ಪೊಲೀಸ್ ಹೆಡ್ ಕಾನ್‍ಸ್ಟೇಬಲ್ ಆತ್ಮಹತ್ಯೆ

ಬೆಂಗಳೂರು, ಜೂ.11: ಕೌಟುಂಬಿಕ ಕಲಹ ಶಂಕೆ ಹಿನ್ನೆಲೆಯಲ್ಲಿ ಪೊಲೀಸ್ ವಸತಿ ಗೃಹ ಆವರಣದ ಮರವೊಂದಕ್ಕೆ ನೇಣು ಬಿಗಿದುಕೊಂಡು ಪೊಲೀಸ್ ಹೆಡ್ ಕಾನ್‍ಸ್ಪೇಬಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ರವೀಂದ್ರ ಎಂಬುವರೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್‍ಸ್ಟೇಬಲ್ ಎಂದು ತಿಳಿದುಬಂದಿದೆ.
ಕೌಟುಂಬಿಕ ಕಲಹವೇ ಆತ್ಮಹತ್ಯೆ ಕಾರಣ ಎನ್ನಲಾಗಿದ್ದು, ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





