಪಡಿಸಿ ತಂತ್ರಜ್ಞಾನಾಧಾರಿತವಾದ ಬೋಧನೆಯನ್ನು ಅಳವಡಿಸಿಕೊಳ್ಳುವ ಕುರಿತಂತೆ ಸಹ ಈ ಸಮಿತಿ ಸಾಧಕಬಾಧಕಗಳನ್ನು ಪರಿಶೀಲಿಸಿ ವರದಿ ಸಲ್ಲಿಸಲಿದ್ದು, ಸಮಿತಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಪ್ರೊ.ಎಂ.ಕೆ. ಶ್ರೀಧರ್‌, ಹಿರಿಯ ಶಿಕ್ಷಣ ತಜ್ಞರಾದ ಪ್ರೊ. ಗುರುರಾಜ ಕರ್ಜಗಿ, ಡಾ.ವಿ.ಪಿ. ನಿರಂಜನಾರಾಧ್ಯ, ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ ಪ್ರತಿನಿಧಿಗಳಾದ ಹೃಷಿಕೇಶ್‌, ನಿಮ್ಹಾನ್ಸ್‌ ಸಂಸ್ಥೆಯ ಮಕ್ಕಳ ಮಾನಸಿಕ ತಜ್ಞರು, ಅರ್ಲಿ ಚೈಲ್ಡ್‌ ಹುಡ್‌ ಸಂಘಟನೆಯ ಪ್ರತಿನಿಧಿಗಳು, ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇರುತ್ತಾರೆ ಎಂದು ಸಚಿವರು ತಿಳಿಸಿದರು.

ಸಮಿತಿ ಶಿಕ್ಷಣದಲ್ಲಿ ತಂತ್ರಜ್ಞಾನವನ್ನು ಯಾವ ರೀತಿ ಬಳಸಿಕೊಳ್ಳಬೇಕು, ತರಗತಿ ಇಲ್ಲದಿರುವಾಗ ಮಕ್ಕಳ ಶಿಕ್ಷಣ ನಿರಂತರತೆಗೆ ಮಾತ್ರ ಇದನ್ನು ಎಷ್ಟು ಬಳಕೆ ಮಾಡಬೇಕು, ರಜಾ ಅವಧಿಯಲ್ಲಿ ಮಕ್ಕಳ ಜ್ಞಾನಾರ್ಜನೆಗೆ ಪೂರಕವಾಗಿ ಹೇಗೆ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಮತ್ತು ಕೋವಿಡ್‌ನಂತಹ ಸಂದರ್ಭದಲ್ಲಿ ಸಾಂಪ್ರದಾಯಿಕ ತರಗತಿಗಳಿಗೆ ಪರ್ಯಾಯವೆನ್ನುವ ಭಾವನೆಯನ್ನು ಮೂಡಿಸದೇ ಅವರ ಕಲಿಕೆಗೆ ಪ್ರೇರೇಪಣೆಯಾಗುವಂತೆ ಮಾತ್ರವೇ ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳಬೇಕು, ವಿಶೇಷವಾಗಿ ನಮ್ಮ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿ/ ಪೋಷಕರ ಸಾಮಾಜಿಕ ಸ್ಥಿತಿಗತಿಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ವಿದ್ಯಾರ್ಥಿ ಕಲಿಕೆಯಿಂದ ವಂಚಿತವಾಗದೇ ಮುಖ್ಯವಾಹಿನಿಯಲ್ಲಿ ಒಳಗೊಳ್ಳುವುದು ಸೇರಿದಂತೆ ಈ ಪರ್ಯಾಯ ಬೋಧನಾ ಕ್ರಮದ ಸಾಧಕ ಬಾಧಕಗಳೊಂದಿಗೆ ಮಾರ್ಗಸೂಚಿಗಳನ್ನು ರೂಪಿಸಿ ಈ ಸಮಿತಿಯು 10 ದಿನಗಳಲ್ಲಿ ವರದಿ ನೀಡಲಿದೆ ಎಂದು ಸುರೇಶ್‌ ಕುಮಾರ್‌ ತಿಳಿಸಿದರು. 

ಶುಲ್ಕ ಹೆಚ್ಚಳ ಮಾಡಿದ ಶಾಲೆಗಳ ವಿರುದ್ಧ ಕ್ರಮ
ಇದೇ ಸಂದರ್ಭದಲ್ಲಿ, ಈ ಶೈಕ್ಷಣಿಕ ಸಾಲಿಗೆ ಬೋಧನಾ ಶುಲ್ಕ ಹೆಚ್ಚಳ ಮಾಡಬಾರದು ಎಂದು ಈಗಾಗಲೇ ಶಿಕ್ಷಣ ಇಲಾಖೆ ಸ್ಪಷ್ಟವಾದ ಸುತ್ತೋಲೆ ಹೊರಡಿಸಿದ್ದು, ಇದನ್ನು ಉಲ್ಲಂಘಿಸಿದ ಶಾಲೆಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಲು ಇಲಾಖಾಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಸಚಿವರು ಸ್ಪಷ್ಟನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X