Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಚಿಕಿತ್ಸೆಗಾಗಿ ಬ್ಯಾಂಕ್‌ನಿಂದ ಮಾಡಿದ್ದ...

​ಚಿಕಿತ್ಸೆಗಾಗಿ ಬ್ಯಾಂಕ್‌ನಿಂದ ಮಾಡಿದ್ದ ಸಾಲ ತೀರಿಸಿದ 'ಟೀಂ ಬಿ ಹ್ಯೂಮನ್'

ಕಾಲು ಕಳೆದುಕೊಂಡ ಪುಷ್ಪಕಿರಣ್‌ಗೆ ನೆರವು

ವಾರ್ತಾಭಾರತಿವಾರ್ತಾಭಾರತಿ12 Jun 2020 2:12 PM IST
share
​ಚಿಕಿತ್ಸೆಗಾಗಿ ಬ್ಯಾಂಕ್‌ನಿಂದ ಮಾಡಿದ್ದ ಸಾಲ ತೀರಿಸಿದ ಟೀಂ ಬಿ ಹ್ಯೂಮನ್

ಮಂಗಳೂರು : ಕಾಲು ಕಳೆದುಕೊಂಡ ವ್ಯಕ್ತಿಯೊಬ್ಬರು ತನ್ನ ಚಿಕಿತ್ಸೆಗಾಗಿ ಬ್ಯಾಂಕ್‌ನಿಂದ ಮಾಡಿದ್ದ ಸಾಲವನ್ನು ‘ಟೀಂ ಬಿ ಹ್ಯೂಮನ್’ ತಂಡವು ತೀರಿಸಿ ಮಾನವೀಯತೆ ಮೆರೆದ ವಿದ್ಯಮಾನ ನಗರದ ಹೊರವಲಯದಲ್ಲಿ ನಡೆದಿದೆ.

ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪುಷ್ಪಕಿರಣ್ (51) ಎಂಬವರು ವೃತ್ತಿಯಲ್ಲಿ ಟಿವಿ ಟೆಕ್ನಿಶಿಯನ್ ಆಗಿದ್ದರು. ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸೋಮೇಶ್ವರದ ನೆಹರೂ ನಗರದಲ್ಲಿ ವಾಸವಾಗಿದ್ದರು. ಎಪ್ರಿಲ್ 27ರಂದು ವಾಂತಿ ಮಾಡಲಾರಂಭಿಸಿದ್ದ ಪುಷ್ಪಕಿರಣ್‌ರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದ ವೈದ್ಯರು ರಕ್ತದಲ್ಲಿ ಹಿಮೋಗ್ಲೋಬಿನ್ ಕೊರತೆ ಇದೆ ಎಂದು ಹೇಳಿದ್ದು ಆ ಬಳಿಕ ರಕ್ತವನ್ನೂ ನೀಡಲಾಗಿತ್ತು.

ಆ ಬಳಿಕ ಪುಷ್ಪಕಿರಣ್‌ರ ಮೊಣಕಾಲಿನ ಕೆಳಗಿದ್ದ ಸಣ್ಣದಾದ ಗಾಯವೊಂದು ಕಾಲಿಡೀ ಹರಡಿದ್ದು, ಗ್ಯಾಂಗ್ರಿನ್ ಆಗಿದೆ ಎಂದು ವೈದ್ಯರು ತಿಳಿಸಿದ್ದರು. ಆ ಬಳಿಕ ತೊಕ್ಕೊಟ್ಟಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ದುರದೃಷ್ಟವಶಾತ್ ಪುಷ್ಪಕಿರಣ್‌ನ ಮೊಣಕಾಲಿನ ಕೆಲಭಾಗವನ್ನು ಕತ್ತರಿಸಬೇಕಾಯಿತು. ನಂತರ ಪುಷ್ಪಕಿರಣ್ ಕೆಲಸ ಮಾಡಲಾಗದೆ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ಸೋಮೇಶ್ವರದ ರೆಸಾರ್ಟ್‌ವೊಂದರಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಇವರ ಪತ್ನಿ ರೇಖಾ ತನ್ನ ಪತಿಯ ಚಿಕಿತ್ಸೆಗಾಗಿ ಬ್ಯಾಂಕ್ ಸಾಲ ಮಾಡಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಸಂದೇಶವನ್ನು ಗಮನಿಸಿದ ‘ಟೀಂ ಬಿ ಹ್ಯೂಮನ್’ ತಂಡವು ಬ್ಯಾಂಕ್‌ನಿಂದ ಮಾಡಿದ್ದ 40 ಸಾವಿರ ರೂ. ಸಾಲವನ್ನು ಪಾವತಿಸಲು ಚೆಕ್ ನೀಡಿ ಪುಷ್ಪಕಿರಣ್-ರೇಖಾ ದಂಪತಿಯನ್ನು ಸಾಲಮುಕ್ತಗೊಳಿಸಿದೆ.

ಸದ್ಯ ಪುಷ್ಪಕಿರಣ್‌ಗೆ ದುಡಿಯಲು ಸಾಧ್ಯವಿಲ್ಲ. ಹಾಸಿಗೆಯಲ್ಲೇ ವಿಶ್ರಾಂತಿ ಪಡೆಯಲಿರುವುದರಿಂದ ದಿನವಹಿ ಖರ್ಚಿಗೆ ಸಮಸ್ಯೆಯಾಗಲಿದೆ. ದಾನಿಗಳ ನೆರವು ಇನ್ನೂ ಬೇಕಿದೆ. ಯಾರಾದರು ಸಹಾಯ ಮಾಡಲು ಇಚ್ಛಿಸುವುದಾದರೆ ಟೀಂ ಬಿ ಹ್ಯೂಮನ್ ತಂಡವನ್ನು ಸಂಪರ್ಕಿಸಬಹುದಾಗಿದೆ.

ಸಾಲ ಪಾವತಿಯ ಸಂದರ್ಭ ‘ಟೀಂ ಬಿ ಹ್ಯೂಮನ್’ನ ಸ್ಥಾಪಕಾಧ್ಯಕ್ಷ ಆಸೀಫ್ ಡೀಲ್ಸ್, ಭಾಷಾ ಕಂಡತ್‌ಪಳ್ಳಿ, ಶಮೀಮ್, ಅಲ್ತಾಫ್, ಸಾದಿಕ್, ಅಹ್ನಾಫ್ ಡೀಲ್ಸ್, ಶಿಯಾ ಡೀಲ್ಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X