ಸತತ ಏಳನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ

ಹೊಸದೆಲ್ಲಿ ಜೂನ್ 13: ಮೆಟ್ರೋ ನಗರಗಳಲ್ಲಿ ಶನಿವಾರ ಕೂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ ಏರಿಕೆಯಾಗಿದ್ದು ಈ ಮೂಲಕ ಹನ್ನೆರಡು ವಾರಗಳ ವಿರಾಮದ ಬಳಿಕ ಸತತ ಏಳನೇ ದಿನವೂ ಸರಕಾರಿ ಸ್ವಾಮ್ಯದ ತೈಲ ಕಂಪೆನಿಗಳು ಇಂಧನ ದರ ಏರಿಕೆ ಮಾಡಿವೆ.
ದಿಲ್ಲಿಯಲ್ಲಿ ಇಂದು ಬೆಳಿಗ್ಗೆ 6ಗಂಟೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 59 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 58 ಪೈಸೆ ಏರಿಸಲಾಗಿದೆ. ಇದೀಗ ದಿಲ್ಲಿಯಲ್ಲಿ ಪೆಟ್ರೋಲ್‌ಗೆ ಪ್ರತಿ ಲೀಟರ್ ದರ 75.16ರೂ . ಹಾಗೂ ಡೀಸೆಲ್ ದರ ಪ್ರತಿ ಲೀಟರ್ 73.39 ರೂ. ಏರಿಸಲಾಗಿದೆೆ ಎಂದು ಭಾರತೀಯ ತೈಲ ನಿಗಮ ತಿಳಿಸಿದೆ. ಕೋಲ್ಕತಾ, ಮುಂಬೈ ಹಾಗೂ ಚೆನ್ನೈ ಮಹಾನಗರಗಳಲ್ಲೂ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳವಾಗಿದೆ.
Next Story





