ಬೀಡಿಕಾರ್ಮಿಕರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಸಿಎಂಗೆ ಮನವಿ
ಉಡುಪಿ, ಜೂ.12: ಬೀಡಿ ಕಾರ್ಮಿಕರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್(ಸಿಐಟಿಯು) ಜೂ.11ರಂದು ಉಡುಪಿ ಜಿಲ್ಲಾಧಿಕಾರಿ ಮೂಲಕ ವುುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.
ಲಾಕ್‌ಡೌನ್‌ನಿಂದ ಕಳೆದ ಎರಡೂವರೆ ತಿಂಗಳುಗಳಿಂದ ಬೀಡಿ ಕಾರ್ಮಿಕರಿಗೆ ಕೆಲಸ ಇಲ್ಲದೆ ಕುಟುಂಬ ನಿರ್ವಹಣೆ ದುಸ್ತರವಾಗಿದೆ. ಬೀಡಿ ಕಾರ್ಮಿಕರಿಗೆ ರಾಜ್ಯ ಸರಕಾರ ಕಲ್ಯಾಣ ಮಂಡಳಿಯಿಂದಾಗಲಿ ಅಥವಾ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಅಗಲಿ ಅಥವಾ ಬೀಡಿ ಮಾಲಕ ರಿಂದಾಗಲೀ ಯಾವುದೆ ಪರಿಹಾರ ಈವರೆಗೂ ಬಂದಿಲ್ಲ. ಆದುದರಿಂದ ಬೀಡಿ ಕಾರ್ಮಿಕರಿಗೆ 6000 ರೂ. ಪರಿಹಾರ ನಿಧಿಯನ್ನು ಸರಕಾರ ಘೋಷಣೆ ಮಾಡಬೇಕು ಎಂದು ಮನವಿ ಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಫೆಡರೇಶನ್ ಜಿಲ್ಲಾಧ್ಯಕ್ಷ ಮಹಾಬಲ ವಡೇರಹೋಬಳಿ, ಕಾರ್ಯದರ್ಶಿ ಉಮೇಶ್ ಕುಂದರ್, ನಳಿನಿ, ಸಿಐಟಿಯುನ ಉಡುಪಿ ತಾಲೂಕು ಕಾರ್ಯದರ್ಶಿ ಕವಿರಾಜ್ ಎಸ್. ಉಪಸ್ಥಿತರಿದ್ದರು.
Next Story





