Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನೆಯಲ್ಲೇ ಕುಳಿತು ಜಿಲ್ಲಾಧಿಕಾರಿ ಕಚೇರಿಯ...

ಮನೆಯಲ್ಲೇ ಕುಳಿತು ಜಿಲ್ಲಾಧಿಕಾರಿ ಕಚೇರಿಯ ಸೇವೆ ಪಡೆಯಿರಿ : ಜಿಲ್ಲಾಧಿಕಾರಿ ಜಿ.ಜಗದೀಶ್

ವಾರ್ತಾಭಾರತಿವಾರ್ತಾಭಾರತಿ10 Jun 2020 10:05 PM IST
share

ಉಡುಪಿ, ಜೂ.10: ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದು, ವಿವಿಧ ಅನಾನುಕೂಲತೆಗಳ ನಡುವೆ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಗೆ ವಿವಿಧ ಕಾರ್ಯಗಳಿಗಾಗಿ ದೂರದೂರುಗಳಿಂದ ಆಗಮಿಸಬೇಕಾಗಿದೆ. ಇವರೆಲ್ಲರ ಅನುಕೂಲಕ್ಕಾಗಿ ಜಿಲ್ಲಾಡಳಿತ, ಅತ್ಯಂತ ಸರಳ ಮತ್ತು ತ್ವರಿತ ಸೇವೆ ನೀಡುವ ನೂತನ ಯೋಜನೆಯೊಂದನ್ನು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ನೇತೃತ್ವದಲ್ಲಿ ಜಾರಿಗೊಳಿಸಿದೆ.

ಇದರಲ್ಲಿ ಉಡುಪಿ ಜಿಲ್ಲೆಯ ಸಾರ್ವಜನಿಕರು ತಮ್ಮ ಮನೆಯಲ್ಲಿಯೇ ಕುಳಿತು ಜಿಲ್ಲಾಧಿಕಾರಿ ಕಚೇರಿಯಲ್ಲಿನ ತಮ್ಮ ಕೆಲಸಗಳನ್ನು ದೂರವಾಣಿ ಅಥವಾ ವ್ಯಾಟ್ಸಪ್, ಇಮೇಲ್ ಮೂಲಕ ಮಾಡಿಸಿಕೊಳ್ಳುವ ಅಥವಾ ಸೇವೆಯನ್ನು ಪಡೆಯುವ ನೂತನ ಯೋಜನೆ ಇದಾಗಿದೆ. ಸಾರ್ವಜನಿಕರಿಗೆ ಈ ಸೇವೆ ಒದಗಿಸಲು ಪ್ರತ್ಯೇಕ ಸಿಬ್ಬಂದಿಗಳನ್ನು ಸಹ ನಿಯೋಜಿಸಲಾಗಿದೆ.

ಸಾರ್ವಜನಿಕರು ತಮಗೆ ಆಗಬೇಕಾದ ಕೆಲಸ-ಕಾರ್ಯಗಳ ಬಗ್ಗೆ ಹಾಗೂ ಈಗಾಗಲೇ ಚಾಲನೆಯಲ್ಲಿರುವ ಅವರಿಗೆ ಸಂಬಂಧಿತ ಕಡತ ಯಾ ಅವರ ಮನವಿ, ಅರ್ಜಿಗಳು ಪ್ರಸ್ತುತ ಯಾವ ಹಂತದಲ್ಲಿದೆ ಎಂಬುದನು ಮನೆಯಲ್ಲೇ ಕುಳಿತು ವಿಚಾರಿಸಬಹುದಾಗಿದೆ. ಇದಕ್ಕಾಗಿ ಅವರು ಡಿಸಿ ಕಚೇರಿಯ ದೂರವಾಣಿ ಸಂಖ್ಯೆ: 0820-2574931 ಅಥವಾ 0820-2571500 ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಲು ಜಿಲ್ಲೆಯ ಸಾರ್ವಜನಿಕರಿಗೆ ಜಿಲಾ್ಲಡಳಿತ ಅವಕಾಶವನ್ನು ಕಲ್ಪಿಸಿದೆ.

ಒಂದು ವೇಳೆ ಸಾರ್ವಜನಿಕರು ಅಗತ್ಯದ ಕೆಲಸಕ್ಕಾಗಿ ತುರ್ತು ಮನವಿ, ಅರ್ಜಿಗಳನ್ನು ಸಲ್ಲಿಸಬೇಕಾಗಿದ್ದಲ್ಲಿ ಅದಕ್ಕೆ ಸಂಬಂಧಿಸಿದ ಅಗತ್ಯ ದಾಖಲೆ ಗಳೊಂದಿಗೆ ಇಮೇಲ್ ವಿಳಾಸ-udupidc.helpline@gmail.com-ಅಥವಾ ವ್ಯಾಟ್ಸಪ್ ಸಂಖ್ಯೆ:98808 31516 ನಂಬರಿಗೆ ಸಲ್ಲಿಸಬಹುದಾಗಿದೆ. ಆದ್ದರಿಂದ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡದೇ ಮೇಲೆ ತಿಳಿಸಿರುವ ವ್ಯವಸ್ಥೆಗಳನ್ನು ಸದುಪಯೋಗಪಡಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ಕೊರೋನಾ ವೈರಸ್ ಸೋಂಕನ್ನು ತಡೆಗಟ್ಟುವ ಸಲುವಾಗಿ ಜಿಲ್ಲೆಯ ಕೆಲವೊಂದು ಪ್ರದೇಶಗಳಲ್ಲಿ ಕಂಟೈನ್ಮೆಂಟ್ ವಲಯಗಳನ್ನು ಮಾಡಿ ಅದರ ಸುತ್ತಲಿನ ಕೆಲವೊಂದು ಪ್ರದೇಶಗಳನ್ನು ನಿರ್ಬಂಧಿಸಲಾಗಿದೆ. ಇಂತಹ ಪ್ರದೇಶಗಳಲ್ಲಿರುವ ಜನರ ಹಾಗೂ ದೂರದ ಊರುಗಳಿಂದ ಬರುವ ಸಾರ್ವಜನಿಕರಿಗಾಗುವ ಅನಾನುಕೂಲಗಳು ಈ ನೂತನ ಯೋಜನೆ ಮೂಲಕ ನಿವಾರಣೆಯಾಗಲಿದ್ದು, ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡದೇ ತಮ್ಮ ಮನೆಯಲ್ಲೇ ಕುಳಿತು ಜಿಲ್ಲಾಧಿಕಾರಿ ಕಚೇರಿಯಿಂದ ತಮಗೆ ಅಗತ್ಯವಿರುವ ಸೇವೆಗಳನ್ನು ಪೆಯಬಹುದು ಎಂದವರು ಹೇಳಿದರು.

ಆದರೂ ಅತೀಅಗತ್ಯ ಸಂದರ್ಭದಲ್ಲಿ ಸ್ವತಹ ಭೇಟಿ ನೀಡುವುದು ಅವಶ್ಯ ವಾದಲ್ಲಿ ಮಾತ್ರ ಜಿಲ್ಲಾಧಿಕಾರಿ ಕಛೇರಿಗೆ ಭೇಟಿ ನೀಡಬಹುದಾಗಿದ್ದು, ಯಾವುದೆ ಕಾರಣಕ್ಕೂ ರೋಗ ಲಕ್ಷಣವಿರುವ, ಸೋಂಕು ಬಾಧಿತರಿಗೆ ಪ್ರವೇಶವಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X