Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗುರುಪುರ : ಮನೆಯ ಕಾಂಪೌಂಡ್ ಗೋಡೆ ಕುಸಿದು...

ಗುರುಪುರ : ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದು ವ್ಯಕ್ತಿ ಮೃತ್ಯು

ವರ್ಷದ ಮಳೆಗಾಲಕ್ಕೆ ಮೊದಲ ಬಲಿ

ವಾರ್ತಾಭಾರತಿವಾರ್ತಾಭಾರತಿ12 Jun 2020 8:17 PM IST
share
ಗುರುಪುರ : ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದು ವ್ಯಕ್ತಿ ಮೃತ್ಯು

ಮಂಗಳೂರು, ಜೂ.12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮಳೆಗಾಲದ ಮೊದಲ ಬಲಿ ಆಗಿದೆ. ಧಾರಾಕಾರ ಮಳೆಯಿಂದಾಗಿ ತನ್ನದೇ ಮನೆಯ ಕಂಪೌಂಡ್ ಗೋಡೆ ಕುಸಿದು ಗುರುಪುರದ ಮಠದಗುಡ್ಡೆ ನಿವಾಸಿ ನಾರಾಯಣ ನಾಯ್ಕ (52) ಮೃತಪಟ್ಟಿದ್ದಾರೆ.

ಶುಕ್ರವಾರ ಧಾರಾಕಾರ ಮಳೆಯಾಗುತ್ತಿದ್ದುದರಿಂದ ಮಧ್ಯಾಹ್ನ 1:30ರ ವೇಳೆಗೆ ನೀರು ಹೋಗಲು ಮನೆ ಪಕ್ಕದ ಚಿಕ್ಕ ತೋಡು ಬಿಡಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಈ ವೇಳೆ ಮಳೆಯಿಂದ ತೇವಗೊಂಡಿದ್ದ ಅವರದ್ದೇ ಮನೆಯ ಮುರಕಲ್ಲಿನ ಆಳೆತ್ತರದ ಕಂಪೌಂಡ್ ನಾರಾಯಣ ನಾಯ್ಕರ ಮೇಲೆ ಬಿದ್ದಿದೆ. ತೀವ್ರ ರಕ್ತಸ್ರಾವಗೊಂಡ ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು.

ಖಾಸಗಿ ಬಸ್ ಏಜೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಾರಾಯಣ ನಾಯ್ಕರು ಮಠದಗುಡ್ಡೆಯ ಗುಡ್ಡದಲ್ಲಿ ಈಚೆಗಷ್ಟೇ ಹೊಸ ಮನೆ ಕಟ್ಟಿದ್ದರು. ಕಲಾವಿದ ವಿ.ಜೆ. ಮಧುರಾಜ್ ಸೇರಿದಂತೆ ಇಬ್ಬರು ಮಕ್ಕಳು, ಪತ್ನಿಯೊಂದಿಗೆ ವಾಸವಾಗಿದ್ದರು.

ಮರ ಬಿದ್ದು ಮನೆಗೆ ಹಾನಿ: ಇನ್ನೊಂದು ಪ್ರಕರಣದಲ್ಲಿ ಮಂಗಳೂರು ಬೆಂಗ್ರೆಯ ಅಳಿವೆ ಬಾಗಿಲು ಎಂಬಲ್ಲಿ ಶಾರದಾ ಅಂಗಾರ ಮೆಂಡನ್ ಎಂಬವರ ಮನೆ ಮೇಲೆ ಗುರುವಾರ ತಡರಾತ್ರಿ ತೆಂಗಿನಮರ ಬಿದ್ದು ಭಾಗಶಃ ಹಾನಿಗೀಡಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಜೂ.14ರವರೆಗೆ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗುವ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಶುಕ್ರವಾರ ಜಿಲ್ಲಾದ್ಯಂತ ಉತ್ತಮ ಮಳೆಯಾಗಿದೆ. ಬೆಳಗ್ಗಿನಿಂದಲೇ ಮಳೆಯ ವಾತಾವರಣವಿದ್ದು, ಹಗಲಿಡೀ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿತ್ತು. ಸಂಜೆ ಬಳಿಕ ಗಾಳಿ- ಸಿಡಿಲಿನೊಂದಿಗೆ ಕೂಡಿದ ಮಳೆಯಾಗಿದೆ. ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಸುರಿಯುವ ನಿರೀಕ್ಷೆಯಿದೆ.

ಗುರುವಾರ ಬೆಳಗ್ಗಿನಿಂದ ಶುಕ್ರವಾರ ಬೆಳಗ್ಗಿನವರೆಗೆ ದ.ಕ. ಜಿಲ್ಲೆಯಲ್ಲಿ ಸರಾಸರಿ 26.1 ಮಿ.ಮೀ. ಮಳೆಯಾಗಿದೆ. ಬಂಟ್ವಾಳದಲ್ಲಿ 26.3 ಮಿ.ಮೀ., ಬೆಳ್ತಂಗಡಿಯಲ್ಲಿ 17.9 ಮಿ.ಮೀ., ಮಂಗಳೂರಿನಲ್ಲಿ 30.3 ಮಿ.ಮೀ., ಪುತ್ತೂರಿನಲ್ಲಿ 31.3 ಮಿ.ಮೀ., ಸುಳ್ಯದಲ್ಲಿ 24.6 ಮಿ.ಮೀ. ಮಳೆ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X