Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಜಾನುವಾರು ವ್ಯಾಪಾರಿಯ ಮೇಲೆ ಮಾರಣಾಂತಿಕ...

​ಜಾನುವಾರು ವ್ಯಾಪಾರಿಯ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಪಿಎಫ್‌ಐ ಖಂಡನೆ

ವಾರ್ತಾಭಾರತಿವಾರ್ತಾಭಾರತಿ14 Jun 2020 7:17 PM IST
share

ಮಂಗಳೂರು, ಜೂ.14: ನಗರದ ಕೊಟ್ಟಾರದಲ್ಲಿ ರವಿವಾರ ಮುಂಜಾನೆ ಜಾನುವಾರು ಸಾಗಾಟದ ವಾಹನವನ್ನು ತಡೆದು ನಿಲ್ಲಿಸಿ ವ್ಯಾಪಾರಿಯ ಮೇಲೆ ಸಂಘ ಪರಿವಾರದ ಕಾರ್ಯಕರ್ತರು ಮಾರಣಾಂತಿಕ ದಾಳಿ ನಡೆಸಿರುವುದನ್ನು ಪಿಎಫ್‌ಐ ದ.ಕ.ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್ ತೀವ್ರವಾಗಿ ಖಂಡಿಸಿದ್ದಾರೆ.

ಜೋಕಟ್ಟೆಯ ಜಾನುವಾರು ವ್ಯಾಪಾರಿ ಮುಹಮ್ಮದ್ ಹನೀಫ್ ಸೂಕ್ತ ದಾಖಲೆಯೊಂದಿಗೆ ಜಾನುವಾರು ವ್ಯಾಪಾರ ನಡೆಸುತ್ತಿದ್ದಾರೆ. ಅಂತೆಯೇ ಹನೀಫ್ ರವಿವಾರ ಮುಂಜಾನೆ ನಗರದ ಕುದ್ರೋಳಿಯ ಕಸಾಯಿ ಖಾನೆಗೆ ನಾಲ್ಕು ಎತ್ತುಗಳನ್ನು ಕಾನೂನುಬದ್ಧವಾಗಿಯೇ ಸಾಗಿಸುತ್ತಿದ್ದರು. ವೈರಲ್ ಆಗಿರುವ ಸಾಗಾಟದ ಫೋಟೊ ಕೂಡ ಈ ವಿಚಾರವನ್ನು ಬಹಳ ಸ್ಪಷ್ಟಪಡಿಸುತ್ತಿದೆ. ಆದರೆ ಕೊಟ್ಟಾರ ಚೌಕಿಯ ಇನ್ಫೋಸಿಸ್ ಬಳಿ ಮಾರಕಾಸ್ತ್ರಗಳೊಂದಿಗೆ ಸಜ್ಜಾಗಿದ್ದ ದುಷ್ಕರ್ಮಿಗಳು ವಾಹನವನ್ನು ತಡೆದಿದ್ದಾರೆ. ಅಲ್ಲದೆ ಹನೀಫ್ ವಾಹನಕ್ಕೆ ಕಟ್ಟಿ ಹಾಕಿ ಆತನಿಗೆ ಮಾರಣಾಂತಿಕ ಹಲ್ಲೆ ನಡೆಸಿ ವಾಹನಕ್ಕೂ ಹಾನಿ ಮಾಡಿ, ಆತನಲ್ಲಿದ್ದ ಹಣವನ್ನು ಲೂಟಿ ಮಾಡಿದ್ದಾರೆ. ಪೊಲೀಸ್ ಠಾಣೆಯ ಕೆಲವೇ ಅಂತರದಲ್ಲಿ ಇಂತಹ ಒಂದು ಘಟನೆ ನಡೆದಿರುವುದು ನಿಜಕ್ಕೂ ಅಚ್ಚರಿದಾಯಕವಾಗಿದೆ ಎಂದು ಇಜಾಝ್ ಅಹ್ಮದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಮಧ್ಯೆ ಪೊಲೀಸರ ಸಕಾಲಿಕ ಮಧ್ಯ ಪ್ರವೇಶದಿಂದಾಗಿ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಆದರೆ ಖರೀದಿ, ವೈದ್ಯಕೀಯ ಮತ್ತು ಸಾಗಾಟದ ಸೂಕ್ತ ದಾಖಲೆಗಳನ್ನು ಹೊಂದಿದ್ದರೂ ಪೊಲೀಸರು ಜಾನುವಾರು ವ್ಯಾಪಾರಿಯ ವಿರುದ್ಧ ಗೋಕಳ್ಳತನ ಪ್ರಕರಣವನ್ನು ದಾಖಲಿಸಿರುವುದು ವಿಪರ್ಯಾಸ. ಜೊತೆಗೆ ಪೊಲೀಸರು ಘಟನೆಗೆ ಸಂಬಂಧಿಸಿ, ಹಲ್ಲೆಗೊಳಗಾದ ಸಂತ್ರಸ್ತನ ಹೇಳಿಕೆಯನ್ನೂ ಸಮರ್ಪಕವಾಗಿ ದಾಖಲಿಸಿಲ್ಲ ಎಂದು ಆರೋಪಿಸಿದ್ದಾರೆ.

ಸಕ್ರಮವಾಗಿ ಸಾಗಾಟ ನಡೆಸುತ್ತಿದ್ದ ವ್ಯಾಪಾರಿಯ ಮೇಲೆ ದಾಳಿ ನಡೆಸಿದ ಮತ್ತು ಜಿಲ್ಲೆಯ ಶಾಂತಿ ಕದಡಲು ಯತ್ನಿಸಿದ ಕಿಡಿಗೇಡಿಗಳ ವಿರುದ್ಧ ಪೊಲೀಸರು ಕಠಿಣ ಕಾನೂನು ಕ್ರಮ ಜರಗಿಸಬೇಕು. ಸಂಘಪರಿವಾರದ ಅನೈತಿಕ ಪೊಲೀಸ್‌ಗಿರಿಯನ್ನು ಮಟ್ಟ ಹಾಕಲು ಕ್ರಮಕೈಗೊಳ್ಳಬೇಕು. ಅದೇ ರೀತಿ ಜಾನುವಾರು ವ್ಯಾಪಾರಿಗಳಿಗೆ ಪೊಲೀಸ್ ಇಲಾಖೆಯು ಸೂಕ್ತ ರಕ್ಷಣೆಯನ್ನು ಖಾತರಿಪಡಿಸಬೇಕೆಂದು ಇಜಾಝ್ ಅಹ್ಮದ್ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X