Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೀಸಲಾತಿ ಮೂಲಭೂತ ಹಕ್ಕಲ್ಲ:...

ಮೀಸಲಾತಿ ಮೂಲಭೂತ ಹಕ್ಕಲ್ಲ: ಸುಪ್ರೀಂಕೋರ್ಟ್

ತಮಿಳುನಾಡಿನ ವೈದ್ಯಕೀಯ,ಡೆಂಟಲ್ ಕೋರ್ಸ್‌ಗಳಲ್ಲಿ ಶೇ.50 ಒಬಿಸಿ ಮೀಸಲಾತಿ ಕೋರಿದ್ದ ಅರ್ಜಿಗಳ ವಜಾ

ವಾರ್ತಾಭಾರತಿವಾರ್ತಾಭಾರತಿ11 Jun 2020 11:04 PM IST
share
ಮೀಸಲಾತಿ ಮೂಲಭೂತ ಹಕ್ಕಲ್ಲ: ಸುಪ್ರೀಂಕೋರ್ಟ್

ಹೊಸದಿಲ್ಲಿ,ಜೂ.11: ಮೀಸಲಾತಿಯು ಮೂಲಭೂತ ಹಕ್ಕಲ್ಲವೆಂದು ಸುಪ್ರೀಂಕೋರ್ಟ್ ಬುಧವಾರ ಅಭಿಪ್ರಾಯಿಸಿದೆ.

ತಮಿಳುನಾಡು ವೈದ್ಯಕೀಯ ಕಾಲೇಜುಗಳಲ್ಲಿ ಒಬಿಸಿ ಅಭ್ಯರ್ಥಿಗಳ ಮೀಸಲು ಖೋಟಾದ ಸೀಟು ನಿರಾಕರಣೆಗೆ ಸಂಬಂಧಿಸಿದ ಪ್ರಕರಣಗಳ ಅರ್ಜಿಗಳನ್ನು ಒಟ್ಟಾಗಿ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಸರ್ವೋಚ ನ್ಯಾಯಾಲಯ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

  ಮೀಸಲಾತಿಯು ತನ್ನ ಮೂಲಭೂತ ಹಕ್ಕೆಂದು ಯಾರೂ ಕೂಡಾ ಪ್ರತಿಪಾದಿಸಲು ಸಾಧ್ಯವಿಲ್ಲ.ಮೀಸಲಾತಿಯ ಸೌಲಭ್ಯಗಳನ್ನು ನೀಡದೆ ಇರುವುದು ಸಾಂವಿಧಾನಿಕ ಹಕ್ಕಿನ ಉಲ್ಲಂಘನೆಯೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಎಲ್.ನಾಗೇಶ್ವರರಾವ್ ನೇತೃತ್ವದ ನ್ಯಾಯಪೀಠ ಸ್ಪಷ್ಟಪಡಿಸಿತು.

‘‘ಮೀಸಲಾತಿಯ ಹಕ್ಕು ಮೂಲಭೂತ ಹಕ್ಕಲ್ಲ. ಅದು ಈಗಿನ ಕಾನೂನು’’ ಎಂದು ನಾಗೇಶ್ವರರಾವ್ ಅಭಿಪ್ರಾಯಿಸಿದರು. ತಮಿಳುನಾಡಿನ ವೈದ್ಯಕೀಯ ಕಾಲೇಜುಗಳಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಸೀಟು ಮೀಸಲಾತಿ ನೀಡದೆ ಇರುವುದು ಸಂವಿಧಾನದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ವಾದಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯ ನಡೆಸಿತ್ತು.

 2020-21ನೇ ಸಾಲಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ವೈದ್ಯಕೀಯ ಹಾಗೂ ದಂತವೈದ್ಯಕೀಯ (ಡೆಂಟಲ್ )ಕೋರ್ಸ್‌ಗಳಲ್ಲಿ ಅಖಿಲ ಭಾರತ ಮಟ್ಟದ ಒಬಿಸಿ ಕೋಟಾವನ್ನು ತಮಿಳುನಾಡು ಸರಕಾರ ರದ್ದುಪಡಿಸಿತ್ತು. ಈ ಕೋರ್ಸ್‌ಗಳಲ್ಲಿ ಒಬಿಸಿ ಕೋಟಾದಡಿ ಶೇ.50 ಸೀಟುಗಳನ್ನು ಮೀಸಲಿಡಬೇಕೆಂದು ಆಗ್ರಹಿಸಿ ಸಿಪಿಐ,ಡಿಎಂಕೆ ಪಕ್ಷಗಳು ಹಾಗೂ ಅವುಗಳ ನಾಯಕರು ಸುಪ್ರೀಂಕೋರ್ಟ್‌ನ ಮೆಟ್ಟಿಲೇರಿದ್ದರು.

 ತಮಿಳುನಾಡಿನಲ್ಲಿ ವೈದ್ಯಕೀಯ ಹಾಗೂ ದಂತವೈದ್ಯಕೀಯ ಶಿಕ್ಷಣದಲ್ಲಿ ಒಬಿಸಿ, ಎಸ್‌ಸಿ ಹಾಗೂ ಎಸ್‌ಟಿ ಅಭ್ಯರ್ಥಿಗಳಿಗೆ ಶೇ.69 ಮೀಸಲಾತಿಯಿದ್ದು, ಈ ಪೈಕಿ ಶೇ.50ರಷ್ಟು ಸೀಟುಗಳು ಒಬಿಸಿಗಳಿಗಾಗಿ ಮೀಸಲಿಡಲಾಗಿದೆಯೆಂದು ಅರ್ಜಿದಾರರು ಸುಪ್ರೀಂಕೋರ್ಟ್‌ನ ಗಮನಸೆಳೆದಿದ್ದರು.

  ಕೇಂದ್ರ ಸರಕಾರದ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿ ಅಖಿಲ ಭಾರತ ಖೋಟಾದಡಿ ತಮಿಳುನಾಡು ಸರಕಾರವು ಒಬಿಸಿ ಅಭ್ಯರ್ಥಿಗಳಿಗೆ ವೈದ್ಯಕೀಯ ಹಾಗೂ ದಂತವೈದ್ಯಕೀಯ ಶಿಕ್ಷಣದಲ್ಲಿ ಶೇ.50ರಷ್ಟು ಮೀಸಲಾತಿ ಸೀಟುಗಳನ್ನು ನೀಡಬೇಕೆಂದು ಅರ್ಜಿದಾರರು ವಾದಿಸಿದ್ದರು. ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿ ನಿರಾಕರಣೆಯು ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆಯೆಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

 ಆದರೆ ಅದನ್ನು ಒಪ್ಪದ ಸುಪ್ರೀಂಕೋರ್ಟ್ ನ್ಯಾಯಪೀಠವು, ಮೀಸಲಾತಿಯು ಮೂಲಭೂತ ಹಕ್ಕು ಅಲ್ಲದೆ ಇರುವಾಗ, ಈ ಅರ್ಜಿಗಳನ್ನು ಸಂವಿಧಾನದ 32ನೇ ಕಲಮಿನಡಿ ಪರಿಶೀಲಿಸಲು ಹೇಗೆ ಸಾಧ್ಯವೆಂದು ಪ್ರಶ್ನಿಸಿತು.

 ‘‘ಯಾರ ಮೂಲಭೂತ ಹಕ್ಕುಗಳನ್ನು ಉಲ್ಲಂಘನೆಯಾಗಿದೆ?. ಸಂವಿಧಾನದ 32ನೇ ಕಲಮು, ಕೇವಲ ಮೂಲಭೂತ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದ್ದಾಗಿದೆ. ನೀವು ತಮಿಳುನಾಡಿನ ನಾಗರಿಕರ ಮೂಲಭೂತ ಹಕ್ಕುಗಳ ಬಗ್ಗೆ ಆಸಕ್ತರಾಗಿದ್ದೀರಿ. ಆದರೆ ಮೀಸಲಾತಿಯ ಹಕ್ಕು ಎಂಬುದು ಮೂಲಭೂತ ಹಕ್ಕು ಆಗಿರುವುದಿಲ್ಲ’’ ಎಂದು ನ್ಯಾಯಪೀಠ ಅಭಿಪ್ರಾಯಿಸಿತು.

   ಒಂದು ಧ್ಯೇಯಕ್ಕಾಗಿ ತಮಿಳುನಾಡಿನ ವಿವಿಧ ರಾಜಕೀಯ ಪಕ್ಷಗಳು ಒಗ್ಗೂಡಿರುವುದನ್ನು ತಾನು ಪ್ರಶಂಸಿಸುತ್ತೇನಾದಾರೂ, ಈ ಅರ್ಜಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿತು.

 ಆದಾಗ್ಯೂ, ಒಬಿಸಿ ಸೀಟುಗಳ ರದ್ದತಿಯು ತಮಿಳು ನಾಡು ಸರಕಾರದ ಮೀಸಲಾತಿ ಕಾನೂನಿನ ಉಲ್ಲಂಘನೆಯ ಪ್ರಕರಣವಾಗಿದ್ದಲ್ಲಿ, ಆಗ ಅರ್ಜಿದಾರರು ಈ ಬಗ್ಗೆ ಮದ್ರಾಸ್ ಕೋರ್ಟ್‌ನ ಮೆಟ್ಟಲೇರಬಹುದೆಂದು ಸುಪ್ರೀಂಕೋರ್ಟ್ ಸಲಹೆ ನೀಡಿತು.

ಹಿಂದಿನ ತೀರ್ಪಿನ ಪುನರಾವರ್ತನೆ: 

 ಈ ವರ್ಷದ ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್ ನೀಡಿದ ಮಹತ್ವದ ತೀರ್ಪೊಂದರಲ್ಲಿ ಸರಕಾರಿ ಉದ್ಯೋಗಗಳ ನೇಮಕಾತಿ ಹಾಗೂ ಭಡ್ತಿಯಲ್ಲಿ ಮೀಸಲಾತಿಯು ಮೂಲಭೂತ ಹಕ್ಕಲ್ಲವೆಂದು ತಿಳಿಸಿತು. ಸರಕಾರಿ ಉದ್ಯೋಗಗಳ ನೇಮಕಾತಿ ಹಾಗೂ ಭಡ್ತಿಯಲ್ಲಿ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿಗಳಿಗೆ ಮೀಸಲಾತಿಯನ್ನು ನೀಡುವಂತೆ ಯಾವುದೇ ನ್ಯಾಯಾಲಯವು ಸರಕಾರಕ್ಕೆ ಆದೇಶ ನೀಡಲು ಸಾಧ್ಯವಿಲ್ಲವೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X