ಅಗಸರು, ಕ್ಷೌರಿಕರಿಗೆ 5 ಸಾವಿರ ರೂ. ಪರಿಹಾರ ಧನ ಘೋಷಣೆ

ಬೆಂಗಳೂರು, ಜೂ.11: ಲಾಕ್‍ಡೌನ್‍ನಿಂದ ಅಗಸರು ಮತ್ತು ಕ್ಷೌರಿಕರಿಗೆ ಆರ್ಥಿಕವಾಗಿ ಸಾಕಷ್ಟು ನಷ್ಟವಾಗಿರುವ ಹಿನ್ನೆಲೆ ರಾಜ್ಯ ಸರಕಾರ ಅಗಸರು ಮತ್ತು ಕ್ಷೌರಿಕರಿಗೆ 5 ಸಾವಿರ ರೂ. ಪರಿಹಾರ ಧನ ಘೋಷಣೆ ಮಾಡಿದೆ.
ಅಗಸ ಮತ್ತು ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಫಲಾನುಭವಿಗಳು ಆನ್‍ಲೈನ್ ಮೂಲಕ ಸೇವಾ ಸಿಂಧು http://www.sevasindhu.karnataka.gov.in ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ, ಅರ್ಹ ಫಲಾನುಭವಿಗಳ ಆಧಾರ್ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಸಂದಾಯವಾಗಲಿದೆ.
ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಬಿ.ಪಿ.ಎಲ್ ಕಾರ್ಡ್ ಹೊಂದಿರಬೇಕು. 18ರಿಂದ 65 ವರ್ಷಗಳ ವಯೋಮಿತಿಯವರಾಗಿರಬೇಕು. ಕುಟುಂಬದಲ್ಲಿ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ವಲಸೆ ಕಾರ್ಮಿಕರು ಅರ್ಜಿ ಸಲ್ಲಿಸಬಹುದಾಗಿದೆ.
ಜೂ.30ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಕಾರ್ಮಿಕ ಇಲಾಖೆ ಪ್ರಕಟನೆ ತಿಳಿಸಿದೆ.
Next Story





