ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ: ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
ಉಡುಪಿ, ಜೂ.12: ಕೋವಿಡ್-19ರ ಕಾರಣಕ್ಕಾಗಿ ಮುಂದೂಡಲ್ಪಟ್ಟ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಜೂನ್ 18ರಂದು ಜಿಲ್ಲೆಯ 27 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಸಹ ಆದೇಶದಲ್ಲಿ ಸೂಚಿಸಲಾಗಿದೆ.
Next Story





