Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ ಮತ್ತು ಅಮೆರಿಕದಲ್ಲಿ ಸಹಿಷ್ಣುತೆಯ...

ಭಾರತ ಮತ್ತು ಅಮೆರಿಕದಲ್ಲಿ ಸಹಿಷ್ಣುತೆಯ ಡಿಎನ್‌ಎ ಮಾಯವಾಗಿದೆ: ರಾಹುಲ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ12 Jun 2020 8:35 PM IST
share
ಭಾರತ ಮತ್ತು ಅಮೆರಿಕದಲ್ಲಿ ಸಹಿಷ್ಣುತೆಯ ಡಿಎನ್‌ಎ ಮಾಯವಾಗಿದೆ: ರಾಹುಲ್ ಗಾಂಧಿ

ಹೊಸದಿಲ್ಲಿ,ಜೂ.12: ಸಹಿಷ್ಣುತೆ ಭಾರತ ಮತ್ತು ಅಮೆರಿಕ ನಡುವಿನ ಸಹಭಾಗಿತ್ವವನ್ನು ನಿರೂಪಿಸಿತ್ತು,ಆದರೆ ಇಂದು ಉಭಯ ದೇಶಗಳು ಸಹಿಷ್ಣುತೆಯ ಡಿಎನ್‌ಎ ಅನ್ನು ಕಳೆದುಕೊಂಡಿವೆ ಎಂದು ಶುಕ್ರವಾರ ಹೇಳಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು,ಬದಲಿಗೆ ಉಭಯ ದೇಶಗಳ ನಡುವಿನ ಬಾಂಧವ್ಯ ಅತ್ಯಂತ ವ್ಯಾವಹಾರಿಕ ಮತ್ತು ಪ್ರಾಸಂಗಿಕವಾಗಿರುವಂತೆ ಕಂಡು ಬರುತ್ತಿದೆ ಎಂದರು.

 ಅಮೆರಿಕದ ಮಾಜಿ ರಾಜತಾಂತ್ರಿಕ ಹಾಗೂ ಹಾಲಿ ಹಾರ್ವರ್ಡ್‌ನ ಜಾನ್ ಎಫ್.ಕೆನೆಡಿ ಸ್ಕೂಲ್ ಆಫ್ ಗವರ್ನಮೆಂಟ್‌ನಲ್ಲಿ ಪ್ರೊಫೆಸರ್ ಆಗಿರುವ ನಿಕೋಲಸ್ ಬರ್ನ್ಸ್ ಅವರ ಜೊತೆ ಕೊರೋನ ಬಿಕ್ಕಟ್ಟು ಹೇಗೆ ಜಗತ್ತನ್ನು ಮರುರೂಪಿಸುತ್ತಿದೆ ಎಂಬ ಕುರಿತು ವೀಡಿಯೊ ಸಂವಾದದಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ ರಾಹುಲ್,ಐತಿಹಾಸಿಕವಾಗಿ ಅಮೆರಿಕದೊಂದಿಗೆ ಭಾರತದ ಸಂಬಂಧವು ಯಾವಾಗಲೂ ಶಿಕ್ಷಣ,ರಕ್ಷಣೆ ಮತ್ತು ಆರೋಗ್ಯದಂತಹ ಹಲವಾರು ಕ್ಷೇತ್ರಗಳಿಗೆ ಆದ್ಯತೆ ನೀಡಿತ್ತು. ಆದರೆ ಈಗ ಈ ಸಂಬಂಧವು ಕೇವಲ ರಕ್ಷಣೆಗೆ ಸೀಮಿತವಾಗಿದೆ ಎಂದು ಹೇಳಿದರು.

 ‘ಹೊಸ ಚಿಂತನೆಗಳನ್ನು ನಾವು ಒಪ್ಪಿಕೊಳ್ಳಬೇಕು,ನಾವು ಮುಕ್ತವಾಗಿರಬೇಕು. ಆದರೆ ಅಚ್ಚರಿಯ ವಿಷಯವೆಂದರೆ ಆ ಮುಕ್ತ ಡಿಎನ್‌ಎ ಈಗ ಮಾಯವಾಗುತ್ತಿದೆ.ನಾನು ಈ ಮಾತನ್ನು ದುಃಖದಿಂದ ಹೇಳುತ್ತಿದ್ದೇನೆ,ಏಕೆಂದರೆ ಹಿಂದೆ ನಾನು ಕಂಡಿದ್ದ ಮಟ್ಟದ ಸಹಿಷ್ಣುತೆ ಈಗ ಕಾಣುತ್ತಿಲ್ಲ. ಅದು ಅಮೆರಿಕದಲ್ಲಿ ಅಥವಾ ಭಾರತದಲ್ಲಿ ನನಗೆ ಕಂಡು ಬರುತ್ತಿಲ್ಲ ’ ಎಂದರು.

ಭಾರತದಲ್ಲಿ ಕೊರೋನ ವೈರಸ್ ಬಿಕ್ಕಟ್ಟನ್ನು ನಿರ್ವಹಿಸುತ್ತಿರುವ ರೀತಿಗಾಗಿ ಕೇಂದ್ರವನ್ನು ಟೀಕಿಸಿದ ರಾಹುಲ್,ಅದು ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.

ಅಮೆರಿಕ ಮತ್ತು ಭಾರತದ ನಡುವಿನ ಸಂಬಂಧವನ್ನು ರೂಪಿಸುವಲ್ಲಿ ಆ ದೇಶದಲ್ಲಿಯ ಭಾರತೀಯ ಸಮುದಾಯದ ಪಾತ್ರದಿಂದ ಹಿಡಿದು ಅಮೆರಿಕ-ಚೀನಾ ನಡುವಿನ ಉದ್ವಿಗ್ನತೆಯವರೆಗೆ ಹಲವಾರು ವಿಷಯಗಳನ್ನು ರಾಹುಲ್ ಬನ್ಸ್ ಜೊತೆಗೆ ಚರ್ಚಿಸಿದರು.

ಭಾರತ ಮತ್ತು ಅಮೆರಿಕ ಇತರ ದೇಶಗಳಲ್ಲಿಯ ಸರ್ವಾಧಿಕಾರಿ ಸರಕಾರಗಳಿಂದ ಸವಾಲುಗಳನ್ನು ಎದುರಿಸುತ್ತಿವೆ ಎಂದು ಹೇಳಿದ ಬನ್ಸ್,‘ಚೀನಾ ಮತ್ತು ರಷ್ಯಾ ದೇಶಗಳನ್ನು ನಾನು ಈ ಹಿಂದೆಯೇ ಉಲ್ಲೇಖಿಸಿದ್ದೇನೆ. ನಾವೆಂದೂ ಯುದ್ಧವನ್ನು ಬಯಸುವುದಿಲ್ಲ,ಆದರೆ ನಮ್ಮ ಜೀವನ ವಿಧಾನವನ್ನು ಮತ್ತು ವಿಶ್ವದಲ್ಲಿ ನಮ್ಮ ಸ್ಥಾನಗಳನ್ನು ಸಂರಕ್ಷಿಸಿಕೊಳ್ಳಲು ನಾವು ಬಯಸಿದ್ದೇವೆ ’ ಎಂದರು. ಭಾರತ ಮತ್ತು ಅಮೆರಿಕ ವಿಶ್ವದಲ್ಲಿ ಮಾನವ ಸ್ವಾತಂತ್ರ,ಪ್ರಜಾಪ್ರಭುತ್ವ ಮತ್ತು ಜನರ ಆಡಳಿತವನ್ನು ಉತ್ತೆೇಜಿಸಲು ಶಕ್ತಿಗಳನ್ನು ಒಗ್ಗೂಡಿಸಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X