Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನದಿಪಾಲಾಗುವವರ ರಕ್ಷಣೆಗೆ ನಾಡದೋಣಿ...

ನದಿಪಾಲಾಗುವವರ ರಕ್ಷಣೆಗೆ ನಾಡದೋಣಿ ಕೊಡುಗೆ ನೀಡಿದ ‘ಸೇವಾಂಜಲಿ ಪ್ರತಿಷ್ಠಾನ’

ಪಾಣೆಮಂಗಳೂರು ಪರಿಸರದ ಈಜುಗಾರರ ಹಲವು ವರ್ಷಗಳ ಬೇಡಿಕೆ ಈಡೇರಿಕೆ

ವಾರ್ತಾಭಾರತಿವಾರ್ತಾಭಾರತಿ11 Jun 2020 2:25 PM IST
share
ನದಿಪಾಲಾಗುವವರ ರಕ್ಷಣೆಗೆ ನಾಡದೋಣಿ ಕೊಡುಗೆ ನೀಡಿದ ‘ಸೇವಾಂಜಲಿ ಪ್ರತಿಷ್ಠಾನ’

ಬಂಟ್ವಾಳ, ಜೂ.11: ನೇತ್ರಾವತಿ ನದಿಯಲ್ಲಿ ಬಿದ್ದು ಪ್ರಾಣಾಪಾಯದಲ್ಲಿರುವರನ್ನು ರಕ್ಷಿಸಲು ನಾಡದೋಣಿಯೊಂದು ಬೇಕೆನ್ನುವ ಪಾಣೆಮಂಗಳೂರು ಪರಿಸರದ ಈಜುಗಾರರ ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದೆ. ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ, ಏರ್ಯ ಬಾಲಕೃಷ್ಣ ಹೆಗ್ಡೆ ಮತ್ತಿತರರ ಸಹಕಾರದೊಂದಿಗೆ ಅಂದಾಜು 70 ಸಾವಿರ ರೂ. ಮೌಲ್ಯದ ಹೊಸ ನಾಡ ದೋಣಿಯನ್ನು ಈ ಈಜುಗಾರರಿಗೆ ನೀಡಿದೆ. ಗುರುವಾರ ಬೆಳಗ್ಗೆ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಸಭಾಭವನದಲ್ಲಿ ಸೇವಾಂಜಲಿ ರಕ್ಷಕ ನಾಮಾಂಕಿತ ದೋಣಿಯ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ತಾಲೂಕಿನ ವಿವಿಧೆಡೆ ನೇತ್ರಾವತಿ ನದಿಗೆ ಹಾರಿ ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಇತ್ತೀಚಿನ ಕೆಲ ವರ್ಷಗಳಿಂದ ಹೆಚ್ಚಾಗಿವೆ. ಅಲ್ಲದೆ ಆಕಸ್ಮಿಕವಾಗಿ ನದಿಗೆ ಬಿದ್ದು ಕೊಚ್ಚಿ ಹೋಗುವಂತಹ ಪ್ರಕರಣಗಳು ಅಲ್ಲಲ್ಲಿ ನಡೆಯುತ್ತಿರುತ್ತದೆ. ಇಂತಹ ಸಂದರ್ಭದಲ್ಲಿ ಸ್ಥಳೀಯ ಈಜುಗಾರರು ನದಿಗೆ ಹಾರಿ ನೀರಲ್ಲಿ ಕೊಚ್ಚಿ ಹೋಗುತ್ತಿರುವರನ್ನು ಸ್ವಯಂಪ್ರೇರಿತರಾಗಿ ರಕ್ಷಿಸುವ ಪ್ರಯತ್ನ ಹಲವು ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದಾರೆ. ಆದರೆ ಇವರಿಗೆ ದೋಣಿಯ ವ್ಯವಸ್ಥೆಯಾಗಲಿ, ಲೈಫ್ ಜಾಕೆಟ್ ನಂತಹ ಮೂಲ ಭೂತ ಸೌಕರ್ಯಗಳಿಲ್ಲ. ಈಜುಗಾರರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಅಪಾಯಕಾರಿ ಸ್ಥಿತಿಯಲ್ಲಿ ಜೀವ ರಕ್ಷಿಸುವ ಪರಿಸ್ಥಿತಿ ಇದೆ. ಕೆಲ ದಿನಗಳ ಹಿಂದೆ ನಿಶಾಂತ್ ಎಂಬ ಯುವಕ ನದಿ ನೀರಿಗೆ ಹಾರಿ ಆತ್ಮಹತ್ಯೆಗೈದಾಗ ಸ್ಥಳೀಯ ಈಜುಗಾರರು ಸೇತುವೆಯ ಮೇಲಿಂದ ನದಿಗೆ ಜಿಗಿದು ಯುವಕನ ಪ್ರಾಣ ರಕ್ಷಿಸಲು ಪ್ರಯತ್ನಿಸಿದ್ದರು. ಈ ಸಂದರ್ಭ ಮಾಧ್ಯಮಗಳ ಮುಂದೆ ತಮ್ಮ ಕಾರ್ಯಕ್ಕೆ ನಾಡದೋಣಿ ಹಾಗೂ ಲೈಫ್ ಜಾಕೆಟ್ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದರು. ಈ ಬೇಡಿಕೆಗೆ ಸ್ಪಂದಿಸಿದ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ ದೋಣಿ ಹಾಗೂ ಲೈಫ್ ಜಾಕೆಟನ್ನು ಕೊಡುಗೆ ನೀಡಿ ಸಾಹಸಿ ಯುವಕರಲ್ಲಿ ಸ್ಫೂರ್ತಿ ತುಂಬುವ ಕಾರ್ಯ ಮಾಡಿದೆ.

ಕಾರ್ಯಕ್ರಮದಲ್ಲಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್. ದೋಣಿ ಹಸ್ತಾಂತರ ಮಾಡಿದರು. ಬಳಿಕ ಮಾತನಾಡಿದ ಅವರು, ಜಾತಿ, ಧರ್ಮ ನೋಡದೆ ಈ ಈಜುಗಾರರು ತಮ್ಮ ನಿಸ್ವಾರ್ಥ ಸೇವೆಯನ್ನು ನೀಡುತ್ತಾ ಬಂದಿದ್ದಾರೆ. ಪ್ರತಿ ವರ್ಷ ಮಳೆಗಾಲ ಬಂದಾಗಲೂ ಇವರು ತಾಲೂಕಾಡಳಿತದೊಂದಿಗೆ ಸಹಕರಿಸುತ್ತಿದ್ದಾರೆ. ಇವರ ಸೇವೆ ಮುಂದಿನ ದಿನಗಳಲ್ಲಿಯೂ ತಾಲೂಕಾಡಳಿತ ಹಾಗೂ ಎಲ್ಲರಿಗೂ ಅಗತ್ಯವಿದೆ ಎಂದು ಶುಭ ಹಾರೈಸಿದರು.

ಬಂಟ್ವಾಳ ಗ್ರಾಮಾಂತರ ಠಾಣಾ ಎಸ್ಸೈ ಪ್ರಸನ್ನ ಲೈಫ್ ಜಾಕೆಟ್ ವಿತರಿಸಿದರು. ಅವರು ಮಾತನಾಡಿ, ಯಾವ ಉದ್ದೇಶಕ್ಕೆ ದೋಣಿಯನ್ನು ನೀಡಲಾಗಿದೆಯೋ ಆ ಉದ್ದೇಶಕ್ಕೆ ಬಳಸಿಕೊಳ್ಳಬೇಕು. ಸೇವಾಂಜಲಿ ಪ್ರತಿಷ್ಠಾನ ಮಾನವೀಯ ಕಾರ್ಯಗಳನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಇದು ಇನ್ನೂ ಮುಂದುವರಿಯಲಿ ಎಂದರು.

ಕಾರ್ಯಕ್ರಮದಲ್ಲಿ ಪ್ರಾಣ ರಕ್ಷಕ ಯುವಕರನ್ನು ಸನ್ಮಾನಿಸಲಾಯಿತು.

ಸೇವಾಂಜಲಿ ಪ್ರತಿಷ್ಠಾನದ ಅಧ್ಯಕ್ಷ ವಜ್ರನಾಭ ಶೆಟ್ಟಿ, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ರೋಟರಿ ಜಿಲ್ಲಾ ಗವರ್ನರ್ ನಾಮಿನಿ ಪ್ರಕಾಶ್ ಕಾರಂತ್, ಅಮ್ಮುಂ ೆಗುತ್ತು ದೇವದಾಸ್ ಹೆಗ್ಡೆ, ಸಾಮಾಜಿಕ ಕಾರ್ಯಕರ್ತ ಪಿ.ಎ.ರಹೀಂ, ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಸದಾನಂದ ಆಳ್ವ ಕಂಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ ಸ್ವಾಗತಿಸಿದರು. ಸಾಮಾಜಿಕ ಕಾರ್ಯಕರ್ತ ಪಿ.ಎ.ರಹೀಂ ಪ್ರಾಸ್ತವಿಕವಾಗಿ ಮಾತನಾಡಿದರು. ತೇವು ತಾರಾನಾಥ ಕೊಟ್ಟಾರಿ ವಂದಿಸಿದರು. ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X