Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಕೋವಿಡ್-19’ ಗಂಭೀರ ಪರಿಸ್ಥಿತಿ...

‘ಕೋವಿಡ್-19’ ಗಂಭೀರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ: ಸಚಿವ ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ13 Jun 2020 8:20 PM IST
share
‘ಕೋವಿಡ್-19’ ಗಂಭೀರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ: ಸಚಿವ ಡಾ.ಕೆ.ಸುಧಾಕರ್

ಯಾದಗಿರಿ, ಜೂ.13: ಕೊರೋನ ಹರಡುವಿಕೆ ಮುಂದಿನ ದಿನಗಳಲ್ಲಿ ಗಂಭೀರ ಸ್ವರೂಪ ಪಡೆಯಬಹುದು ಎಂದು ಭಾವಿಸಿ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಡಳಿತಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.

ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-19 ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರಕಾರ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಜ್ವರದ ಸೋಂಕು ಕಾಣಿಸಿಕೊಂಡ ಮತ್ತು ಬೇರೆ ಕಾಯಿಲೆಗಳಿಂದ ಬಳಲುತ್ತಿರುವ ಹಿರಿಯ ನಾಗರಿಕರ ಟೆಸ್ಟ್ ಮಾಡಬೇಕು ಮತ್ತು ಅವರ ಮೇಲೆ ನಿರಂತರ ನಿಗಾವಹಿಸಬೇಕೆಂದರು.

ಇದು ಜಿಲ್ಲೆಗೆ ಮೊದಲ ಭೇಟಿ. ಯಾದಗಿರಿ ಮತ್ತು ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಸೋಂಕಿತರು ಇದ್ದಾರೆ. 735 ಸೋಂಕಿತರು ಯಾದಗಿರಿಯಲ್ಲಿದ್ದಾರೆ. ಮೇ ವರೆಗೆ ಇಲ್ಲಿ ಯಾವ ಪ್ರಕರಣವೂ ಇರಲಿಲ್ಲ. ಮಹಾರಾಷ್ಟ್ರದಿಂದ ಬಂದವರಿಂದ ಸೋಂಕು ಹರಡಿದೆ ಎಂದು ಸುಧಾಕರ್ ಹೇಳಿದರು.

ಜಿಲ್ಲಾಡಳಿತದ ಪರಿಶ್ರಮದಿಂದ ಗ್ರಾಮ ಮಟ್ಟದಲ್ಲಿ ಅರಿವು ಚೆನ್ನಾಗಿದೆ. ಹೀಗಾಗಿ ಆತಂಕದ ಸ್ಥಿತಿ ಇಲ್ಲ. ಯಾರಲ್ಲೂ ರೋಗದ ಲಕ್ಷಣ ಇಲ್ಲ. ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರ ಮೇಲೂ ನಿಗಾ ಇರಿಸಲಾಗಿದೆ ಎಂದು ಸುಧಾಕರ್ ತಿಳಿಸಿದರು.

ಮುಖ್ಯವಾಗಿ ಒಂದು ವಾರದಲ್ಲಿ ಪ್ರಯೋಗಾಲಯ ಕಾರ್ಯಾಚರಣೆ ಮಾಡಲಿದೆ. ಮೆಡಿಕಲ್ ಕಾಲೇಜು ಆರಂಭಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ. 435 ಕೋಟಿ ರೂ.ವೆಚ್ಚದ ಕಾಮಗಾರಿಗೆ ಕೆಲ ದಿನಗಳಲ್ಲಿ ಮುಖ್ಯಮಂತ್ರಿ ಅವರಿಂದ ಭೂಮಿ ಪೂಜೆ ಮಾಡಲಾಗುವುದು ಎಂದು ಅವರು ಪ್ರಕಟಿಸಿದರು.

ಆಸ್ಪತ್ರೆಗೆ ಬೇಕಾದ ಉಪಕರಣಗಳನ್ನು ಖರೀದಿಗೆ ಸೂಚಿಸಲಾಗಿದೆ. 150 ಬೋಧಕ ಸಿಬ್ಬಂದಿ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗುವುದು. ಚಿಕ್ಕಬಳ್ಳಾಪುರ ಮತ್ತು ಯಾದಗಿರಿಗಳಲ್ಲಿ 30 ತಿಂಗಳಿಗೆ ಮುಂಚಿತವಾಗಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಅವರು ಹೇಳಿದರು.

ಎರಡು ಲಕ್ಷ ಕುಟುಂಬಗಳ ಸಮೀಕ್ಷೆ ನಡೆಸಿರುವುದು ಮೆಚ್ಚುಗೆ ಸಂಗತಿ. ಟಾಸ್ಕ್ ಫೋರ್ಸ್ ಸಮಿತಿಗಳ ಮೂಲಕ ಹಿರಿಯ ನಾಗರಿಕರು ಮತ್ತು ಇತರ ರೋಗಗಳಿರುವವರ ಮೇಲೆ ಸತತ ನಿಗಾವಹಿಸಲಾಗಿದೆ. ಜಿಲ್ಲಾಡಳಿತದ ಕಾರ್ಯವೈಖರಿ ನನ್ನ ಆತಂಕವನ್ನು ನಿವಾರಿಸಿದೆ. ಗ್ರಾಮ ಮಟ್ಟದಲ್ಲಿ ಜನರ ಸಹಕಾರ ಉತ್ತಮ ಮಟ್ಟದಲ್ಲಿ ಇರುವುದು ಶ್ಲಾಘನೀಯ ಎಂದು ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನೂ ಕೆಲ ಫೀವರ್ ಕ್ಲಿನಿಕ್ ತೆರೆಯಲು ಸೂಚಿಸಲಾಗಿದೆ. ಹೊರಗಿಂದ ಬಂದವರ ಮೇಲೆ ನಿಗಾ ವ್ಯವಸ್ಥೆ ಇದೇ ರೀತಿ ಮುಂದುವರಿದರೆ, ಕೊರೋನ ನಿಗ್ರಹ ಸಾಧ್ಯವಿದೆ. ಆದಷ್ಟು ಶೀಘ್ರ ಮೆಡಿಕಲ್ ಕಾಲೇಜು ಆರಂಭಿಸಲಾಗುವುದು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ವೆಂಕಟರೆಡ್ಡಿ, ದರ್ಶನಾಪುರ್, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X