Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸ್ಮಾರ್ಟ್ ಸಿಟಿ ಅಭಿಯಾನದಡಿ 2,303 ಕೋಟಿ...

ಸ್ಮಾರ್ಟ್ ಸಿಟಿ ಅಭಿಯಾನದಡಿ 2,303 ಕೋಟಿ ರೂ.ಅನುದಾನ ಬಿಡುಗಡೆ: ಸಚಿವ ಬಿ.ಎ.ಬಸವರಾಜ

ವಾರ್ತಾಭಾರತಿವಾರ್ತಾಭಾರತಿ13 Jun 2020 11:26 PM IST
share

ಬೆಂಗಳೂರು, ಜೂ.13: ಸ್ಮಾರ್ಟಿ ಅಭಿಯಾನದಡಿಯಲ್ಲಿ ಈವರೆಗೆ ಕೇಂದ್ರ ಸರಕಾರ 1,325 ಕೋಟಿ ರೂ.ಹಾಗೂ ರಾಜ್ಯ ಸರಕಾರದ 978 ಕೋಟಿ ರೂ. ಸೇರಿದಂತೆ ಒಟ್ಟು 2,303 ಕೋಟಿ ರೂ.ಬಿಡುಗಡೆಯಾಗಿದ್ದು, 906 ಕೋಟಿ ರೂ.ಗಳ ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ತಿಳಿಸಿದರು.

ಶನಿವಾರ ಭೈರತಿ ಗ್ರಾಮದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ 7 ಸ್ಮಾರ್ಟ್ ಸಿಟಿಗಳಿಗೆ ಕೇಂದ್ರ ಸರಕಾರ ಅನುಮೋದನೆ ನೀಡಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ. ರಾಜ್ಯದ ಉಳಿದ ನಾಲ್ಕು ಮಹಾನಗರಗಳಿಗೆ ಸ್ಮಾರ್ಟ್ ಸಿಟಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕೋರಿ ಕೇಂದ್ರ ನಗರಾಭಿವೃದ್ಧಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ಸ್ಮಾರ್ಟ್ ಸಿಟಿ ಅಭಿಯಾನದಡಿಯಲ್ಲಿ ಬೆಂಗಳೂರು, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ತುಮಕೂರು ಹಾಗೂ ಮಂಗಳೂರು ನಗರಗಳಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ಗಳನ್ನು ಸ್ಥಾಪಿಸಲಾಗಿದೆ. ಇವುಗಳು ಪ್ರಸ್ತುತ ಕೋವಿಡ್-19 ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಜಿಲ್ಲಾಡಳಿತಕ್ಕೆ ತಾಂತ್ರಿಕ ನೆರವು ನೀಡುತ್ತಿವೆ. ಜಿಪಿಎಸ್ ತಂತ್ರಜ್ಞಾನ ಬಳಸಿ ಕೋವಿಡ್-19 ಸೋಂಕಿತ ರೋಗಿಗಳ, ಶಂಕಿತರ ಚಲನವಲನಗಳ ಮೇಲೆ ನಿಗಾವಹಿಸಲಾಗುವುದು ಎಂದು ಬಸವರಾಜ ಹೇಳಿದರು.

ಮೈಸೂರು ನಗರದಲ್ಲಿ ಕುಡಿಯುವ ನೀರು ಯೋಜನೆ ಕಲ್ಪಿಸುವ ಹಳೆ ಉಂಡವಾಡಿ ಯೋಜನೆಯನ್ನು ಮುಂದಿನ ಒಂದು ತಿಂಗಳಲ್ಲಿ ಪ್ರಾರಂಭಗೊಳಿಸಲು ಸೂಚಿಸಲಾಗಿದೆ. ಬೆಳಗಾವಿ, ಕಲಬುರಗಿ, ಬಳ್ಳಾರಿ, ಹುಬ್ಬಳ್ಳಿ-ಧಾರವಾಡ, ವಿಜಯಪುರ ಮತ್ತು ತುಮಕೂರುಗಳಿಗೆ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ಪ್ರತಿ ಪಾಲಿಕೆಗೆ 125 ಕೋಟಿ ರೂ.ಗಳ ಅನುದಾನದಲ್ಲಿ ಕ್ರಿಯಾಯೋಜನೆ ತಯಾರಿಸಿ, ಅನುಮೋದಿಸಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮುಂದಿನ ಒಂದು ವರ್ಷದಲ್ಲಿ ಎಲ್‍ಇಡಿ ಬೀದಿ ದೀಪಗಳನ್ನು ಅಳವಡಿಸಲಾಗುವುದು. ಪೌರ ಕಾರ್ಮಿಕರ ಆರೋಗ್ಯ ಹಾಗೂ ಇತರೆ ಸೌಲಭ್ಯಗಳ ಬಗ್ಗೆ ವಿಶೇಷ ಗಮನಹರಿಸಿ, ಉತ್ತಮ ಸೌಲಭ್ಯಗಳನ್ನು ಒದಗಿಸಿಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪೌರ ಕಾರ್ಮಿಕ ಗೃಹ ಭಾಗ್ಯ ಯೋಜನೆ(758 ಮನೆಗಳು)ಗೆ ಸಚಿವ ಸಂಪುಟದ ಅನುಮೋದನೆ ದೊರೆತಿದ್ದು, ನಿಗದಿತ ಅವಧಿಯಲ್ಲಿ ಮನೆಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗಿದೆ ಎಂದು ಬಸವರಾಜ ಹೇಳಿದರು.

ರಾಜ್ಯ ಸರಕಾರವು ಕೊರೋನ ವಿರುದ್ಧದ ಹೋರಾಟವನ್ನು ಯಶಸ್ವಿಯಾಗಿ ಮಾಡುತ್ತಿದೆ. ಜಿಲ್ಲಾ ಕೇಂದ್ರದ ಆಸ್ಪತ್ರೆಗಳಲ್ಲಿ ಪ್ರಯೋಗ ಶಾಲೆಗಳ ಸ್ಥಾಪನೆಗೆ ಕ್ರಮ ವಹಿಸಲಾಗಿದೆ. 530 ಆಸ್ಪತ್ರೆಗಳನ್ನು ಕೊರೋನ ವಾರ್ ರೂಮ್‍ಗಳಾಗಿ ಪರಿವರ್ತಿಸಲಾಗಿದೆ. ಎಲ್ಲ ಕುಟುಂಬಗಳಿಗೆ ಎರಡು ತಿಂಗಳ ಮುಂಗಡ ಪಡಿತರ, ನೋಂದಾಯಿತ ಕಟ್ಟಡ ಕಾರ್ಮಿಕರಿಗೆ 5 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ 5 ಸಾವಿರ ರೂ ಧನಸಹಾಯ ನೀಡಲಾಗಿದೆ ಎಂದು ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರವು ಎರಡನೆ ಅವಧಿಯ ಮೊದಲನೆ ವರ್ಷವನ್ನು ಸಾಕಷ್ಟು ಸವಾಲುಗಳ ನಡುವೆ ಯಶಸ್ವಿಯಾಗಿ ಪೂರೈಸಿದೆ. ಸಂವಿಧಾನದ 370ನೆ ವಿಧಿ ರದ್ದು, ಪೌರತ್ವ ತಿದ್ದುಪಡಿ ವಿಧೇಯಕ-2019, ತ್ರಿವಳಿ ತಲಾಕ್, ಕರ್ತಾರ್ ಪುರ್ ಕಾರಿಡಾರ್ ಯೋಜನೆ, ಬ್ರೂ-ರಿಯಾಂಗ್ ಒಪ್ಪಂದ, ಮೂರು ಸೇನಾ ಪಡೆಗಳಿಗೆ ಮುಖ್ಯಸ್ಥರ ನೇಮಕ, ಅಪಾಚೆ ಕೊಂಬ್ಯಾಟ್ ಹೆಲಿಕಾಪ್ಟರ್, ರಫೆಲ್ ಏರ್ ಕ್ರಾಫ್ಟ್ ಸೇನೆಗೆ ಸೇರ್ಪಡೆ, ಶ್ರೀರಾಮ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿ ದೇಶದ ಜನರ ಕನಸನ್ನು ನನಸಾಗಿಸಿದ್ದಾರೆ ಎಂದು ಬಸವರಾಜ ಮೆಚ್ಚುಗೆ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X