ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ
ಬೆಂಗಳೂರು, ಜೂ.10: ಕೇಂದ್ರ ಸರಕಾರ ಇತ್ತೀಚೆಗೆ ತಂದಿರುವ ಅಗತ್ಯ ವಸ್ತುಗಳ ಕಾಯ್ದೆಗೆ ತಿದ್ದುಪಡಿ ಮತ್ತು ಎರಡು ಶಾಸನಗಳ ಸುಗ್ರೀವಾಜ್ಞೆಯನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು.
ನಗರದ ಕಾರ್ಪೋರೇಷನ್ ವೃತ್ತದ ಬಳಿ ಮೌನ ಪ್ರತಿಭಟನೆಯನ್ನು ಮಾಡುವ ಮೂಲಕ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿದರು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಮೂಲಕ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು, ಕೂಡಲೇ ಇದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷೆ ಗೌರಮ್ಮ, ಕೇಂದ್ರ ಸರಕಾರ ಜನರ ಮೇಲೆ ಅನಧಿಕೃತ ಹೊರೆಯನ್ನು ಹೊರಿಸಲು ಮುಂದಾಗಿದೆ. ಈ ಕಾಯ್ದೆಯನ್ನು ಕೊರತೆಯ ಸಂದರ್ಭದಲ್ಲಿ ಸಹಾಯಕ್ಕಾಗಿ ತರಲಾಗಿದೆ. ಆದರೆ, ಕೇಂದ್ರ ಸರಕಾರ ಇದನ್ನು ತಿದ್ದುಪಡಿ ಮಾಡಿ ಕಾರ್ಪೋರೇಟ್‍ಗಳಿಗೆ ಅನುಕೂಲವಾಗುವಂತೆ ಮಾಡಲಾಗುತ್ತಿದೆ ಎಂದರು.
Next Story





