ಪುತ್ತೂರು : ವಿದ್ಯುತ್ ಆಘಾತಕ್ಕೆ ಯುವಕ ಬಲಿ

ಪುತ್ತೂರು: ಪಂಪು ಚಾಲೂ ಮಾಡುತ್ತಿದ್ದ ಸಂದರ್ಭ ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದಲ್ಲಿ ರವಿವಾರ ನಡೆದಿದೆ.
ಕೆಯ್ಯೂರಿನಲ್ಲಿರುವ ಉದ್ದೋಳೆ ಕಾಂಪ್ಲೆಕ್ಸ್ ಮಾಲಕ, ಕೃಷಿಕರಾದ ರಮೇಶ್ ಗೌಡ (25) ಮೃತರು ಎಂದು ಗುರುತಿಸಲಾಗಿದೆ.
ರಮೇಶ್ ಅವರು ತನ್ನ ತೋಟದಲ್ಲಿ ಪಂಪು ಚಾಲೂ ಮಾಡಲು ಸ್ವಿಚ್ ಹಾಕುತ್ತಿದ್ದ ವೇಳೆ ವಿದ್ಯುತ್ ಸಂಚಾರ ಆಗಿ ಇದರಿಂದ ಗಂಭೀರ ಗಾಯಗೊಂಡ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅವರು ಕೆಯ್ಯೂರು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಮೃತರು ತಾಯಿ, ಪತ್ನಿ, ಓರ್ವ ಪುತ್ರ, ಇಬ್ಬರು ಸಹೋದರರು ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





