ಜೂ.15: ಬ್ಯಾರಿ ಸಾಹಿತ್ಯ ಅಕಾಡಮಿ ನೂತನ ಕಚೇರಿ ಉದ್ಘಾಟನೆ
ಮಂಗಳೂರು, ಜೂ.12: ರಾಜ್ಯ ಬ್ಯಾರಿ ಅಕಾಡಮಿಯ ನೂತನ ಕಚೇರಿಯನು ಮಂಗಳೂರು ತಾಪಂನ ಹಳೇ ಕಟ್ಟಡ ಸಾಮರ್ಥ್ಯ ಸೌಧದ ಎರಡನೇ ಮಹಡಿಗೆ ಸ್ಥಳಾಂತರಗೊಳಿಸಲಾಗಿದೆ. ನೂತನ ಕಚೇರಿಯನ್ನು ಜೂ.15ರಂದು ಸಂಜೆ 4 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
ಸ್ಥಳಾಂತರಗೊಂಡ ನೂತನ ಕಚೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಮಂಗಳೂರು ಶಾಸಕ ವೇದವ್ಯಾಸ ಕಾಮತ್, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು ಭಾಗವಹಿಸಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ರಹೀಂ ಉಚ್ಚಿಲ್ ವಹಿಸಲಿದ್ದಾರೆ ಎಂದು ಅಕಾಡಮಿ ರಿಜಿಸ್ಟ್ರಾರ್ ಪೂರ್ಣಿಮಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





