ಸತತ ಆರನೇ ದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ಹೊಸದಿಲ್ಲಿ, ಜೂ.12: ಕಳೆದ ಎರಡು ದಿನಗಳಿಂದ ಜಾಗತಿಕ ತೈಲ ಬೆಲೆ ಇಳಿಕೆಯಾಗುತ್ತಿದ್ದರೂ ದೇಶದಲ್ಲಿ ಸತತ ಆರನೇ ದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ ಏರಿಕೆ ಮಾಡಲಾಗಿದೆ.
ಪೆಟ್ರೋಲ್ ದರ ಪ್ರತಿ ಲೀಟರ್ಗೆ 57 ಪೈಸೆ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 59 ಪೈಸೆ ಹೆಚ್ಚಿಸಲಾಗಿದೆ. ದಿಲ್ಲಿಯಲ್ಲಿ ಪೆಟ್ರೋಲ್ಗೆ ಪ್ರತಿ ಲೀಟರ್ ಬೆಲೆ ಇದೀಗ 74.57 ರೂ. ಹಾಗೂ ಡೀಸೆಲ್ 72.81 ರೂ.ಗೆ ಏರಿಕೆಯಾಗಿದೆ. ಕೋಲ್ಕತಾ, ಮುಂಬೈ ಹಾಗೂ ಚೆನ್ನೈ ನಗರಗಳಲ್ಲೂ ದರವನ್ನು ಹೆಚ್ಚಿಸಲಾಗಿದೆ.
ಕಳೆದ ಆರು ದಿನಗಳಿಂದ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 3.31 ರೂ. ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 3.42 ರೂ. ಏರಿಕೆಯಾಗಿದೆ. ಹೆಚ್ಚಿನವರು ಉದ್ಯೋಗವನ್ನು ಕಳೆದುಕೊಳ್ಳುತ್ತಿರುವ ಈ ಸಮಯದಲ್ಲಿ ದಿಢೀರನೆ ತೈಲ ಬೆಲೆ ಏರಿಸಿರುವುದಕ್ಕೆ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Next Story