Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಳೆಹಾನಿ ಸಂತ್ರಸ್ತರಿಗೆ ಮನೆ ಸೇರುವ...

ಮಳೆಹಾನಿ ಸಂತ್ರಸ್ತರಿಗೆ ಮನೆ ಸೇರುವ ಸಂಭ್ರಮ: 'ಕುಮಾರಸ್ವಾಮಿ ಲೇಔಟ್' ಎಂದು ಹೆಸರಿಡುವ ಅಭಿಲಾಷೆ

ವಾರ್ತಾಭಾರತಿವಾರ್ತಾಭಾರತಿ12 Jun 2020 11:23 PM IST
share
ಮಳೆಹಾನಿ ಸಂತ್ರಸ್ತರಿಗೆ ಮನೆ ಸೇರುವ ಸಂಭ್ರಮ: ಕುಮಾರಸ್ವಾಮಿ ಲೇಔಟ್ ಎಂದು ಹೆಸರಿಡುವ ಅಭಿಲಾಷೆ

ಮಡಿಕೇರಿ, ಜೂ.12: ಕೊಡಗು ಜಿಲ್ಲೆಯಲ್ಲಿ 2018 ರಲ್ಲಿ ಮಹಾಮಳೆ ಸೃಷ್ಟಿಸಿದ ದುರಂತದಿಂದ ಬದುಕಿ ಬಾಳಿದ್ದ ಮನೆಗಳನ್ನೆ ಕಳೆದುಕೊಂಡು ನಿರಾಶ್ರಿತರಾಗಿದ್ದ ಹಲವು ಕುಟುಂಬಗಳು ಇಂದು ಸರ್ಕಾರ ನಿರ್ಮಿಸಿಕೊಟ್ಟ ನೂತನ ಮನೆಗಳ “ಗೃಹ ಪ್ರವೇಶ” ಸಮಾರಂಭದ ಸಂಭ್ರಮದಲ್ಲಿವೆ. ಮದೆನಾಡಿನ ಗೋಳಿಕಟ್ಟೆಯಲ್ಲಿ ನಿರ್ಮಾಣಗೊಂಡಿರುವ ಸುಮಾರು 80 ಮನೆಗಳಿಗೆ ಅರ್ಹ ಫಲಾನುಭವಿಗಳು ಬಂದು ಸೇರುತ್ತಿದ್ದು, ಬಡಾವಣೆಗೆ ಹೆಚ್.ಡಿ.ಕುಮಾರಸ್ವಾಮಿ ಲೇಔಟ್ ಎಂದು ಹೆಸರಿಡುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.

ಮಡಿಕೇರಿ ಸಮೀಪದ ಗೋಳಿಕಟ್ಟೆಯಲ್ಲಿ 9.80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ 80 ಮನೆಗಳನ್ನು ಇದೇ ಜೂ.4 ರಂದು ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ. ತಮಗೆ ದೊರೆತ ಮನೆಗಳಿಗೆ ಕೆಲ ಮಂದಿ ತಕ್ಷಣವೇ ಬಂದು ಸೇರಿದ್ದರೆ, ಮತ್ತೆ ಹಲವರು ಲಾಕ್ ಡೌನ್ ನಡುವೆ ಸೀಮಿತ ಬಂಧು ಮಿತ್ರರೊಂದಿಗೆ ಗೃಹ ಪ್ರವೇಶ ಮಾಡಿ, ಸುಂದರ ಬದುಕಿನ ನಿರೀಕ್ಷೆಗಳನ್ನು ಎದೆಯಲ್ಲಿ ತುಂಬಿಕೊಂಡಿದ್ದಾರೆ.

ಶುಕ್ರವಾರ ಗೋಳಿಕಟ್ಟೆಯ ಸಂತ್ರಸ್ತರ ಮನೆಗಳ ನೂತನ ಬಡಾವಣೆಯಲ್ಲಿ ಮೂರು ಮನೆಗಳ ಗೃಹ ಪ್ರವೇಶ ಸರಳವಾಗಿ ನಡೆಯಿತು. ಪತ್ರಿಕಾ ಛಾಯಾಗ್ರಾಹಕ ಕೆ.ಎಸ್.ಲೋಕೇಶ್ ಅವರು ಕೂಡ ತಮ್ಮ ಬಂಧು, ಮಿತ್ರರ ಶುಭಕಾಮನೆಗಳೊಂದಿಗೆ ಗೃಹಪ್ರವೇಶ ಮಾಡಿ ತೃಪ್ತಿಯ ನಗು ಬೀರಿದರು. ಎರಡು ವರ್ಷಗಳ ಹಿಂದೆ ಅತಿವೃಷ್ಟಿಯಿಂದ ತಾವಿದ್ದ ಕಾಟಕೇರಿಯ ಮನೆಯನ್ನು ಅವರು ಕಳೆದುಕೊಂಡಿದ್ದರು.

ಮುಂಗಾರಿಗೆ ಸಿದ್ಧತೆ

ಹೊಸ ಬಡಾವಣೆಯ ಕೆಲವು ಮನೆಗಳಿಗೆ ಅದಾಗಲೆ ಸೇರಿರುವ ಕುಟುಂಬಗಳು, ತಮಗೆ ಲಭ್ಯವಿರುವ ಜಾಗದಲ್ಲಿ ಕಟ್ಟಿಗೆ ಸೇರಿದಂತೆ ಇತರೆ ಸಾಮಾಗ್ರಿಗಳನ್ನು ಇರಿಸಲು ಶೀಟ್‍ಗಳನ್ನು, ಹೆಂಚುಗಳನ್ನು ಬಳಸಿ ಶೆಡ್ ನಿರ್ಮಾಣ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಹೆಚ್ಚಿನ ಕೋಣೆ ಮತ್ತು ಕಾಂಪೌಂಡ್ ನಿರ್ಮಿಸಿಕೊಳ್ಳುವ ಕಾರ್ಯವೂ ನಡೆಯುತ್ತಿದೆ.

ಕೆಲಸದ ಚಿಂತೆ

ಮದೆನಾಡಿನ ಮುಖ್ಯ ರಸ್ತೆಯಿಂದ ಅಂದಾಜು 3 ಕಿ.ಮೀ. ಒಳಭಾಗದಲ್ಲಿರುವ ವಸತಿ ಸಮುಚ್ಛಯ ಪ್ರದೇಶದ ಸುತ್ತಮುತ್ತಲು ತಮಗೆ ಅಗತ್ಯ ಕೆಲಸ ದೊರಕಬಹುದೇ ಎನ್ನುವ ಬಗ್ಗೆಯೂ ಹಲವು ಕಾರ್ಮಿಕ ಕುಟುಂಬಗಳು ಚಿಂತನೆಯಲ್ಲಿ ತೊಡಗಿವೆ. ದುಡಿಮೆಯ ಮೂಲಕ ಬದುಕು ಕಟ್ಟಿಕೊಳ್ಳಬೇಕಾದ ಪರಿಸ್ಥಿತಿಗಳ ನಡುವೆ ಹೊಸ ಪ್ರದೇಶದ ಸುತ್ತಮುತ್ತ ಕೆಲಸ ದೊರಕಿಸಿಕೊಳ್ಳುವುದು ಅನಿವಾರ್ಯವಾಗಿದೆ. ಕಾಫಿ, ಭತ್ತದ ಗದ್ದೆಗಳನ್ನು ಒಳಗೊಂಡ ಪರಿಸರದ ನಡುವೆ ವಸತಿ ಸಮುಚ್ಛಯ ಇರುವುದರಿಂದ ಒಂದಷ್ಟು ಕೆಲಸ ದೊರಕುವ ವಿಶ್ವಾಸವು ಇದೆ.

ಕುಮಾರಸ್ವಾಮಿ ಲೇಔಟ್

2018 ರಲ್ಲಿ ಸಂಭವಿಸಿದ ಮಳೆ ಅನಾಹುತಕ್ಕೆ 800 ಕ್ಕೂ ಹೆಚ್ಚು ಕುಟುಂಬಗಳು ಮನೆಗಳನ್ನು ಕಳೆದುಕೊಂಡು ಬೀದಿ ಪಾಲಾದಾಗ ಸಕಾಲದಲ್ಲಿ ಸ್ಪಂದಿಸಿದ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಷ್ಟೇ ಸಂಖ್ಯೆಯ ಮನೆಗಳನ್ನು ನಿರ್ಮಿಸಲು ಯೋಜನೆಯನ್ನು ರೂಪಿಸಿ ಕಾಮಗಾರಿಗೆ ಚಾಲನೆಯನ್ನು ನೀಡಿದ್ದರು. ತಲಾ 9.80 ಲಕ್ಷ ರೂ.ಗಳಲ್ಲಿ ನೂತನ ಮನೆಗಳನ್ನು ನಿರ್ಮಾಣ ಮಾಡಲಾಗಿದ್ದು, ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ, ವಿಶಾಲ ರಸ್ತೆ, ಪಾರ್ಕ್ ಸೇರಿದಂತೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ಇದು ಕುಮಾರಸ್ವಾಮಿ ಅವರ ಪ್ರಯತ್ನದ ಫಲವಾಗಿರುವುದರಿಂದ ಈ ಬಡಾವಣೆಗೆ “ಹೆಚ್.ಡಿ.ಕುಮಾರಸ್ವಾಮಿ ಲೇಔಟ್” ಎಂದು ಹೆಸರಿಡುವ ಮೂಲಕ ಅವರಿಗೆ ಕೃತಜ್ಞತೆ ಸಲ್ಲಿಸಲು ಬಹುತೇಕರು ನಿಶ್ಚಯಿಸಿರುವುದಾಗಿ ಸ್ಥಳೀಯರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X